ಹಾಸನ: ಜಿಲ್ಲೆಯಲ್ಲಿ ವಿಧಾನಸಭಾ ಚುನಾವಣಾ ಕಾವು ಜೋರಾಗಿಯೇ ಇದ್ದು, ಒಂದೆಡೆ ಜನತಾ ದಳ (ಜಾತ್ಯತೀತ)-ಜೆಡಿಎಸ್ ಪಕ್ಷದ ಕುಟುಂಬ ರಾಜಕಾರಣ ಮತ್ತೊಂದೆಡೆ ಟಿಕೆಟ್ ಆಕಾಂಕ್ಷಿಗಳ ದಂಡು, ಇದರ ನಡುವೆ ಜೆಡಿಎಸ್ ಪಕ್ಷದ ಇಬ್ಬರು ಶಾಸಕರು ಪಕ್ಷ ಬಿಡುವುದು ಬಹುತೇಕ ಸಿದ್ಧವಾಗಿದೆ.
ಜಿಲ್ಲೆಯ ಅರಸೀಕೆರೆ ಹಾಗೂ ಅರಕಲಗೂಡು ವಿಧಾನಸಭಾ ಕ್ಷೇತ್ರ ಶಾಸಕರು ಪಕ್ಷ ಬಿಡುವುದು ಬಹುತೇಕ ಖಚಿತವಾಗಿದೆ. ಶಾಸಕರಾದ ಎ.ಟಿ.ರಾಮಸ್ವಾಮಿ ಹಾಗೂ ಕೆ.ಎಂ.ಶಿವಲಿಂಗೇಗೌಡ ಜೆಡಿಎಸ್ ತೊರೆದು, 2023ರ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳಾಗಿ ಸ್ಪರ್ಧಿಸುತ್ತಾರೆ ಎಂಬ ಚರ್ಚೆ ನಡೆಯುತ್ತಿದೆ.
ಇದನ್ನು ಓದಿ: ಮೇ 3ನೇ ವಾರದಲ್ಲಿ ಕರ್ನಾಟಕ ವಿಧಾನಸಭೆ ಚುನಾವಣೆ..?
ಈ ನಡುವೆ, ಮಾಜಿ ಸಚಿವ ಎ.ಮಂಜು ಕಾಂಗ್ರೆಸ್ ಪಕ್ಷ ತೊರೆಯಲು ಸಿದ್ಧವಾಗಿದ್ದು, ಪಕ್ಷದಿಂದ ಅಂತರ ಕಾಯ್ದುಕೊಂಡಿದ್ದಾರೆ. ಜೆಡಿಎಸ್ ಪಕ್ಷದಿಂದ ಚುನಾವಣಾ ಕಣಕ್ಕೆ ಇಳಿಯಲಿದ್ದಾರೆ. ಸ್ವತಃ ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ಅರಕಲಗೂಡು ವಿಧಾನಸಭಾ ಕ್ಷೇತ್ರಕ್ಕೆ ಪಕ್ಷದ ಅಭ್ಯರ್ಥಿ ಮಾಜಿ ಸಚಿವ ಎ.ಮಂಜು ಅಂತ ಘೋಷಿಸಿದ್ದಾರೆ. ಅಲ್ಲದೇ ಎ.ಮಂಜು ತಮ್ಮ ಮಗನನ್ನೂ ಜೆಡಿಎಸ್ ಪಕ್ಷಕ್ಕೆ ಮಂಜು ಆಹ್ವಾನಿಸಿದ್ದಾರೆ.
ಜಿಲ್ಲೆಯ ಜೆಡಿಎಸ್ ಪಕ್ಷದ ಭದ್ರಕೋಟೆಯಲ್ಲಿ ಇದೀಗ ಹಾಲಿ ಇಬ್ಬರು ಶಾಸಕರು ಪಕ್ಷ ತೊರೆಯುತ್ತಿರುವುದು ಬಹುತೇಕ ಖಚಿತವಾಗಿದೆ. ಈ ಮಧ್ಯೆ ಹಾಸನದಲ್ಲಿ ಅಚ್ಚರಿಯ ಬೆಳವಣಿಗೆಗಳು ನಡೆದಿದೆ.
ಇದನ್ನು ಓದಿ: ಮೂರು ಚುನಾವಣೆಗಳಲ್ಲಿ ಎರಡರಲ್ಲಿ ಬಿಜೆಪಿಗೆ ಸೋಲು-ವಿರೋಧ ಪಕ್ಷಗಳು ಸರಿಯಾದ ಪಾಟ ಕಲಿಯಬೇಕು
ಜೆಡಿಎಸ್ ಪಕ್ಷದಿಂದ ಅಂತರ ಕಾಯ್ದುಕೊಂಡಿರುವ ಶಾಸಕ ಎ.ಟಿ.ರಾಮಸ್ವಾಮಿ ಎಚ್.ಡಿ.ರೇವಣ್ಣ ವಿರುದ್ಧ ಪರೋಕ್ಷವಾಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಮಧ್ಯೆ 2023ರ ಚುನಾವಣೆಯಲ್ಲಿ ಮತ್ತೊಂದೆಡೆ ಅರಸೀಕೆರೆ ಶಾಸಕ ಕೆ.ಎಂ.ಶಿವಲಿಂಗೇಗೌಡ ಫೆಬ್ರವರಿ 14 ತಮ್ಮ ಹುಟ್ಟುಹಬ್ಬದ ದಿನದಂದು ಕಾಂಗ್ರೆಸ್ ಸೇರ್ಪಡೆ ಬಗ್ಗೆ ನಿರ್ಧಾರ ಕೈಗೊಳ್ಳಲಿದ್ದಾರೆ.
ಜೆಡಿಎಸ್ ಭದ್ರಕೋಟೆಯಲ್ಲೇ ಹಾಲಿ ಶಾಸಕರು ಪಕ್ಷ ತೊರೆಯುತ್ತಿರುವುದು ಜೆಡಿಎಸ್ ನಾಯಕರಿಗೆ ದೊಡ್ಡ ಸಮಸ್ಯೆ ಎದುರಾಗಿದೆ. ಸದ್ಯ ಅರಕಲಗೂಡು ಕ್ಷೇತ್ರಕ್ಕೆ ಎ.ಮಂಜು ತಂದಂತೆ, ಅರಸೀಕೆರೆ ವಿಧಾನಸಭಾ ಕ್ಷೇತ್ರಕ್ಕೂ ಅಚ್ಚರಿಯ ಅಭ್ಯರ್ಥಿ ಘೋಷಣೆ ಮಾಡುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ.
ಇಲ್ಲಿ ಕ್ಲಿಕ್ ಮಾಡಿ : ಜನಶಕ್ತಿ ಮೀಡಿಯಾ ವಾಟ್ಸ್‌ಪ್ ಗುಂಪು ಸೇರಲು ಈ ಲಿಂಕ್ ಕ್ಲಿಕ್ ಮಾಡಿ