ಸಂಗೀತ ನಿರ್ದೇಶಕ ಹಂಸಲೇಖಗೆ ಜೀವಮಾನ ಶ್ರೇಷ್ಠ ಸಾಧನೆ ಪ್ರಶಸ್ತಿ

ಬೆಂಗಳೂರು : 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವದ ಸಮಾರೋಪ ಸಮಾರಂಭದಲ್ಲಿಕನ್ನಡದ ಖ್ಯಾತ ಗೀತರಚನೆಕಾರ ಮತ್ತು ಸಂಗೀತ ನಿರ್ದೇಶಕ ಹಂಸಲೇಖ ಅವರಿಗೆ ಜೀವಮಾನ ಶ್ರೇಷ್ಠ ಸಾಧನೆ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ. ಇಂದು ಬೆಂಗಳೂರಿನ ಲುಲು ಮಾಲ್‌ನಲ್ಲಿ ನಡೆಯಲಿದೆ.

ಈ ಸಂಬಂಧ ಇಂದು ಕರ್ನಾಟಕ ಚಲನಚಿತ್ರ ಅಕಾಡೆಮಿಯ ರಿಜಿಸ್ಟ್ರಾರ್‌ ವಿನೋದ್‌ ಚಂದ್ರ ಮತ್ತು ಚಿತ್ರೋತ್ಸವದ ಕಲಾತ್ಮಕ ನಿರ್ದೇಶಕರಾದ ಮುರಳಿ ಅವರು ಹಂಸಲೇಖ ಅವರನ್ನು ಭೇಟಿ ಮಾಡಿ, ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಆಹ್ವಾನಿಸಿದ್ದಾರೆ. ಹಂಸಲೇಖ ಅವರು ಕನ್ನಡ ಚಿತ್ರರಂಗಕ್ಕೆ ಸಲ್ಲಿಸಿರುವ ಸೇವೆಯನ್ನು ಗುರುತಿಸಿ ಅವರಿಗೆ ಜೀವಮಾನದ ಶ್ರೇಷ್ಠ ಸಾಧನೆ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ.

ಈ ಚಿತ್ರೋತ್ಸವದಲ್ಲಿ ಏಷ್ಯನ್‌ ಸಿನಿಮಾ, ಭಾರತೀಯ ಸಿನಿಮಾ ಮತ್ತು ಕನ್ನಡ ಸಿನಿಮಾ ಎಂಬ ಮೂರು ಸ್ಪರ್ಧಾ ವಿಭಾಗಗಳಿದ್ದು, ಈ ವಿಭಾಗಗಳಲ್ಲಿ ಸ್ಪರ್ಧಿಸಿ, ಪ್ರಶಸ್ತಿ ಗೆದ್ದವರಿಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಈ ಕಾರ್ಯಕಮದ ಅಧ್ಯಕ್ಷತೆಯನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್‌ ಗುಂಡೂರಾವ್‌ ವಹಿಸಲಿದ್ದಾರೆ. ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಡಾ.ಸಾಧು ಕೋಕಿಲ, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷರಾದ ಡಾ. ಜಯಮಾಲಾ, ಚಿತ್ರೋತ್ಸವದ ರಾಯಭಾರಿ ಪ್ರಕಾಶ್‌ ರಾಜ್‌ ಮುಂತಾದವರು ಭಾಗವಹಿಸಲಿದ್ದಾರೆ.

ಇದನ್ನೂ ಓದಿ : ‘ಲ್ಯಾಂಡ್ ಲಾರ್ಡ್’ ಸಿನಿಮಾಗೆ ತೆರಿಗೆ ವಿನಾಯಿತಿ ನೀಡುವಂತೆ ಸಿಎಂ ಸಿದ್ದರಾಮಯ್ಯ ಸೂಚನೆ

17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವಕ್ಕೆ ಜನವರಿ 30ರಂದು ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಿದ್ದರು.

ಕನ್ನಡದ ಮಟ್ಟಿಗೆ ಡಾ.ರಾಜಕುಮಾರ್ ಸಿನಿಮಾಗಳಲ್ಲಿ ಇವೆಲ್ಲವನ್ನೂ ನೋಡುವುದಕ್ಕೆ ಸಾಧ್ಯವಿತ್ತು. ಸಿನಿಮಾಗಳು ಮನರಂಜನೆಗೆ ಮಾತ್ರ ಸೀಮಿತವಾಗದೇ, ಸಮಾಜದ ಅಂಕುಡೊಂಕುಗಳನ್ನು ತಿದ್ದುವ, ವಾಸ್ತವ ಸ್ಥಿತಿಯನ್ನು ತೋರಿಸುವ ಕೆಲಸ ಮಾಡಬೇಕು.  ಅಸಮಾನತೆ, ಬಡತನ, ಸಿರಿತನ, ದಲಿತರು, ಹಿಂದುಳಿದವರು, ರೈತರು, ಕಾರ್ಮಿಕರು, ಅಲ್ಪಸಂಖ್ಯಾಾತರು, ಮಹಿಳೆಯರು ಕುರಿತಾಗಿ ಚಿತ್ರಗಳನ್ನು ಮಾಡಬೇಕು ಎಂದು ಸಿಎಂ ಸಿದ್ದರಾಮಯ್ಯ ಕರೆ ನೀಡಿದ್ದರು.

ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಚಿತ್ರೋತ್ಸವದ ರಾಯಭಾರಿ ಬಹುಭಾಷಾ ನಟ ಪ್ರಕಾಶ್ ರಾಜ್, ನಟಿ ರುಕ್ಕುಣಿ ವಸಂತ್, ಕನ್ನಡ ಚಿತ್ರರಂಗದ ಗಣ್ಯರು ಹಾಗೂ ದೇಶ-ವಿದೇಶಗಳ ಅತಿಥಿಗಳು ಉಪಸ್ಥಿತರಿದ್ದರು.

ಸಿನೆಪೊಲಿಸ್, ಲುಲುಮಾಲ್ ಜೊತೆಗೆ, ಕನ್ನಡ ಚಲನಚಿತ್ರ ಕಲಾವಿದರ ಸಂಘ ಮತ್ತು ಸುಚಿತ್ರಾ ಫಿಲಂ ಸೊಸೈಟಿಯಲ್ಲೂ‌ ಸಿನಿಮಾಗಳ ಸ್ಕ್ರೀನಿಂಗ್ ಇತ್ತು. ಉತ್ಸವದ ಸಂದರ್ಭದಲ್ಲಿ, ಬೆಂಗಳೂರಿನ ರಾಜಾಜಿನಗರದ ಲುಲುಮಾಲ್​ನಲ್ಲಿರುವ, ಸಿನೆಪೊಲಿಸ್ ಸ್ಕ್ರೀನ್​ಗಳಲ್ಲಿ ಸಿನಿಮಾಗಳ ಪ್ರದರ್ಶನಗಳು ನಡೆದವು.

ಚಿತ್ರೋತ್ಸವದಲ್ಲಿ 70 ದೇಶಗಳ ಸುಮಾರು 225 ಅತ್ಯುತ್ತಮ ಚಲನಚಿತ್ರಗಳು ಪ್ರದರ್ಶನಗೊಂಡವು. ಆಯಾ ದೇಶದ ಸ್ಥಿತಿ-ಗತಿ, ಜನಜೀವನ ಮತ್ತು ಸಂಸ್ಕೃತಿಯನ್ನು ಬಿಂಬಿಸಿದವು. ವಿಶ್ವದ ಪ್ರತಿಷ್ಠಿತ ಚಲನಚಿತ್ರೋತ್ಸವಗಳಲ್ಲಿ ಪಾಲ್ಗೊಂಡಿದ್ದ ಅತ್ಯುತ್ತಮ ಚಲನಚಿತ್ರಗಳು 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಭಾಗವಹಿಸಿವೆ.

ಇದನ್ನೂ ನೋಡಿ : ಬೆಂಗಳೂರು ಚಲನಚಿತ್ರೋತ್ಸವ| ಪ್ಯಾಲೆಸ್ತೀನ್‌ ಸಿನಿಮಾಗಳಿಗೆ ನಿರ್ಬಂಧ – ಪ್ರಕಾಶ್ ರಾಜ್ ಆಕ್ರೋಶ Janashakthi Media

Donate Janashakthi Media

Leave a Reply

Your email address will not be published. Required fields are marked *