ಹರಿಯಾಣ ಗಲಭೆ: ಗುರುಗ್ರಾಮದ ಸೆಕ್ಟರ್‌ 57ರಲ್ಲಿ ಮಸೀದಿಗೆ ಬೆಂಕಿ ಹಚ್ಚಿದ ಉದ್ರಿಕ್ತರು

Please follow and like us:

ಗುರುಗ್ರಾಮ:ಹರಿಯಾಣದ ನೂಹ್‌ ಜಿಲ್ಲೆಯಲ್ಲಿ ವಿಶ್ವ ಹಿಂದೂ ಪರಿಷತ್‌ ಮೆರವಣಿಗೆ ವೇಳೆ ಪ್ರಾರಂಭವಾದ ಘರ್ಷಣೆ ಪಕ್ಕದ ಗುರುಗ್ರಾಮ ಜಿಲ್ಲೆಗೂ ವ್ಯಾಪಿಸಿದೆ. ಗುರುಗ್ರಾಮದ ಸೆಕ್ಟರ್‌ 57ರಲ್ಲಿ ಮಸೀದಿಯೊಂದಕ್ಕೆ ಬೆಂಕಿ ಹಚ್ಚಲಾಗಿದ್ದು, 26 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ:ಹರಿಯಾಣ: ಪ್ರತಿಭಟನಾನಿರತ ರೈತರ ಮೇಲೆ ಜಲಫಿರಂಗಿ ಪ್ರಯೋಗ

ಗುಂಪೊಂದು ಬೆಂಕಿ ಹಚ್ಚಿದ್ದು,ಇದರಲ್ಲಿ ಇಬ್ಬರು ಗಾಯಗೊಂಡಿದ್ದರು, ಆ ಪೈಕಿ ಓರ್ವ ಮೃತಪಟ್ಟಿದ್ದಾರೆ ಎಂದು ಅವರು ಮಾಹಿತಿ ನೀಡಿದ್ದಾರೆ. ಬಿಹಾರ ಮೂಲದ ಸಾದ್‌ ಎಂಬುವವರೇ ಮೃತಪಟ್ಟಿದ್ದಾರೆ. ನೂಹ್‌ನಲ್ಲಿ ಘರ್ಷಣೆ ಪ್ರಾರಂಭವಾದ ಬಳಿಕ ಈ ಸಂಬಂಧ ನಡೆದ  ನಾಲ್ಕನೇ ಸಾವು ಇದಾಗಿದೆ.

ಸೆಕ್ಟರ್‌ 57 ರಲ್ಲಿರುವ  ಅಂಜುಮಾನ್‌ ಮಸೀದಿಗೆ ಮಧ್ಯರಾತ್ರಿ ಗುಂಪು ತಲಿಪಿದ್ದು, ಅದೇ ಗುಂಪಿನಲ್ಲಿದ್ದವರು ಮಸೀದಿಗೆ ಬೆಂಕಿ ಹಚ್ಚಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಹರಿಯಾಣದ ನೂಹ್‌ ಪಟ್ಟಣದಲ್ಲಿ ಸೋಮವಾರ ವಿಶ್ವ ಹಿಂದೂ ಪರಿಷತ್‌ ಆಯೋಜಿಸಿದ್ದ ಮೆರವಣಿಗೆ ವೇಳೆ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿತ್ತು. ಉದ್ರಿಕ್ತರು ಕಲ್ಲು ತೂರಾಟ ನಡೆಸಿ, ವಾಹನಗಳಿಗೆ ಬೆಂಕಿ ಹಚ್ಚಿರುವ ಘಟನೆಯಿಂದಾಗಿ ನೂಹ್‌ನಲ್ಲಿ  ಘರ್ಷಣೆ ಉಂಟಾಗಿದೆ.

ಘಟನೆಯಲ್ಲಿ ಗೃಹರಕ್ಷಕ ದಳದ ಇಬ್ಬರು ಸಿಬ್ಬಂದಿ ಹಾಗೂ ನಾಗರಿಕರೊಬ್ಬರು ಮೃತಪಟ್ಟಿದ್ದು, 20 ಮಂದಿ ಗಾಯಗೊಂಡಿದ್ದಾರೆ. ಪೊಲೀಸ್‌ ವಾಹನಗಳಿಗೂ ಹಾನಿಯಾಗಿದೆ. ಡಿಎಸ್‌ಪಿ ಸೇರಿದಂತೆ ಹಲವು ಪೊಲೀಸರು ಗಾಯಗೊಂಡಿದ್ದು, ಆಸ್ಪತ್ರೆಗೆ  ದಾಖಲಿಸಲಾಗಿದೆ ಎಂದು ಮಾಹಿತಿ ತಿಳಿದುಬಂದಿದೆ.

Please follow and like us:
Donate Janashakthi Media

Leave a Reply

Your email address will not be published. Required fields are marked *