ವೈದ್ಯೆಯ ನಗ್ನ ಫೋಟೋ ಕೇಳಿದ ಬಸವನಗುಡಿ ಪಿಎಸ್‌ಐ; ಪೊಲೀಸ್ ಕಮಿಷನರ್‌ಗೆ ದೂರು!

ಬೆಂಗಳೂರು: ಖಾಸಗಿ ಆಸ್ಪತ್ರೆಯ ವೈದ್ಯೆಗೆ ಬಸವನಗುಡಿ ಠಾಣೆಯ ಪಿಎಸ್‌ಐನಿಂದ ನಗ್ನ ಫೋಟೋ ಕಳಿಸುವಂತೆ ಕಿರುಕುಳ ಆರೋಪ ಮಾಡಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ಸದ್ಯ ವೈದ್ಯ ಪೊಲೀಸ್ ಕಮಿಷನ‌ಗೆ ದೂರು ನೀಡಿದ್ದಾರೆ. ವೈದ್ಯೆಯಿಂದ 1.71 ಲಕ್ಷ ರೂ. ಪಡೆದಿರುವ ಆರೋಪ ಕೂಡ ಮಾಡಲಾಗಿದೆ.

ಖಾಸಗಿ ಆಸ್ಪತ್ರೆ ವೈದ್ಯೆಗೆ ನಗ್ನ ಫೋಟೋ ಕಳಿಸುವಂತೆ ಕಿರುಕುಳ ಆರೋಪ ಹಿನ್ನೆಲೆ ನಗರದ ಬಸವನಗುಡಿ ಠಾಣೆ ಪೊಲೀಸ್ ಸಬ್ ಇನ್ಸ್ಪೆಕ್ಟರ್ ರಾಜಕುಮಾರ್ ಜೋಡಟ್ಟಿ ವಿರುದ್ಧ ಪೊಲೀಸ್ ಕಮಿಷನರ್ ಬಿ.ದಯಾನಂದ್‌ಗೆ ವೈದ್ಯೆಯಿಂದ ದೂರು ನೀಡಲಾಗಿದೆ.

2020ರಲ್ಲಿ ಪಿಎಸ್‌ಐಗೆ ಫೇಸ್‌ಬುಕ್‌ ಮೂಲಕ ಯುವತಿ ವರಿಚಯವಾಗಿದೆ. ಈ ವೇಳೆ ಯುವತಿ ಎಂಬಿಬಿಎಸ್ ಪದವಿ ವ್ಯಾಸಂಗ ಮಾಡುತ್ತಿದ್ದರು. ಅದೇ ವರ್ಷ ಪೊಲೀಸ್ ಅಕಾಡೆಮಿಯಲ್ಲಿ ಪಿಎಸ್‌ಐ ಟ್ರೈನಿಂಗ್‌ನಲ್ಲಿದ್ದರು. ಈ ವೇಳೆ ಪರಸ್ಪರ ಸ್ನೇಹ ಬೆಳೆದು ಪ್ರೀತಿಯಲ್ಲಿ ಬಿದ್ದಿದ್ದರು.

ಇದನ್ನೂ ಓದಿ: ಚನ್ನಪಟ್ಟಣ ಉಪ ಚುನಾವಣೆ : ಅತೀ ಭ್ರಷ್ಟ ಚುನಾವಣೆಗೆ ಸಾಕ್ಷಿ

ನಗ್ನ ಫೋಟೋ ಕಳಿಸುವಂತೆ ಕಿರುಕುಳ

ಇತ್ತೀಚೆಗೆ ನಗ್ನ ಫೋಟೋ ಕಳಿಸುವಂತೆ ಕಿರುಕುಳ ನೀಡಿದ್ದು, ಇದನ್ನ ನಿರಾಕರಿಸಿದ ವೈದ್ಯೆಗೆ ಅವಾಚ್ಯ ಶಬ್ದದಿಂದ ನಿಂದಿಸಿದ್ದಾರೆ. ವೈದ್ಯೆಯ ಕಾಲ್ ರೆಕಾರ್ಡ್ ತೆಗೆದು ಕಿರುಕುಳ ನೀಡುತ್ತಿರುವ ಆರೋಪ ಮಾಡಲಾಗಿದೆ. ಹೀಗಾಗಿ ಸದ್ಯ ನೊಂದ ವೈದ್ಯೆಯಿಂದ ಬೆಂಗಳೂರು ಪೊಲೀಸ್ ಕಮಿಷನರ್‌ಗೆ ದೂರು ನೀಡಲಾಗಿದೆ.

ಸಬ್ ಇನ್ಸ್‌ಪೆಕ್ಟರ್ ರಾಜಕುಮಾರ್ ಜೋಡಟ್ಟಿ ವೈದ್ಯೆಯಿಂದ ಹಂತ ಹಂತವಾಗಿ 1.71 ಲಕ್ಷ ರೂ. ಹಣ ಪಡೆದಿದ್ದಾರೆ. ವಾಟ್ಸಾಪ್ ಕರೆ ಮಾಡುವ ಮೂಲಕ ನಿನಗೆ ಹಣ ವಾಪಸ್ ಕೊಡುವುದಿಲ್ಲ ಏನು ಮಾಡಿಕೊಳ್ಳುತ್ತೀಯಾ ಮಾಡಿಕೊ ಎಂದು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ.

ನಿನಗೆ ಹಣ ಬೇಕಾದರೆ ಠಾಣೆಗೆ ಬಂದು ತೆಗೆದುಕೊಂಡು ಹೋಗು ಎಂದು ಬೆದರಿಕೆ ಹಾಕಿದ್ದಾರೆ. ಇದರಿಂದ ಮನನೊಂದ ಯುವತಿ ಆತ್ಮಹತ್ಯೆಗೂ ಯತ್ನಿಸಿದ್ದರು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಇದನ್ನೂ ನೋಡಿ: ದೇಶದಲ್ಲಿ ಯಾರೂ ಸಂತೋಷವಾಗಿಲ್ಲ: ನಟ ಪ್ರಕಾಶ್ ರೈ Janashakthi Media

Donate Janashakthi Media

Leave a Reply

Your email address will not be published. Required fields are marked *