ಹಾವೇರಿ: ಹದಿನೆಂಟು ವರ್ಷದ ವಿಶೇಷಚೇತನ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಅಮಾನವೀಯ ಘಟನೆ ಹಾನಗಲ್ ತಾಲೂಕಿನ ಗ್ರಾಮವೊಂದರಲ್ಲಿ ನಡೆದಿದೆ. ಯುವತಿಯ ಬಾಯಿಗೆ ಬಟ್ಟೆ ತುರುಕಿ ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂಬುದು ತನಿಖೆಯಿಂದ ತಿಳಿದು ಬಂದಿದೆ.
ಪ್ರಮುಖ ಆರೋಪಿ ಪರಶುರಾಮ ಮಡಿವಾಳನನ್ನ ಪೊಲೀಸರು ವಶಕ್ಕೆ ಪಡೆದಿದ್ದು, ಅತ್ಯಾಚಾರಕ್ಕೆ ಸಹಾಯ ಮಾಡಿದ ಆರೋಪಿ ಯಶವಂತಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ವಿಶೇಷಚೇತನ ಯುವತಿ ಮೇಲೆ ಅತ್ಯಾಚಾರ ಮಾಡಲು ಪರಶುರಾಮಗೆ ಯಶವಂತ ಸಹಕಾರ ನೀಡಿದ್ದಾನೆ ಎನ್ನಲಾಗಿದೆ. ಆಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
ರಾಜ್ಯದಲ್ಲಿ ಅತ್ಯಾಚಾರ ಸೇರಿದಂತೆ ಮಹಿಳೆಯರ ಮೇಲಿನ ದೌರ್ಜನ್ಯದ ಪ್ರಕರಣಗಳ ಸಂಖ್ಯೆ ದಿನೇ ದಿನೆ ಹೆಚ್ಚಾಗಿತ್ತಿದೆ. ರಾಜ್ಯದ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2019 ಜನವರಿಯಿಂದ ಮೇ 2022ರವರೆಗೆ ಸುಮಾರು 2000 ಕ್ಕೂ ಅತ್ಯಾಚಾರ ಪ್ರಕರಣಗಳು ವರದಿಯಾಗಿದೆ. ಪ್ರತಿದಿನ ಸರಾಸರಿ ಒಂದು ಅತ್ಯಾಚಾರ ಘಟನೆ ನಡೆಯುತ್ತಿದೆ ಎಂದು ಪೊಲೀಸ್ ದಾಖಲೆಗಳು ಹೇಳುತ್ತಿವೆ. ಎರಡು ವರ್ಷದಲ್ಲಿ ರಾಜ್ಯದಲ್ಲಿ 22 ಸಾಮೂಹಿಕ ಅತ್ಯಾಚಾರ ಪ್ರಕರಣಗಳು ವರದಿಯಾಗಿವೆ. ಅದರಲ್ಲಿ 18 ಮಹಿಳೆಯರ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಲಾಗಿದೆ ಎಂದು ದಾಖಲೆಗಳು ಹೇಳುತ್ತಿವೆ. ಇದು ರಾಜ್ಯದಲ್ಲಿ ಮಹಿಳೆಯರಿಗೇ ಸೂಕ್ತ ಭದ್ರತೆ ಇಲ್ಲ ಎಂಬುದನ್ನು ತೋರಿಸುತ್ತದೆ.
ಈ ಅಮಾನವೀಯ ಘಟನೆಯನ್ನು ಸಾರ್ವಜನಿಕರು ಖಂಡಿಸಿದ್ದು. ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡಬೇಕು. ಮಹಿಳೆಯರಿಗೆ ಸೂಕ್ತ ರಕ್ಷಣೆ ಮತ್ತು ಭದ್ರತೆಯನ್ನು ನೀಡಬೇಕು ಎಂದು ಜನಪರ ಸಂಘಟನೆಗಳು ಎಂದು ಆಗ್ರಹಿಸಿವೆ.