ಧಾರವಾಡ: 2018 ಬ್ಯಾಚ್ ಐಪಿಎಸ್ ಅಧಿಕಾರಿ ಗುಂಜನ ಆರ್ಯ ನಗರದ ಜಿಲ್ಲಾ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಜುಲೈ 16ರಂದು ಎಸ್.ಪಿ.ಡಾ. ಗೋಪಾಲ ಬ್ಯಾಕೋಡ್ ರಿಂದ ಅಧಿಕಾರ ಸ್ವೀಕರಿಸಿದರು.
ಗುಂಜನ್ ಆರ್ಯ ಮೂಲತಃ ಮಧ್ಯಪ್ರದೇಶ ರಾಜ್ಯದವರಾಗಿದ್ದು, 2018 ರ ಕರ್ನಾಟಕ ಕೇಡರ್ ಐಪಿಎಸ್ ಅಧಿಕಾರಿಯಾಗಿದ್ದಾರೆ. ಈ ಮೊದಲು ಅವರು ರಾಯಚೂರು ಜಿಲ್ಲಾ ಉಪ ಪೊಲೀಸ್ ವರಿಷ್ಠಾಧಿಕಾರಿಯಾಗಿ, ಚಿಕ್ಕಮಂಗಳೂರು ಹೆಚ್ಚುವರಿ ಪೊಲೀಸ ವರಿಷ್ಠಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದಾರೆ.
ಇದನ್ನೂ ಓದಿ: ತಮ್ಮದೇ ರಾಜಕೀಯ ಪಕ್ಷ ಘೋಷಿಸಿದ ಇಮ್ರಾನ್ ಖಾನ್ ಮಾಜಿ ಪತ್ನಿ ರೆಹಮ್ ಖಾನ್
ಧಾರವಾಡ ಎಸ್.ಪಿ. ಆಗಿ ನೇಮಕವಾಗುವ ಮೊದಲು ಅವರು ಬೆಂಗಳೂರಿನಲ್ಲಿ ರಾಜ್ಯ ಆಂತರಿಕ ಭದ್ರತಾ ವಿಭಾಗದಲ್ಲಿ ಪೊಲೀಸ್ ವರಿಷ್ಠಾಧಿಕಾರಿಯಾಗಿ ಸೇವೆಯಲ್ಲಿದ್ದರು.
ಇದನ್ನೂ ನೋಡಿ: ಸಾರ್ವತ್ರಿಕ ಮುಷ್ಕರ | ಕೇಂದ್ರ – ರಾಜ್ಯ ಸರ್ಕಾರದ ನೀತಿಗಳ ವಿರುದ್ಧ ಸಿಡಿದೆದ್ದ ರೈತ – ಕಾರ್ಮಿಕರು Janashakthi
