ಹಾಸನ: ಹಳೆಯ ಕಟ್ಟಡದ ಸಜ್ಜಾ ಕುಸಿದು ತೀವ್ರವಾಗಿ ಗಾಯಗೊಂಡು ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಜ್ಯೋತಿ (45) ಇಂದು ಕೊನೆಯುಸಿರೆಳೆದಿದ್ದಾರೆ.
ಬೇಲೂರು ಪಟ್ಟಣದ ಹೊಸನಗರ ನಿವಾಸಿಯಾಗಿದ್ದ ಜ್ಯೋತಿ ಸಾರಿಗೆ ಬಸ್ ನಿಲ್ದಾಣದ ಎದುರು ಇರುವ ಹಳೇಯ ಕಟ್ಟಡದ ಮುಂಭಾಗ ಹಣ್ಣಿನ ವ್ಯಾಪಾರ ಮಾಡುತ್ತಿದ್ದರು. ಮಾ.9 ಭಾನುವಾರದಂದು ಸಜ್ಜಾ ಕುಸಿದು ತೀವ್ರವಾಗಿ ಗಾಯಗೊಂಡಿದ್ದ ಜ್ಯೋತಿ ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ಇದನ್ನು ಓದಿ :-ಮನೆ ಕೇಳಲು ಬಂದ ಮಹಿಳೆಗೆ ಗ್ರಾಮ ಪಂಚಾಯಿತಿ ಸದಸ್ಯನಿಂದ ಲೈಂಗಿಕ ಕಿರುಕುಳ
ಚಿಕಿತ್ಸೆ ಫಲಕಾರಿಯಾಗದೆ ಜ್ಯೋತಿ ಇಂದು ಸಾವನ್ನಪ್ಪಿದ್ದು ಸಾವಿನ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ. ಕೆಲವು ತಿಂಗಳ ಹಿಂದೆ ಜ್ಯೋತಿ ಪತಿ ಗೋಪಿ ಅನಾರೋಗ್ಯದಿಂದ ಸಾವನ್ನಪ್ಪಿದ್ದರು. ಇದೀಗ ಜ್ಯೋತಿಯು ಸಾವನ್ನಪ್ಪಿದ್ದು ಇಬ್ಬರು ಹೆಣ್ಣುಮಕ್ಕಳು ಅನಾಥರಾಗಿದ್ದಾರೆ. ಬೇಲೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಳೆದ ಭಾನುವಾರ ಘಟನೆ ನಡೆದಿದ್ದು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದರು.