ಪೆರೋಲ್‌ ಮೇಲೆ ಹೊರಬಂದ ಅತ್ಯಾಚಾರ, ಕೊಲೆ ಆರೋಪಿ ಗುರ್ಮಿತ್‌ ಸಿಂಗ್‌; ಖಡ್ಗದಿಂದ ಕೇಕ್ ಕತ್ತರಿಸಿ ಸಂಭ್ರಮ

ನವದೆಹಲಿ: ಅತ್ಯಾಚಾರ ಪ್ರಕರಣದಡಿ ಜೈಲು ಶಿಕ್ಷೆಗೆ ಒಳಗಾಗಿರುವ ಗುರ್ಮೀತ್ ಸಿಂಗ್ 40 ದಿನಗಳು ಪೆರೋಲ್‌ ನಡಿ ಜೈಲಿನಿಂದ ಹೊರಬಂದಿದ್ದು, ಕೇಕ್‌ ಕತ್ತಿರಿಸಿ ಸಂಭ್ರಮಾಚರಣೆ ಮಾಡಿರುವ ಘಟನೆ ನಡೆದಿದೆ.

ಡೇರಾ ಸಚ್ಚಾಸೌಧದ ಮುಖ್ಯಸ್ಥ ಗುರ್ಮೀತ್‌ ರಾಮ್‌ ರಹೀಮ್‌ ಖಡ್ಗದಿಂದ ಕೇಕ್ ಕತ್ತರಿಸಿರುವ ಫೋಟೊ ಹಾಗೂ ವಿಡಿಯೋ ಎಲ್ಲೆಡೆ ಹರಿದಾಡುತ್ತಿದೆ. ಈತನಿಗೆ ಆಶ್ರಮದಲ್ಲಿ ಇಬ್ಬರು ಮಹಿಳಾ ಅನುಯಾಯಿಗಳ ಮೇಲೆ ಅತ್ಯಾಚಾರ ಮತ್ತು ಕೊಲೆ ಆರೋಪದಡಿ 20 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ. ಶನಿವಾರ ಹರಿಯಾಣದ ರೋಹ್ಟಕ್ ಜಿಲ್ಲೆಯ ಸುನಾರಿಯಾ ಜೈಲಿನಿಂದ ಪೆರೋಲ್ ಮೇಲೆ ಹೊರ ಬಂದಿದ್ದಾರೆ. ಉತ್ತರ ಪ್ರದೇಶದ ಬಾಗ್‌ಪತ್‌ನಲ್ಲಿರುವ ಬರ್ನಾವಾ ಆಶ್ರಮಕ್ಕೆ ಭೇಟಿ ನೀಡಿದ್ದನು.

ಇದನ್ನು ಓದಿ: ಹರ್ಯಾಣದ ಕ್ರೀಡಾ ಸಚಿವರ ಲೈಂಗಿಕ ಕಿರುಕುಳದ ಪ್ರಕರಣದಲ್ಲಿ ನ್ಯಾಯಯುತ ತನಿಖೆಗೆ ಅಡ್ಡಿ ನಿವಾರಿಸಲು ಮಧ್ಯಪ್ರವೇಶಿಸಬೇಕು – ಐಒಎ ಅಧ್ಯಕ್ಷೆಗೆ ಬಹಿರಂಗ ಪತ್ರ

ಜನವರಿ 25ರಂದು ಮಾಜಿ ಡೇರಾ ಮುಖ್ಯಸ್ಥ ಷಾ ಸತ್ನಾಮ್ ಸಿಂಗ್ ಅವರ ಜನ್ಮ ವಾರ್ಷಿಕೋತ್ಸವ ಸಮಾರಂಭದಲ್ಲಿ ಭಾಗವಹಿಸಲು ಅವಕಾಶ ಕೋರಿ ಗುರ್ಮೀತ್ ಸಿಂಗ್ ಪೆರೋಲ್‌ ಪಡೆದನು.

ಗುರ್ಮೀತ್‌ ಸಿಂಗ್‌ ಕತ್ತಿಯಿಂದ ಕೇಕ್‌ ಕತ್ತರಿಸಿರುವುದು ಚರ್ಚೆಗೆ ಗ್ರಾಸವಾಗಿದ್ದು, ಶಸ್ತ್ರಾಸ್ತ್ರಗಳ ಕಾಯಿದೆಯ ಅಡಿಯಲ್ಲಿ ಕ್ರಮಕೈಗೊಳ್ಳಬೇಕೆಂದು ಆಗ್ರಹ ಕೇಳಿ ಬರುತ್ತಿದೆ. “ಐದು ವರ್ಷಗಳ ನಂತರ ಈ ರೀತಿ ಆಚರಿಸಲು ಅವಕಾಶ ಸಿಕ್ಕಿದೆ. ಹಾಗಾಗಿ ಕನಿಷ್ಠ ಐದು ಕೇಕ್‌ಗಳನ್ನಾದರೂ ಕತ್ತರಿಸಬೇಕು. ಇದು ಮೊದಲ ಕೇಕ್” ಎಂದು ವೀಡಿಯೋ ಸಿಂಗ್‌ ಹೇಳಿಕೆ ನೀಡಿದ್ದಾನೆ.

ಕಳೆದ 14 ತಿಂಗಳ ಅವಧಿಯಲ್ಲಿ ಇದು ನಾಲ್ಕನೇ ಬಾರಿ ಮತ್ತು ಮೂರು ತಿಂಗಳೊಳಗೆ ಎರಡನೇ ಬಾರಿಗೆ ಪೆರೋಲ್ ಮೇಲೆ ಜೈಲಿನಿಂದ ಬಂದಿದ್ದಾನೆ. ಇದಕ್ಕೂ ಮೊದಲು, ಹರಿಯಾಣ ಪಂಚಾಯತ್ ಚುನಾವಣೆ ಮತ್ತು ಆದಂಪುರ ವಿಧಾನಸಭಾ ಉಪಚುನಾವಣೆಗೆ ಮುಂಚಿತವಾಗಿ ಅಕ್ಟೋಬರ್ 2022 ರಲ್ಲಿ 40 ದಿನಗಳ ಕಾಲ ಪೆರೋಲ್ ಮೇಲೆ ಬಿಡುಗಡೆ ಮಾಡಲಾಯಿಗಿತ್ತು.

ಬಿಜೆಪಿ ನಾಯಕರೊಂದಿಗೆ ವೇದಿಕೆ ಹಂಚಿಕೊಂಡ ಗುರ್ಮೀತ್‌ ಸಿಂಗ್‌

ಹರಿಯಾಣ ಮತ್ತು ಇತರೆ ಕೆಲವು ರಾಜ್ಯಗಳಲ್ಲಿ ತಮ್ಮ ಪಂಥದ ಸ್ವಯಂಸೇವಕರು ಆಯೋಜಿಸಿದ್ದ ಬೃಹತ್‌ ಸ್ವಚ್ಛತಾ ಅಭಿಯಾನದಲ್ಲಿ ಗುರ್ಮೀತ್‌ ಸಿಂಗ್‌ ಭಾಗಿಯಾಗಿರುವುದು ವರದಿಯಾಗಿದ್ದು, ಉದ್ಘಾಟನಾ ಕಾರ್ಯಕ್ರಮ ವರ್ಚ್ಯುವಲ್‌ ಆಗಿ ನಡೆದಿದ್ದು, ಕಾರ್ಯಕ್ರಮದಲ್ಲಿ ರಾಜ್ಯಸಭಾ ಸಂಸದ ಕ್ರಿಶನ್ ಲಾಲ್ ಪನ್ವಾರ್ ಮತ್ತು ಮಾಜಿ ಸಚಿವ ಕ್ರಿಶನ್ ಕುಮಾರ್ ಬೇಡಿ ಸೇರಿದಂತೆ ಹರಿಯಾಣದ ಕೆಲವು ಹಿರಿಯ ಬಿಜೆಪಿ ನಾಯಕರು ಭಾಗವಹಿಸಿದ್ದರು.

ಉದ್ಘಾಟನಾ ಸಮಾರಂಭದಲ್ಲಿ ಬಿಜೆಪಿ ನಾಯಕರು ಮತ್ತು ಇತರರು, ಜನವರಿ 25ರಂದು ನಡೆಯಲಿರುವ ಡೇರಾ ಮಾಜಿ ಮುಖ್ಯಸ್ಥ ಶಾ ಸತ್ನಾಮ್ ಸಿಂಗ್ ಜನ್ಮದಿನಕ್ಕೆ ಶುಭಾಶಯ ಕೋರಿದರು.

ಇಲ್ಲಿ ಕ್ಲಿಕ್‌ ಮಾಡಿ : ಜನಶಕ್ತಿ ಮೀಡಿಯಾ ವಾಟ್ಸ್‌ಪ್‌ ಗುಂಪು ಸೇರಲು ಈ ಲಿಂಕ್‌ ಕ್ಲಿಕ್‌ ಮಾಡಿ

Donate Janashakthi Media

Leave a Reply

Your email address will not be published. Required fields are marked *