ಬೆಂಗಳೂರು: ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಹೊಳೆನರಸೀಪುರದ ಜೆಡಿಎಸ್ ಶಾಶಕ ಹೆಚ್.ಡಿ.ರೇವಣ್ಣಗೆ ಜಾಮೀನು ಮಂಜೂರಾಗಿದೆ.42ನೇ ಎಸಿಎಂಎಂ ನ್ಯಾಯಾಲಯ ಇಂದು ಸೋಮವಾರ ಜಾಮೀನು ಮಂಜೂರು ಮಾಡಿ ಆದೇಶಿಸಿದೆ.
ಕಳೆದೆರಡು ದಿನಗಳ ಹಿಂದೆ ಪ್ರಕರಣ ಸಂಬಂಧ ಆರೋಪಿ ರೇವಣ್ಣರ ಜಾಮೀನು ಅರ್ಜಿಯ ವಿಚಾರಣೆಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ನಡೆದಿತ್ತು. ಈ ಕುರಿತು ಇದೀಗ ಕೋರ್ಟ್ನಲ್ಲಿ ವಿಚಾರಣೆ ಮುಕ್ತಾಯಗೊಂಡಿದ್ದು, ರೇವಣ್ಣಗೆ ಷರತ್ತು ವಿಧಿಸಿ ಕೋರ್ಟ್ ಜಾಮೀನು ಮಂಜೂರು ಮಾಡಿದೆ.ಇಂದು ಜಾಮೀನು ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಜೆ.ಪ್ರೀತ್ ಪೀಠ ಕೈಗೆತ್ತಿಕೊಂಡು ವಾದ-ಪ್ರತಿವಾದ ಆಲಿಸಿತು.
ಇದನ್ನೂ ಓದಿ: ಪ್ರಜ್ವಲ್ ರೇವಣ್ಣ ವಿರುದ್ಧ ವಾರಂಟ್ ಜಾರಿ
ರೇವಣ್ಣ ಪರ ಹಿರಿಯ ವಕೀಲ ಸಿ.ವಿ.ನಾಗೇಶ್ ವಾದ ಮಂಡಿಸಿದರೆ, ಎಸ್ಐಟಿ ಪರವಾಗಿ ಎಸ್‍ಪಿಪಿ ಜಾಯ್ನಾ ಕೊಠಾರಿ ಪ್ರತಿವಾದ ಮಂಡಿಸಿದರು. ಈ ಹಿಂದೆ ಕೆ.ಆರ್.ನಗರ ಸಂತ್ರಸ್ತೆಯೋರ್ವಳ ಅಪಹರಣ ಆರೋಪದ ಕೇಸ್ನಲ್ಲೂ ರೇವಣ್ಣ ಅವರಿಗೆ ಜಾಮೀನು ಸಿಕ್ಕಿದೆ.
ಇದನ್ನೂ ನೋಡಿ: ಪ್ರಜ್ವಲ್ ಲೈಂಗಿಕ ಹತ್ಯಾಕಾಂಡ : ವಿಶೇಷ ನ್ಯಾಯಾಲಯ ಸ್ಥಾಪನೆ ಅಗತ್ಯ – ಹೈಕೋರ್ಟ್ ವಕೀಲ Janashakthi Media