ನಗರತ್‌ಪೇಟೆ | ಹಲ್ಲೆ ಪ್ರಕರಣ: ತೇಜಸ್ವಿ ಸೂರ್ಯ ವಿರುದ್ಧ ದೂರು

ಬೆಂಗಳೂರು:  ಹನುಮಾನ್‌ ಚಾಲೀಸಾ ಹಾಕಿದ್ದಕ್ಕೆ ಅಂಗಡಿಯಾತನ ಮೇಲೆ ಹಲ್ಲೆ ಮಾಡಿದ ಕೃತ್ಯವನ್ನು ಖಂಡಿಸಿ ಬಿಜೆಪಿ ಬೃಹತ್‌ ಪ್ರತಿಭಟನೆಯನ್ನು ನಡೆಸಿದೆ. ತೇಜಸ್ವಿ ಸೂರ್ಯ

ಲೋಕಸಭೆಯ ಚುನಾವಣೆಯ ಹಿನ್ನೆಲೆಯಲ್ಲಿ ಧಾರ್ಮಿಕ ಭಾವನೆಗಳನ್ನು ಕೆರಳಿಸುವ ದುರುದ್ದೇಶದಿಂದ ನಗರದ ನಗರತ್‌ಪೇಟೆಯಲ್ಲಿ ಪ್ರತಿಭಟನೆ ನಡೆಸಲು ಪ್ರಚೋದಿಸುವ ಹೇಳಿಕೆ ನೀಡಿ, ಕೋಮು ದ್ವೇಷ ಹರಡಲು ಯತ್ನಿಸಿದ ಬಿಜೆಪಿ ಸಂಸದ ತೇಜಸ್ವಿಸೂರ್ಯ ವಿರುದ್ಧ ಕಾಂಗ್ರೆಸ್ ಚುನಾವಣಾ ಆಯೋಗಕ್ಕೆ ಮಂಗಳವಾರ ದೂರು ನೀಡಿದೆ.

ಈ ಕುರಿತು ಕಾಂಗ್ರೆಸ್‌ನ ಕಾನೂನು ಘಟಕದ ಪ್ರಧಾನ ಕಾರ್ಯದರ್ಶಿ ಸೂರ್ಯ ಮುಕುಂದರಾಜ್ ಆಯೋಗದ ಕಚೇರಿಗೆ ತೆರಳಿ ದೂರು ನೀಡಿದ್ದು, ಬೆಂಗಳೂರಿನ ನಗರತ್‌ಪೇಟೆ ಅಂಗಡಿ ಮಾಲಕರೊಬ್ಬರ ಮೇಲೆ ನಡೆದ ಹಲ್ಲೆ ಪ್ರಕರಣವನ್ನು ಕೋಮು ದ್ವೇಷ ಮೂಡಿಸುವ ಸಲುವಾಗಿ ಬಿಜೆಪಿಯ ನಾಯಕರು ತಿರುಚುತ್ತಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಮಾ.18ರಂದು ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಮತ್ತು ಬಸವನಗುಡಿ ಶಾಸಕ ರವಿಸುಬ್ರಹ್ಮಣ್ಯ ಭೇಟಿ ನೀಡಿ ಅಂಗಡಿಯ ಮುಂದೆ ಗುಂಪು ಸೇರಿಸಿ ಮಾ.19ರ ಮಧ್ಯಾಹ್ನ 12ಗಂಟೆಗೆ ಹನುಮಾನ್ ಚಾಲೀಸ ಪಠಣೆ ಮಾಡಲು ಕರೆ ನೀಡಿ ಧಾರ್ಮಿಕ ಘೋಷಣೆಗಳನ್ನು ಕೂಗಿರುತ್ತಾರೆ. ಸುಪ್ರೀಕೋರ್ಟ್ ನ ಆದೇಶ ಮತ್ತು ಚುನಾವಣಾ ಆಯೋಗದ ಪ್ರಕಾರ ಚುನಾವಣೆಯ ಸಂದರ್ಭದಲ್ಲಿ ಕೋಮು, ಮತ, ಧಾರ್ಮಿಕ ಭಾವನೆಗಳನ್ನು ಕೆರಳಿಸುವಂತಹ ಕೃತ್ಯವೆಸಗುವುದು ಅಪರಾಧ. ನೀತಿ ಸಂಹಿತೆ ಉಲ್ಲಂಘಿಸಿ ಪ್ರತಿಭಟನೆಗೆ ಕರೆ ನೀಡಿರುವ ತೇಜಸ್ವಿ ಸೂರ್ಯ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಕೋರುತ್ತೇನೆ ಎಂದು ಅವರು ದೂರಿನಲ್ಲಿ ತಿಳಿಸಿದ್ದಾರೆ.

ಇದನ್ನು ಓದಿ : ಬಂಡಾಯದ ಬುಗಿಲು! ಒಡೆದ ಮನೆಯಾದ ಬಿಜೆಪಿ?

ನಗರ್ತಪೇಟೆಯಲ್ಲಿನ ಹನುಮಾನ್‌ ಚಾಲೀಸಾ ಹಲ್ಲೆ ಪ್ರಕರಣ; ತೇಜಸ್ವಿ ಸೂರ್ಯ ವಿರುದ್ಧ ದೂರುಏನಿದು ಹಲ್ಲೆ ಪ್ರಕರಣ?

ಭಾನುವಾರ ಸಾಯಂಕಾಲ 6.15ರ ಸುಮಾರಿಗೆ ಐದು ಮಂದಿ ನಗರತ್ ಪೇಟೆಯಲ್ಲಿನ ಮೊಬೈಲ್‌ ಅಂಗಡಿಗೆ ಬಂದಿದ್ದಾರೆ. ಅಲ್ಲಿ ಹಿಂದು ದೇವರ ಭಜನೆ ಹಾಕಿದ್ದರಿಂದ ಬಂದ್‌ ಮಾಡಲು ಹೇಳಿದ್ದಾರೆ. ಅದಕ್ಕೆ ಅಂಗಡಿಯಾತ ಮುಖೇಶ್‌, ನನ್ನ ಅಂಗಡಿ ನನ್ನ ಇಷ್ಟ ಎಂದು ವಿರೋಧ ಮಾಡಿದ್ದಾರೆ. ಇದರಿಂದ ಸಿಟ್ಟಿಗೆದ್ದ ಯುವಕರ ಗುಂಪು ಮುಖೇಶ್‌ ಮೇಲೆ ದಾಳಿ ಮಾಡಿದ್ದಾರೆ. ಮುಖೇಶ್‌ ಸಹ ಆವೇಶದಿಂದ ಪ್ರತಿದಾಳಿ ಮಾಡಿದ್ದಾರೆ. ಆದರೆ, ಆರೋಪಿಗಳು ನಾಲ್ಕೈದು ಮಂದಿ ಇದ್ದಿದ್ದರಿಂದ ಮುಖೇಶ್‌ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದಾರೆ. ಈ ಎಲ್ಲ ದೃಶ್ಯಾವಳಿಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ಪ್ರಕರಣ ಸಂಬಂಧ ದೂರು ದಾಖಲಾಗಿದ್ದು, ಈವರೆಗೆ ಒಟ್ಟು ಐದು ಜನ ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ಇನ್ನೊಬ್ಬ ಆರೋಪಿಯನ್ನು ಬಂಧಿಸುವುದಾಗಿ ಭರವಸೆ ನೀಡಲಾಗಿದೆ.

 

ಪ್ರತಿಭಟನೆ ನಡೆಸಿ ಕೈಬಿಟ್ಟ ಬಿಜೆಪಿ

ಈ ಸಂಬಂಧ ತಪ್ಪಿತಸ್ಥರನ್ನು ಬಂಧಿಸಿ ಕಠಿಣ ಶಿಕ್ಷೆಗೆ ಒಳಪಡಿಸಬೇಕು ಎಂದು ಆಗ್ರಹಿಸಿ ಬಿಜೆಪಿ ಬೃಹತ್‌ ಪ್ರತಿಭಟನೆ ನಡೆಸಿತ್ತು. ಸಂಸದ ತೇಜಸ್ವಿ ಸೂರ್ಯ ಹಾಗೂ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದ್ದು, ಘಟನಾ ಸ್ಥಳದಲ್ಲಿ ಜೈ ಶ್ರೀರಾಮ್‌  ಘೋಷಣೆ ಕೂಗಲಾಗಿತ್ತು. ಶೋಭಾರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದರು. ತೇಜಸ್ವಿ ಸೂರ್ಯ ಅವರು ಪೊಲೀಸರಿಗೆ ಗುರುತು ಸಿಗದಂತೆ ಕ್ಯಾಪ್‌ ಹಾಗೂ ಮುಖಕ್ಕೆ ಮಾಸ್ಕ್‌ ಹಾಕಿಕೊಂಡು ಸ್ಥಳಕ್ಕೆ ಬಂದಿದ್ದರು. ಸಾವಿರಾರು ಸಂಖ್ಯೆಯಲ್ಲಿ ಹಿಂದುಗಳು ಸೇರಿ ಪ್ರತಿಭಟನೆಯನ್ನು ನಡೆಸಿದ್ದರು. ಆಗ ಪೊಲೀಸ್‌ ಹಿರಿಯ ಅಧಿಕಾರಿಗಳು ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದರಿಂದ ತಾತ್ಕಾಲಿಕವಾಗಿ ಪ್ರತಿಭಟನೆಯನ್ನು ವಾಪಸ್‌ ಪಡೆಯಲಾಗಿದೆ.

ಇದನ್ನು ನೋಡಿ : ಲೋಕಸಭಾ ಚುನಾವಣೆ 2024 : ಏ 19 ರಿಂದ 7 ಹಂತಗಳಲ್ಲಿ ಮತದಾನ| ಜೂನ್‌ 04ಕ್ಕೆ ಫಲಿತಾಂಶ Janashakthi Media

Donate Janashakthi Media

Leave a Reply

Your email address will not be published. Required fields are marked *