ಬಿಜೆಪಿ ಶಾಸಕ ಬೆಲ್ಲದ್‌ ಹೆಸರು ಉಲ್ಲೇಖಿಸಿ ಆತ್ಮಹತ್ಯೆಗೆ ಯತ್ನಿಸಿದ ದಲಿತ ಮಹಿಳೆ

ಧಾರವಾಡ: ಬಿಜೆಪಿ ಶಾಸಕ ಅರವಿಂದ ಬೆಲ್ಲದ್‌ ಬಳಿ ಕೆಲಸದಿಂದ ತೆಗೆದಿರುವ ಬಗ್ಗೆ ವಿವರಿಸಲು, ಕೆಲಸ ಮರಳಿ ಪಡೆದುಕೊಳ್ಳುವ ನಿಟ್ಟಿನಲ್ಲಿ ಮನವಿ ಕೊಡಲು ಹೋಗಿದ್ದಳು. ಈ ವೇಳೆ, ಶಾಸಕರು ತನಗೆ ಅಪಮಾನ ಮಾಡಿದ್ದಾರೆ ಎಂದು ಶಾಸಕ ಅರವಿಂದ ಬೆಲ್ಲದ್‌ ಹೆಸರನ್ನು ಉಲ್ಲೇಖಿಸಿ ಪತ್ರ ಬರೆದು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ.

ಕರ್ನಾಟಕ ಮಹರ್ಷಿ ವಾಲ್ಮಿಕಿ ಪಂಗಡದಲ್ಲಿ ಕಿರಿಯ ಸಹಾಯಕಿಯಾಗಿ ಗುತ್ತಿಗೆ ಆಧಾರದ ಮೇಲೆ ಕೆಲಸ ನಿರ್ವಹಿಸುತ್ತಿದ್ದ ದಲಿತ ಮಹಿಳೆ ಶಕುಂತಲಾ ಮನಸೂರ ಎಂಬವರು ಲಂಚ ಆರೋಪದಡಿ ನಾಲ್ಕು ತಿಂಗಳ ಹಿಂದೆ ಕೆಲಸದಿಂದ ತೆಗೆಯಲಾಗಿತ್ತು.

ಧಾರವಾಡ ಹೊಸಯಲ್ಲಾಪೂರ ನಿವಾಸಿ ಶಕುಂತಲಾ ಮನಸೂರ ನಿದ್ದೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು ಚಿಕಿತ್ಸೆಗೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಹಿಳೆಯ ಆರೋಗ್ಯ ಸ್ವಲ್ಪ ಚೇತರಿಕೆ ಕಂಡಿದ್ದು ಚಿಕಿತ್ಸೆ ಮುಂದುವರೆದಿದೆ.

ಕರ್ನಾಟಕ ಮಹರ್ಷಿ ವಾಲ್ಮಿಕಿ ಪಂಗಡ ಕಿರಿಯ ಸಹಾಯಕಿಯಾಗಿ ಕೆಲಸ ಮಾಡುತ್ತಿದ್ದ ಶಕುಂತಲಾ ಮನಸೂರ ಅಧಿಕಾರಿ ರವಿ ಬೆಂತೂರ ನಿರ್ದೇಶಕರಾಗಿ ಬಂದ ಮೇಲೆ ಶಕುಂತಲಾ ವಿರುದ್ಧ ಲಂಚದ ಆರೋಪದ ಹಿನ್ನೆಲೆಯಲ್ಲಿ ಕೆಲಸದಿಂದ ತೆಗೆಯಲಾಗಿತ್ತು.

ಆತ್ಮಹತ್ಯೆಗೆ ಯತ್ನಿಸಿದ ಶಕುಂತಲಾ ಮನಸೂರ, ನನ್ನ ಈ ಸ್ಥಿತಿಗೆ, ನನ್ನನ್ನು ಅವಮಾನಿಸಿದ ಶಾಸಕ ಅರವಿಂದ ಬೆಲ್ಲದ ಮತ್ತು ರವಿ ಬೆಂತೂರ ಕಾರಣ. ಹಾಗಾಗಿ ಅವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿ, ನ್ಯಾಯ ದೊರಕಿಸಿಕೊಡುವಂತೆ ಮಾನವ ಬಂಧುತ್ವ ವೇದಿಕೆ ಹಾಗೂ ಡಿಎಸ್ಎಸ್ ಗೆ ಮನವಿ ಮಾಡಿದ್ದಾರೆ.

ಶಾಸಕರು ನನಗೆ ಅಪಮಾನ ಮಾಡಿದ್ದಾರೆ. ಲಂಚ ಪಡೆದಿದ್ದೆನೆ ಎಂದು ಶಾಸಕರೇ ನನ್ನನ್ನು ಕೆಲಸದಿಂದ ತೆಗೆಸಿದ್ದಾರೆ. ಜನರ ಎದುರಲ್ಲಿಯೇ ಲಂಚ‌ ತೆಗೆದುಕೊಂಡಿದ್ದಿಯಾ ಎಂದು ಶಾಸಕರು ಅಪಮಾನಿಸಿದ್ದಾರೆ. ಅವಾಚ್ಯ ಶಬ್ದ ಬಳಸಿ ನಿಂದಿಸಿದ್ದಾರೆ ಎಂದು ದೂರಿದ್ದಾಳೆ.

ಮಹಿಳೆಯರಿಗೇಕಿಲ್ಲ ಗೌರವ ಕಾಂಗ್ರೆಸ್‌ ಪ್ರಶ್ನೆ

ಘಟನೆ ಕುರಿತು ಸರಣಿ ಟ್ವೀಟ್ ಮಾಡಿರುವ ಕಾಂಗ್ರೆಸ್ ಪಕ್ಷವು, ಮಹಿಳೆಯರ ಮೇಲೆ ಬಿಜೆಪಿಗರ ದರ್ಪ, ದೌರ್ಜನ್ಯ ಮಿತಿ ಮೀರುತ್ತಿದೆ. ಶಾಸಕ ಅರವಿಂದ್ ಬೆಲ್ಲದ್ ಸಮಸ್ಯೆ ಹೇಳಿಕೊಳ್ಳಲು ಹೋದ ಮಹಿಳೆಯನ್ನು ಅವಮಾನಿಸಿದ ಕಾರಣ ಮಹಿಳೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಸ್ತ್ರೀ ಪೀಡಕರ ಸಾಮ್ರಾಜ್ಯವಾಗಿರುವ ಬಿಜೆಪಿ ಆಡಳಿತದಲ್ಲಿ ಮಹಿಳೆಯರಿಗೆ ಗೌರವವಿಲ್ಲವೇಕೆ ಬಸವರಾಜ ಬೊಮ್ಮಾಯಿ ಅವರೇ? ಇದರ ವಿರುದ್ದ ನಿಮ್ಮ ಕ್ರಮವೇನು ಎಂದು ಪ್ರಶ್ನಿಸಿದ್ದಾರೆ.

ಶಾಸಕ ಅರವಿಂದ್ ಬೆಲ್ಲದ್ ಮಾಡಿದ ಅವಮಾನದಿಂದಾಗಿ ದಲಿತ ಮಹಿಳೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಶಾಸಕರ ದುರ್ವರ್ತನೆಯೇ ಆತ್ಮಹತ್ಯೆ ಯತ್ನಕ್ಕೆ ಕಾರಣ ಎಂಬುದು ಮಹಿಳೆ ಬರೆದ ಡೆತ್‍ನೋಟ್‍ನಲ್ಲಿ ಸ್ಪಷ್ಟವಾಗಿದೆ, ಬಸವರಾಜ್ ಬೊಮ್ಮಾಯಿ ಅವರೇ, ಶಾಸಕರ ವಿರುದ್ಧ ಕ್ರಮ ಕೈಗೊಳ್ಳುವಿರಾ ಅಥವಾ ಸಿದ್ದು ಸವದಿ ಪ್ರಕರಣದಂತೆ ಮುಚ್ಚಿ ಹಾಕುವಿರಾ ಎಂದು ಕಾಂಗ್ರೆಸ್‌ ಪಕ್ಷ ಪ್ರಶ್ನಿಸಿದೆ.

ಶಾಸಕ ಅರವಿಂದ್ ಲಿಂಬಾವಳಿಯಿಂದ ಮಹಿಳೆಗೆ ನಿಂದನೆ, ಸಚಿವ ವಿ.ಸೋಮಣ್ಣರಿಂದ ಮಹಿಳೆಯ ಮೇಲೆ ಹಲ್ಲೆ, ಶಾಸಕ ಅರವಿಂದ್ ಬೆಲ್ಲದ್‍ರಿಂದ ಮಹಿಳೆಗೆ ನಿಂದನೆ, ಇತ್ತೀಚಿನ ಕೆಲವೇ ದಿನಗಳಲ್ಲಿ ನಡೆದ ಈ ಮೂರು ಘಟನೆಗಳು ಬಿಜೆಪಿಯ ಮಹಿಳಾ ವಿರೋಧಿ ಧೋರಣೆಯನ್ನು ಬೆತ್ತಲಾಗಿಸಿವೆ. ಬೊಮ್ಮಾಯಿ ಅವರೇ ಮಹಿಳೆಯರ ಘನತೆ ನಿಮ್ಮ ಅದ್ಯತೆಯಲ್ಲವೇ ಎಂದಿದ್ದಾರೆ.

Donate Janashakthi Media

Leave a Reply

Your email address will not be published. Required fields are marked *