ಹತ್ರಾಸ್‌ ಅತ್ಯಾಚಾರ ಪ್ರಕರಣ : ಒಬ್ಬ ದೋಷಿ, ಉಳಿದ ಮೂವರು ದೋಷ ಮುಕ್ತ ಎಂದ ನ್ಯಾಯಾಲಯ

ಉತ್ತರ ಪ್ರದೇಶ : ಹತ್ರಾಸ್‌ ಸಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ಪ್ರಮುಖ ಆರೋಪಿಗೆ   ಉತ್ತರ ಪ್ರದೇಶದ ಎಸ್‌ಸಿ/ಎಸ್ಟಿ ನ್ಯಾಯಾಲಯವು ಜೀವಾವಧಿ ಶಿಕ್ಷೆ ನೀಡಿದೆ.

ಭಾರತೀಯ ದಂಡ ಸಂಹಿತೆಯ ಸೆಕ್ಷನ್‌ 304ರ ಅಡಿಯಲ್ಲಿ ಸಂದೀಪ್‌ ಸಿಸೋಡಿಯಾ ಅವರದ್ದು ನರಹತ್ಯೆಯ ಅಪರಾಧವೆಂದು ಪರಿಗಣಿಸಲಾಗಿದೆ. ಉಳಿದ ಮೂವರು ಆರೋಪಿಗಳು ದೋಷ ಮುಕ್ತ ಎಂದು ನ್ಯಾಯಾಲಯ ಹೇಳಿದೆ.

ಪ್ರಕರಣದ ಕುರಿತು : 2020ರ ಸೆಪ್ಟೆಂಬರ್‌ನಲ್ಲಿ ಪಶ್ಚಿಮ ಉತ್ತರ ಪ್ರದೇಶದ ಹತ್ರಾಸ್‌ ಪ್ರದೇಶದ ಬೂಲ್‌ಗರ್ಹಿಯಲ್ಲಿ 20 ವರ್ಷದ ದಲಿತ ಮಹಿಳೆ ಸಾಮೂಹಿಕ ಅತ್ಯಾಚಾರಕ್ಕೊಳಗಾದ 15 ದಿನಗಳ ನಂತರ ದಿಲ್ಲಿಯ ಆಸ್ಪತ್ರೆಯಲ್ಲಿ ಸಾವನ್ನಪ್ಪಿದರು. ಜಿಲ್ಲಾಡಳಿತವು  ಯುವತಿಯ ಗ್ರಾಮದಲ್ಲಿ ಮಧ್ಯರಾತ್ರಿಯ ವೇಳೆ ಅಂತ್ಯಕ್ರಿಯೆ ನಡೆಸಲಾಗಿತ್ತು. ಕೃತ್ಯವನ್ನು ಮುಚ್ಚಿಹಾಕಲು ಹೀಗೆ ಮಾಡಲಾಗಿತ್ತು ಎಂದು ಎಲ್ಲೆಡೆ ಆರೋಪ ಕೇಳಿಬಂದಿತ್ತು.

ಅತ್ಯಾಚಾರಕ್ಕೊಳಗಾದ ದಲಿತ ಬಾಲಕಿ ದೆಹಲಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ಮತ್ತು ಉತ್ತರ ಪ್ರದೇಶ ಪೊಲೀಸರು ಆಕೆಯ ಶವವನ್ನು ಅವಸರದಲ್ಲಿ ಮನಸೋಇಚ್ಛೆ ಶವಸಂಸ್ಕಾರ ಮಾಡುವ ಸಮಯದಲ್ಲಿ ಆಕೆಯ ಕುಟುಂಬದವರಿಗೆ ಅಲ್ಲಿ ಹಾಜರಾಗಲು ಅನುಮತಿ ನೀಡಲಿಲ್ಲ. ಇದು ದೇಶಾದ್ಯಂತ ಆಕ್ರೋಶಕ್ಕೆ ಕಾರಣವಾಯಿತು. ಈ ಪ್ರಕರಣದಲ್ಲಿ ಆರೋಪಿಗಳು ಸವರ್ಣೀಯರಾಗಿದ್ದು(ಠಾಕೂರ್‌), ಅನೇಕ ವರ್ಷಗಳಿಂದ ದಲಿತರ ಮೇಲೆ ದೌರ್ಜನ್ಯ ಎಸಗುತ್ತಲೇ ಇದ್ದಾರೆ. ಇದು ಅದೇ ರೀತಿಯ ಪ್ರಕರಣಗಳಲ್ಲಿ ಒಂದಾಗಿತ್ತು.

Donate Janashakthi Media

Leave a Reply

Your email address will not be published. Required fields are marked *