ರಾಜ್ಯಸಭೆಯ ಉಪಾಧ್ಯಕ್ಷರಾಗಿ ಹರಿವಂಶ್ ಮೂರನೇ ಬಾರಿಗೆ ಅವಿರೋಧ ಆಯ್ಕೆ

ವದೆಹಲಿ: ಏಪ್ರಿಲ್‌ 17ರಂದು ನಡೆದ ರಾಜ್ಯಸಭೆಯ ಉಪಾಧ್ಯಕ್ಷ ಆಯ್ಕೆ ಪ್ರಕ್ರಿಯೆಯಲ್ಲಿ ಹಿರಿಯ ಪತ್ರಕರ್ತರೂ ಆಗಿರುವ ಹರಿವಂಶ್ ಅವರನ್ನು ಮತ್ತೊಮ್ಮೆ ಈ ಮಹತ್ವದ ಸ್ಥಾನಕ್ಕೆ ಆಯ್ಕೆ ಮಾಡಲಾಗಿದ್ದೂ, ಇದೀಗ ಹರಿವಂಶ್ ಅವರು ಸತತ ಮೂರನೇ ಬಾರಿಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ತಿಳಿದುಬಂದಿದೆ.
ಕಳೆದ ಏಪ್ರಿಲ್ 9 ರಂದು ಹರಿವಂಶ್ ಅವರ ಅಧಿಕಾರಾವಧಿ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ಉಪಾಧ್ಯಕ್ಷರ ಸ್ಥಾನ ಖಾಲಿಯಾಗಿತ್ತು. ಈ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಕೇಂದ್ರ ಸಚಿವ ಹಾಗೂ ರಾಜ್ಯಸಭೆಯ ಸದನ ನಾಯಕ ಜೆಪಿ ನಡ್ಡಾ ಅವರು ಹರಿವಂಶ್ ಅವರ ಹೆಸರನ್ನು ಪ್ರಸ್ತಾಪಿಸಿದರು.

ಇದನ್ನೂ ಓದಿ: ಕೆಐಎಡಿಬಿ 16 ಕೋಟಿ ರೂ. ವಂಚನೆ ಪ್ರಕರಣ: ಪ್ರಮುಖ ಆರೋಪಿ ಬಂಧನ

ಇದಕ್ಕೆ ಯಾವುದೇ ವಿರೋಧ ಬಾರದ ಹಿನ್ನೆಲೆಯಲ್ಲಿ ಅವರು ಅವಿರೋಧವಾಗಿ ಆಯ್ಕೆಯಾದರು ಎಂದು ಘೋಷಿಸಲಾಯಿತು. ಈ ಮೂಲಕ ರಾಜ್ಯಸಭೆಯ ಇತಿಹಾಸದಲ್ಲೇ ನಾಮನಿರ್ದೇಶಿತ ಸದಸ್ಯರೊಬ್ಬರು ಉಪಾಧ್ಯಕ್ಷರಾಗಿ ಆಯ್ಕೆಯಾಗಿರುವುದು ಇದೇ ಮೊದಲು ಎಂಬ ಹೆಗ್ಗಳಿಕೆಗೆ ಅವರು ಪಾತ್ರರಾಗಿದ್ದಾರೆ.

ಹರಿವಂಶ್ ಅವರ ಈ ಗೆಲುವಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಶುಭಾಶಯ ಕೋರಿದ್ದು, ಸದನದ ಘನತೆಯನ್ನು ಎತ್ತಿ ಹಿಡಿಯುವಲ್ಲಿ ಅವರ ಪಾತ್ರ ದೊಡ್ಡದಿದೆ ಎಂದು ಶ್ಲಾಘಿಸಿದರು. ಅದೇ ರೀತಿ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಕೂಡ ಹರಿವಂಶ್ ಅವರನ್ನು ಅಭಿನಂದಿಸಿ, ಸದನದ ಕಲಾಪಗಳು ಸುಗಮವಾಗಿ ನಡೆಯಲು ಅವರು ಸಹಕಾರ ನೀಡಲಿದ್ದಾರೆ ಎಂದು ಆಶಯ ವ್ಯಕ್ತಪಡಿಸಿದರು.

ರಾಜಕೀಯಕ್ಕೆ ಬರುವ ಮುನ್ನ ಪತ್ರಕರ್ತರಾಗಿ ಸೇವೆ ಸಲ್ಲಿಸಿದ್ದ ಹರಿವಂಶ್ ಅವರು, ಈಗ ಮೂರನೇ ಬಾರಿಗೆ ಉಪಾಧ್ಯಕ್ಷರ ಜವಾಬ್ದಾರಿಯನ್ನು ಹೊತ್ತುಕೊಂಡಿದ್ದಾರೆ.

ಇದನ್ನೂ ನೋಡಿ: ಡಿಲಿಮಿಟೇಶನ್: ನ್ಯಾಯದ ಮುಖವಾಡದಲ್ಲಿ ಪ್ರಾಬಲ್ಯದ ರಾಜಕಾರಣ! Janashakthi Media

Donate Janashakthi Media

Leave a Reply

Your email address will not be published. Required fields are marked *