ಬೆಂಗಳೂರು: ಹನುಮಾನ್ ಚಾಲೀಸಾ ಹಾಕಿದ್ದಕ್ಕಾಗಲೀ ಅಥವಾ ಅಜಾನ್ ಪ್ರಾರ್ಥನೆಗೆ ಅಡ್ಡಿಯಾಗುತ್ತಿದೆ ಎಂದು ಅಂಗಡಿ ಮಾಲೀಕನ ಮೇಲೆ ಹಲ್ಲೆ ನಡೆದಿಲ್ಲ ಎಂದು ಪೊಲೀಸರು ಸ್ಪಷ್ಟನೆ ನೀಡಿದ್ದಾರೆ. ಹನುಮಾನ್
ನಗರದ ನಗರತಪೇಟೆಯಲ್ಲಿ ಹನುಮಾನ್ ಜಾಲೀಸಾ ಹಾಕಿದ್ದಕ್ಕೆ ಮೊಬೈಲ್ ಸ್ಪೇರ್ ಪಾರ್ಟ್ಸ್ ಅಂಗಡಿಯ ಮಾಲೀಕನ ಮೇಲೆ ಹಲ್ಲೆ ನಡೆಸಲಾಗಿದೆ ಎಂಬ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.
ಘಟನೆಯ ಹಿನ್ನೆಲೆ : ಹಲಸೂರು ಗೇಟ್ ಠಾಣೆ ವ್ಯಾಪ್ತಿಯ ನಜರತ್ ಪೇಟೆಯಲ್ಲಿ ಈ ಘಟನೆ ನಡೆದಿದೆ. ನಜರತ್ ಪೇಟೆಯ ಜುಮ್ಮಾ ಮಸೀದಿ ರಸ್ತೆಯಲ್ಲಿ ಮುಖೇಶ್ ಎಂಬುವವರು ಮೊಬೈಲ್ ಸರ್ವೀಸ್ ಅಂಗಡಿ ಹೊಂದಿದ್ದು, ಭಾನುವಾರ ಸಂಜೆ ಅಂಗಡಿಯಲ್ಲಿ ಹನುಮಾನ್ ಚಾಲೀಸಾ ಹಾಕಿದ್ದಕ್ಕೆ ಹಲ್ಲೆ ನಡೆಸಿದ್ದಾಗಿ ಆರೋಪ ಕೇಳಿಬಂದಿತ್ತು.
ಘಟನೆ ಸಂಬಂಧ ಭಾನುವಾರ ರಾತ್ರಿ 10.30ಕ್ಕೆ ಕಬ್ಬನ್‌ಪೇಟೆ ನಿವಾಸಿ ಜಿ ಮುಖೇಶ್ ಅವರು, ಸುಲೇಮಾನ್, ಶಹನವಾಜ್, ರೋಹಿತ್, ದ್ಯಾನೀಶ್, ತರುಣ ಹಾಗೂ ಇತರರ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದರು. ದೂರು ಹಿನ್ನೆಲೆಯಲ್ಲಿ ಹಲಸೂರು ಗೇಟ್ ಪೊಲೀಸರು ಐಪಿಸಿ ಸೆಕ್ಷನ್ 506, 504, 149, 307, 323 ಹಾಗೂ 324ರ ಅಡಿಯಲ್ಲಿ ಎಫ್ ಐಆರ್ ದಾಖಲಿಸಿದ್ದರು. ಘಟನೆ ಸಂಬಂಧ ಮೂವರು ಆರೋಪಿಗಳನ್ನು ಬಂಧನಕ್ಕೊಳಪಡಿಸಿದ್ದಾರೆ. ಶಹನವಾಜ್, ಸುಲೇಮಾನ್ ಮತ್ತು ರೋಹಿತ್ ಬಂಧಿತರು ಎನ್ನಲಾಗಿದೆ. ದ್ಯಾನೀಶ್ ಮತ್ತು ತರುಣ್ ಎಂಬುವವರು ಪರಾರಿಯಾಗಿದ್ದು, ಇಬ್ಬರಿಗಾಗಿ ಶೋಧ ಕಾರ್ಯಾಚರಣೆ ಮುಂದುವರೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ : ‘ಕಾಂಗ್ರೆಸ್ ಸರಕಾರ ಇದ್ದಿದ್ದರೆ ಕಲ್ಲು ಹೊಡೆಯಬಹುದಿತ್ತು’ ತೇಜಸ್ವಿ ಸೂರ್ಯ ಆಡಿಯೋ ವೈರಲ್
ಘಟನೆ ತಿರುಚಿದ ತೇಜಸ್ವಿಸೂರ್ಯ : ಈ ಘಟನೆಯನ್ನು ತನ್ನ ಚುನಾವಣಾ ಲಾಭಕ್ಕಾಗಿ ಬಳಸಿಕೊಳ್ಳಲು ಸಂಸದ ತೇಜಸ್ವಿ ಸೂರ್ಯ ಘಟನೆಯನ್ನು ತಿರುಚಿದ್ದಾರೆ ಎಂದು ಸಾರ್ವಜನಿಕರು ಮಾತನಾಡಿಕೊಳ್ಳುತ್ತಿದ್ದಾರೆ. ಹಲ್ಲೊಗೊಳಗಾದ ಮುಖೇಶ್ ಮೊದಲಿಗೆ ನೀಡಿದ್ದ ದೂರಿನಲ್ಲಿ ಹನುಮಾನ ಚಾಲಸ್ ಅಥವಾ ಅಜಾನ್ ಕುರಿತು ಉಲ್ಲೇಖಿಸಿರಲಿಲ್ಲ ಹಲ್ಲೆಯಾಗಿದೆ ಎಂದಷ್ಟೆ ಬರೆದಿದ್ದರು. ತೇಜಸ್ವಿ ಸೂರ್ಯ ಇವರ ಮನೆಗೆ ಭೇಟಿ ನಂತರ ಮತ್ತೊಂದು ದೂರು ಬರೆಸಿದ್ದಾಗ ಅದರಲ್ಲಿ ಹನುಮಾನ್ ಚಾಲೀಸ್ ಹಾಕಿದ್ದಕ್ಕೆ ಹಲ್ಲೆ ಮಾಡಿದ್ದಾರೆ ಎಂದು ಬರೆಯಿಸಿದ್ದಾರೆ.
ಈ ಘಟನೆಯನ್ನು ಕೋಮುದ್ವೇ಼ಕ್ಕೆ ತಿರುಗಿಸಿ ಅಶಾಂತಿ ಸೃಷ್ಟಿಸುವುದು ತೇಜಸ್ವಿ ಸೂರ್ಯರ ಉದ್ದೇಶ ಆಗಿತ್ತು ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.