ಬೆಂಗಳೂರು : ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖರ ಹೇಳಿಕೆಯನ್ನು ಬೆಂಬಲಿಸಿ ಇಂದು ಬೆಂಗಳೂರು ವಿವಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.
ಬೆಂಗಳೂರು ವಿಶ್ವವಿದ್ಯಾಲಯದ ಸ್ನಾತಕೋತ್ತರ ಮತ್ತು ಸಂಶೋಧನಾ ವಿದ್ಯಾರ್ಥಿಗಳ ಒಕ್ಕೂಟದಿಂದ ನಡೆದ ಪ್ರತಿಭಟನೆಯಲ್ಲಿ ನೂರಾರು ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ, ಪ್ರತಿಭಟನೆ ನಡೆಸಿದ್ದಾರೆ.
ಇದನ್ನೂ ಓದಿ : ಹಂಸಲೇಖರ ಸಾಮಾಜಿಕ ಅಂತರಂಗ
ಹಂಸಲೇಖ ಅವರ ವಿರುದ್ಧ ದಾಖಲಾಗಿರುವಂತಹ FIR ರದ್ದುಗೊಳಿಸಿ, ಟ್ರೋಲಿಗರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವಂತೆ ರಾಜ್ಯಪಾಲರಿಗೆ ಮನವಿ ಸಲ್ಲಿಸಿದ್ದಾರೆ. ಇನ್ನೂ ಇದು ಹಂಸಲೇಖ ಅವರ ವಿರುದ್ಧ ವ್ಯವಸ್ಥಿತವಾದಂತಹ ಷಡ್ಯಂತ್ರ ನಡೆದಿದೆ. ಹೀಗಾಗಿ ಅವರ ವಿರುದ್ಧ ದಾಖಲಾಗಿರುವ ಎಲ್ಲಾ ದೂರುಗಳನ್ನು ರದ್ದುಗೊಳಿಸಿ, ಅವರ ತೇಜೋವಧೆ ಮಾಡದಂತೆ ಬೆಂಗಳೂರು ವಿವಿ ವಿದ್ಯಾರ್ಥಿಗಳು ಆಗ್ರಹಿಸಿದ್ದಾರೆ.
ಜೊತೆಗೆ ಹಂಸಲೇಖಾ ಅವರಿಗೆ ಸೂಕ್ತ ಭದ್ರತೆ ಒದಗಿಸುವಂತೆ ಕುಲಪತಿ ಮೂಲಕ ರಾಜ್ಯಪಾಲರಿಗೆ ಮನವಿ ಮಾಡಿಕೊಂಡಿದ್ದಾರೆ.
ನಮಸ್ಕಾರ.