ಹಾಥರಸ್ ಭೇಟಿಗೆ ರಾಹುಲ್ ಗಾಂಧಿಗೆ ಅವಕಾಶ

Please follow and like us:
  • ರಾಹುಲ್‍ ಜೊತೆ ಇತರ ನಾಲ್ವರು ಕಾಂಗ್ರೆಸ್‍ ನಾಯಕರಿಗೆ ಭೇಟಿಗೆ ಅವಕಾಶ

ಲಖನೌ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಪಕ್ಷದ ಇತರ ನಾಲ್ವರು ನಾಯಕರಿಗೆ ಹಾಥರಸ್ ಭೇಟಿಗೆ ಅವಕಾಶ ನೀಡಲಾಗಿದೆ ಎಂದು ನೊಯ್ಡಾ ಪೊಲೀಸರು ತಿಳಿಸಿದ್ದಾರೆ.

ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಅವರು ದೆಹಲಿ–ನೊಯ್ಡಾ ಹೆದ್ದಾರಿ ತಲುಪಿದ್ದಾರೆ. ಹೆದ್ದಾರಿಯಲ್ಲಿ ಉತ್ತರ ಪ್ರದೇಶ ಪೊಲೀಸರನ್ನು ನಿಯೋಜಿಸಲಾಗಿದೆ.   ಅತ್ಯಾಚಾರ ಸಂತ್ರಸ್ತೆಯ ಕುಟುಂದವರಿಗೆ ನ್ಯಾಯ ಒದಗಿಸಿಕೊಡುವಂತೆ ಆಗ್ರಹಿಸಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಸೇರಿದಂತೆ ಅನೇಕ ರಾಜಕೀಯ ನಾಯಕರು ಪ್ರತಿಭಟನೆ ನಡೆಸಿದ್ದಾರೆ.

ಪತ್ರಕರ್ತರು, ರಾಜಕಾರಣಿಗಳು ಹಾಥರಸ್ ಪ್ರವೇಶಿಸದಂತೆ ಶುಕ್ರವಾರ ಅಲ್ಲಿನ ಆಡಳಿತ ನಿರ್ಬಂಧ ಹೇರಿತ್ತು. ಶನಿವಾರ ಬೆಳಿಗ್ಗೆ ಮಾಧ್ಯಮದವರಿಗೆ ಅವಕಾಶ ನೀಡಲಾಗಿದೆ.

ಎರಡು ವಾರಗಳ ಹಿಂದೆ ಸಾಮೂಹಿಕ ಅತ್ಯಾಚಾರಕ್ಕೊಳಗಾಗಿದ್ದ ಹಾತ್ರಸ್‌ನ 19 ವರ್ಷದ ಯುವತಿ ದೆಹಲಿಯಲ್ಲಿ ಮಂಗಳವಾರ ಮೃತಪಟ್ಟಿದ್ದರು.  ಮೃತಪಟ್ಟ ಯುವತಿಯ ಅಂತ್ಯಕ್ರಿಯೆಯನ್ನು ಉತ್ತರ ಪ್ರದೇಶ ಪೊಲೀಸರು ನಡುರಾತ್ರಿಯಲ್ಲೇ ಮಾಡಿ ಮುಗಿಸಿದ್ದರು. ಅಂತ್ಯಕ್ರಿಯೆಗೆ ತೆರಳಲು ತಮಗೂ ಅವಕಾಶ ನೀಡಿರಲಿಲ್ಲ ಎಂದು ಸಂತ್ರಸ್ತೆಯ ಕುಟುಂಬ ಸದಸ್ಯರು ಆರೋಪಿಸಿದ್ದರು. ಈ ಘಟನೆಯು ದೇಶದಾದ್ಯಂತ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

Please follow and like us:
Donate Janashakthi Media

Leave a Reply

Your email address will not be published. Required fields are marked *