ಸಾಲಗಾರರ ಕಾಟ : ಒಂದೇ ಕುಟುಂಬದ 9 ಮಂದಿ ಆತ್ಮಹತ್ಯೆ

ಸಾಂಗ್ಲಿ: ಸಾಂಗ್ಲಿ ಜಿಲ್ಲೆಯ ಎರಡು ಮನೆಗಳಲ್ಲಿ ಒಂದೇ ಕುಟುಂಬದ ಒಂಬತ್ತು ಮಂದಿಯ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದ ಮೇಲೆ ಪೊಲೀಸರು 13 ಮಂದಿಯನ್ನು ಬಂಧಿಸಿದ್ದಾರೆ. ಬಂಧಿಸಲ್ಪಟ್ಟವರು ಕುಟುಂಬಕ್ಕೆ ಸಾಲ ನೀಡಿದವರಾಗಿದ್ದಾರೆ.

ಮಣಿಕ್‌ ವಾನ್ಮೋರೆ ಮತ್ತು ಪೋಪರ್‌ ವಾನ್ಮೋರೆ ಸದಸ್ಯರು ತಮ್ಮ ಪತ್ನಿಯರು, ಮಕ್ಕಳು ಮತ್ತು ತಾಯಿಯೊಂದಿಗೆ ಸೋಮವಾರ ಮಹೈಸಲ್‌ ಪಟ್ಟಣದ ತಮ್ಮ ಮನೆಗಳಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದರು.  ಸಹೋದರರ ಮನೆಗಳು ಒಂದು ಕಿಮೀ ಅಂತರದಲ್ಲಿವೆ. ಮಣಿಕ್‌ ಮನೆಯಲ್ಲಿ ಆರು ಮಂದಿ ಮೃತಪಟ್ಟಿದ್ದರೆ, ಮೂವರು ಪೋಪಟ್‌ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದರು. ಒಂದು ಮನೆಯಲ್ಲಿ ಪತ್ತೆಯಾದ ಸುಸೈಡ್‌ ನೋಟ್‌ನಲ್ಲಿ ಸಾಲದ ಹೊರೆ ಹಾಗೂ ಸಾಲಗಾರರ ಉಪಟಳದಿಂದ ಈ ಕ್ರಮಕೈಗೊಂಡಿದ್ದಾಗಿ ಬರೆಯಲಾಗಿದೆ.

ಈ ಸೋದರರು ಸಾಲ ಪಡೆದುಕೊಂಡಿದ್ದ 25 ಮಂದಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಇವರಲ್ಲಿ 13 ಮಂದಿಯನ್ನು ಬಂಧಿಸಲಾಗಿದ್ದು ಇವರಲ್ಲಿ ಕೆಲವರು ಈಗಾಗಲೇ ಸಾಲ ಪಡೆದವರನ್ನು ಪೀಡಿಸಿದ ಕುರಿತಾದ ಪ್ರಕರಣಗಳಿವೆ.

ಇದನ್ನೂ ಓದಿ :ಪಿಯು ಪರೀಕ್ಷಾ ಪ್ರವೇಶ ಪತ್ರ ನಿರಾಕರಣೆ – ವಿದ್ಯಾರ್ಥಿ ಆತ್ಮಹತ್ಯೆ

ಸಾಲಗಾರರ ಕಾಟದಿಂದ ಬೇಸತ್ತು ಆತ್ಮಹತ್ಯೆ :  “ವ್ಯಾನ್ಮೋರ್ ಸಹೋದರರು ಮತ್ತು ಇತರ ಕೆಲವು ಕುಟುಂಬ ಸದಸ್ಯರು ಆರೋಪಿ ಲೇವಾದೇವಿದಾರರಿಂದ ಹೆಚ್ಚಿನ ಬಡ್ಡಿದರದಲ್ಲಿ ಸಾಲ ಪಡೆದಿದ್ದರು. ಸಕಾಲಕ್ಕೆ ಬಡ್ಡಿಯನ್ನು ಪಾವತಿಸುತ್ತಿದ್ದರೂ, ಸಾಲ ನೀಡಿದವರು ಮತ್ತು ಇತರ ಆರೋಪಿಗಳು ಪ್ರತಿನಿತ್ಯ ಅವರಿಗೆ ಮೌಖಿಕವಾಗಿ ಮತ್ತು ದೈಹಿಕವಾಗಿ ಕಿರುಕುಳ ನೀಡುತ್ತಿದ್ದರು. ಕಿರುಕುಳ ಹೆಚ್ಚಾದ ನಂತರ, ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ” ಎಂದು ಸ್ಥಳೀಯ ಅಪರಾಧ ವಿಭಾಗದ ಪೊಲೀಸ್ ಇನ್ಸ್‌ಪೆಕ್ಟರ್ ಅಜಯ್ ಸಿಂಡ್ಕರ್ ಹೇಳಿದ್ದಾರೆ.

ಸಾಂಗ್ಲಿ ಜಿಲ್ಲೆಯ 15,000 ಜನಸಂಖ್ಯೆಯನ್ನು ಹೊಂದಿರುವ ಮಹೈಸಾಲ್ ಎಂಬ ಪಟ್ಟಣದಲ್ಲಿ ಆತ್ಮಹತ್ಯೆಯ ಸುದ್ದಿ ತಿಳಿಯುತ್ತಿದ್ದಂತೆ, ಆತ್ಮಹತ್ಯೆ ಮಾಡಿಕೊಂಡ ಕುಟುಂಬದ ಮನೆಗಳ ಬಳಿ ಸಾಕಷ್ಟು ಜನ ಜಮಾಯಿಸಿದ್ದರು. ಪೊಲೀಸರು ಆಗಮಿಸಿ ಶವಗಳನ್ನು ಹೊರತೆಗೆದು, ಶವ ಪರೀಕ್ಷೆಗಾಗಿ ಆಸ್ಪತ್ರೆಗಾಗಿ ಸಾಗಿಸಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಕ್ಷಿತ್ ಕುಮಾರ್ ಗೆಡಮ್, ಉಪ ಪೊಲೀಸ್ ಅಧೀಕ್ಷಕ ಅಶೋಕ್ ವಿರ್ಕರ್ ಮತ್ತು ಉನ್ನತ ಪೊಲೀಸ್ ವರಿಷ್ಠಾಧಿಕಾರಿ ಮನೀಶಾ ದುಬುಲೆ ಸೇರಿದಂತೆ ಮೀರಜ್‌ಗಾಂವ್ ಪೊಲೀಸರ ತಂಡವು ಎರಡು ಸ್ಥಳಗಳಿಗೆ ಭೇಟಿ ನೀಡಿ ಸಾಮೂಹಿಕ ಆತ್ಮಹತ್ಯೆಯ ಕುರಿತು ತನಿಖೆ ಆರಂಭಿಸಿದ್ದಾರೆ. ಪಶುವೈದ್ಯರಾಗಿದ್ದ ಕಿರಿಯ ಸಹೋದರ ಮಾಣಿಕ್ ಮತ್ತು ಆತನ ಕುಟುಂಬದ ಸಾವು ಗ್ರಾಮಸ್ಥರಲ್ಲಿ ದಿಗ್ಭ್ರಮೆ ಮೂಡಿಸಿದೆ. ಬೇರೆಯವರ ಕಷ್ಟಕ್ಕೆ ಸ್ಪಂದಿಸುತ್ತಿದ್ದ ಮಾಣಿಕ್ ಕುಟುಂಬದ ಸದಸ್ಯರ ಆತ್ಮಹತ್ಯೆಯಿಂದ ಜನ ಆಘಾತಕ್ಕೊಳಗಾಗಿದ್ದಾರೆ.

ನಮ್ಮ ವಾಟ್ಸಪ್ ಗ್ರುಪ್ ಗೆ ಸೇರಲು ಲಿಂಕ್ ಬಳಸಿ

Donate Janashakthi Media

Leave a Reply

Your email address will not be published. Required fields are marked *