ಬಹಿರಂಗ ನಮಾಜ್ ಮಾಡುವುದು ಸಹಿಸಲು ಸಾಧ್ಯವಿಲ್ಲ: ಹರಿಯಾಣ ಮುಖ್ಯಮಂತ್ರಿ ಖಟ್ಟರ್

ಹರಿಯಾಣ: ನಮಾಜ್ ಸಲ್ಲಿಸಲು ಸಾರ್ವಜನಿಕ ಸ್ಥಳಗಳಲ್ಲಿ ಜಾಗ ಮೀಸಲಿಡುವ ಉದ್ದೇಶಿತ ಆದೇಶ ಹಿಂಪಡೆಯಲಾಗಿದೆ. ಈ ಕುರಿತು ಮಾತನಾಡಿರುವ ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್, ಗುರುಗ್ರಾಮದಲ್ಲಿ ಸಾರ್ವಜನಿಕ ಸ್ಥಳದಲ್ಲಿ ಪ್ರಾರ್ಥನೆ ಸಲ್ಲಿಸುವುದನ್ನು ಸಹಿಸಲಾಗುವುದಿಲ್ಲ ಎಂದು ಹೇಳಿದ್ದಾರೆ.

ಬಹಿರಂಗ ಜಾಗಗಳಲ್ಲಿ ನಮಾಜ್ ಮಾಡುವುದನ್ನು ಸಹಿಲಾಗುವುದಿಲ್ಲ. ಆದರೆ ನಾವು ಸೌಹಾರ್ದಯುತ ಪರಿಹಾರವನ್ನು ಹುಡುಕಲು ಪ್ರಯತ್ನಿಸುತ್ತೇವೆ. ಎಲ್ಲರಿಗೂ ಸೌಲಭ್ಯ ಸಿಗಬೇಕು. ಯಾರೂ ಇತರರ ಹಕ್ಕುಗಳನ್ನು ಉಲ್ಲಂಘಿಸಬಾರದು. ಇದಕ್ಕೆ ಅನುಮತಿ ನೀಡುವುದಿಲ್ಲ ಎಂದು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಬಹಿರಂಗವಾಗಿ ಪ್ರಾರ್ಥನೆ ಸಲ್ಲಿಸಲು ಕೆಲವು ಸ್ಥಳಗಳನ್ನು ಮೀಸಲಿಡುವ ಜಿಲ್ಲಾಡಳಿತದ ಹಿಂದಿನ ನಿರ್ಧಾರವನ್ನು ಹಿಂಪಡೆದಿದ್ದು, ರಾಜ್ಯ ಸರ್ಕಾರ ಈ ಸಮಸ್ಯೆಗೆ ಸೌಹಾರ್ದಯುತ ಪರಿಹಾರವನ್ನು ನೀಡುತ್ತದೆ ಎಂದು ಹೇಳಿದರು.

ಗುರುಗ್ರಾಮದಲ್ಲಿ ಸರಕಾರಿ ಸ್ವಾಮ್ಯದ ಭೂಮಿಯಲ್ಲಿ ನಮಾಜ್ ಸಲ್ಲಿಸುವಾಗ ಹಿಂದೂ ಸಂಘಟನೆಗಳು ಆಕ್ಷೇಪ ವ್ಯಕ್ತಪಡಿಸಿದ್ದವು. ಅಲ್ಲದೇ ಕಾರ್ಯಕರ್ತರು ಘೋಷಣೆಗಳ ಮೂಲಕ ನಮಾಜ್ ಸಲ್ಲಿಸುವುದರ ವಿರುದ್ಧ ಪ್ರತಿಭಟಿಸಿದ್ದರು. ಇದರಿಂದ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಪ್ರತಿಭಟನೆಗೆ ಸಂಬಂಧಿಸಿದಂತೆ ಒಟ್ಟು 30 ಜನ ಪ್ರತಿಭಟನಾಕಾರರನ್ನು ಬಂಧಿಸಲಾಗಿತ್ತು. ಈ ಘಟನೆಗಳ ಬೆನ್ನಲ್ಲೇ ಮುಖ್ಯಮಂತ್ರಿಗಳಲ್ಲಿ ಆದೇಶ ಹಿಂಪಡೆಯುವ ಬಗ್ಗೆ ಹೇಳಿಕೆ ನೀಡಿದ್ದಾರೆ.

ಬಹಿರಂಗ ಜಾಗದಲ್ಲಿ ನಮಾಜ್ ನಡೆಸಬಾರದು. ಇದು ಘರ್ಷಣೆಗೆ ಅವಕಾಶ ನೀಡುತ್ತದೆ. ಆದರೆ ನಾವು ಸಹ ಘರ್ಷಣೆಗೆ ಅವಕಾಶ ನೀಡುವುದಿಲ್ಲ ಎಂದು ಎಚ್ಚರಿಕೆಯ ಸಂದೇಶ ನೀಡಿದ್ದಾರೆ.

Donate Janashakthi Media

Leave a Reply

Your email address will not be published. Required fields are marked *