ಬೆಂಗಳೂರು: ತಮ್ಮ ಮೊಮ್ಮಗ ಪ್ರಜ್ವಲ್ ರೇವಣ್ಣ ಅಶ್ಲೀಲ ಪೆನ್‌ಡ್ರೈವ್ ವಿಚಾರವಾಗಿ ಕೊನೆಗೂ ಮೌನಮುರಿದಿರುವ ರಾಜ್ಯಸಭಾ ಸದಸ್ಯ ಹೆಚ್.ಡಿ.ದೇವೇಗೌಡ ಪ್ರಜ್ವಲ್ ವಿರುದ್ಧ ಕ್ರಮ ತೆಗೆದುಕೊಳ್ಳುವುದರ ಬಗ್ಗೆ ಯಾವುದೇ ತಕರಾರಿಲ್ಲ. ಆದರೆ ರೇವಣ್ಣ ವಿರುದ್ಧ ಆರೋಪ ಮಾಡಿರುವುದರ ಸತ್ಯ ಜನರಿಗೆ ಗೊತ್ತಿದೆ. ರೇವಣ್ಣ ಪ್ರಕರಣದ ಬಗ್ಗೆ ಕೋರ್ಟ್ ನಲ್ಲಿ ವಿಚಾರಣೆ ನಡೆಯುತ್ತಿರುವುದರಿಂದ ಮಾತನಾಡುವುದು ಒಳ್ಳೆಯದಲ್ಲ ಎಂದಿದ್ದಾರೆ.
ತಮ್ಮ 91ನೇ ಹುಟ್ಟುಹಬ್ಬದ ಸಂದರ್ಭದಲ್ಲಿ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಹೆಚ್.ಡಿ.ದೇವೇಗೌಡ, ಇನ್ನು ಹಾಸನ ಕ್ಷೇತ್ರದ ಸಂಸದ ಪ್ರಜ್ವಲ್ ರೇವಣ್ಣ ಹೊರಗಡೆ ಹೋಗಿದ್ದಾರೆ. ಈ ಘಟನೆ ಬಗ್ಗೆ ಕುಟುಂಬದ ಪರವಾಗಿ ಹೆಚ್.ಡಿ.ಕೆ ಮಾತನಾಡಿದ್ದಾರೆ. ಕ್ರಮ ಕೈಗೊಳ್ಳುವುದು ಸರ್ಕಾರದ ಜವಾಬ್ದಾರಿ ಎಂದಿದ್ದಾರೆ. ಇದರಲ್ಲಿ ಅನೇಕ ಜನರಿದ್ದಾರೆ.
ಇದನ್ನೂ ಓದಿ: ಮೇ 20 ರ ವರೆಗೆ ಹೆಚ್.ಡಿ.ರೇವಣ್ಣ ಜಾಮೀನು ಅರ್ಜಿ ಕಾಯ್ದಿರಿಸಿದ ನ್ಯಾಯಾಲಯ
ಅವರ ಹೆಸರನ್ನು ಹೇಳಲು ಹೋಗುವುದಿಲ್ಲ. ಅನ್ಯಾಯಕ್ಕೆ ಒಳಗಾಗಿರುವ ಸಂತ್ರಸ್ತೆಯರಿಗೆ ಪರಿಹಾರ ನೀಡಬೇಕು. ಎಲ್ಲಾ ವಿಚಾರಗಳನ್ನು ಕುಮಾರಸ್ವಾಮಿ ಬಿಡಿಸಿ, ಬಿಡಿಸಿ ಹೇಳಿದ್ದಾರೆ. ಇದು ಯಾವ ರೀತಿ ನಡೆಯಿತು ಎಂದು ನಾನು ವಿಶ್ಲೇಷಣೆ ಮಾಡುವುದಿಲ್ಲ ಎಂದಿದ್ದಾರೆ.
ಇದನ್ನೂ ನೋಡಿ: ಪೆನ್‌ಡ್ರೈವ್ ಲೈಂಗಿಕ ಹಗರಣ : ಸಮಾಲೋಚನಾ ಗೋಷ್ಠಿ