ಬೆಂಗಳೂರು : ಸಿಎಂ ಸಿದ್ದರಾಮಯ್ಯ ಪ್ರಜ್ವಲ್ ರೇವಣ್ಣನ ರಾಜತಾಂತ್ರಿಕ ಪಾಸ್‌ಪೋರ್ಟ್ ರದ್ದುಗೊಳಿಸುವಂತೆ ಪ್ರಧಾನಿ ಮೋದಿಗೆ ಪತ್ರ ಬರೆದ ಬೆನ್ನಲ್ಲಿಯೇ ಗಮನಾರ್ಹವೆನ್ನುವಂತೆ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ.ದೇವೇಗೌಡ ಮೊಮ್ಮಗ ಪ್ರಜ್ವಲ್ ರೇವಣ್ಣನಿಗೆ ಜೆಡಿಎಸ್ ಪಕ್ಷದ ಲೆಟರ್‌ಹೆಡ್‌ನ ಪ್ರೆಸ್ ನೋಟ್ ಮೂಲಕ ಕೂಡಲೇ ವಾಪಸ್ ಬಂದು SIT ಮುಂದೆ ಹಾಜರಾಗುವಂತೆ ತಾಕೀತು ಮಾಡಿದ್ದಾರೆ. ಸಿದ್ದರಾಮಯ್ಯ
ಇತ್ತೀಚೆಗೆ ಹೆಚ್.ಡಿ.ಕುಮಾರಸ್ವಾಮಿ, ಪ್ರಜ್ವಲ್ ರೇವಣ್ಣಾ ಎಲ್ಲಿದ್ದರೂ ಬಾರಪ್ಪಾ ಎಂದು ಮನವಿ ಮಾಡಿದ್ದರು. ಇದೀಗ ದೇವೇಗೌಡ ಮೊಮ್ಮಗನಿಗೆ ನನ್ನ ಮೇಲೆ ಗೌರವ ಇದ್ದರೆ ತಕ್ಷಣವೇ ವಾಪಸ್ ಮರಳಿ ಬಾ ಎಂದಿದ್ದಾರೆ. ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿ ಕೂಡಲೇ ಸ್ವದೇಶಕ್ಕೆ ವಾಪಸ್ ಬಂದು ವಿಶೇಷ ತನಿಖಾ ತಂಡದ ಎದುರು ಹಾಜರಾಗುವಂತೆ ಮೊಮ್ಮಗ ಸಂಸದ ಪ್ರಜ್ವಲ್ ರೇವಣ್ಣಗೆ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ.ದೇವೇಗೌಡ ತಾಕೀತು ಮಾಡಿದ್ದಾರೆ. ಸಿದ್ದರಾಮಯ್ಯ
ಮೇ 18ನೇ ತಾರೀಖಿನಂದು ದೇವಸ್ಥಾನಕ್ಕೆ ಹೊರಟಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣನ ಕುರಿತಾಗಿ ಮಾತನಾಡಿದ್ದೆ. ಆತ ನನಗೆ, ನನ್ನ ಕುಟುಂಬಕ್ಕೆ, ನನ್ನ ಸಹೋದ್ಯೋಗಿಗಳಿಗೆ, ಸ್ನೇಹಿತರಿಗೆ ಮತ್ತು ನನ್ನ ಪಕ್ಷದ ಕಾರ್ಯಕರ್ತರಿಗೆ ತಂದೊಡ್ದಿರುವ ಆಘಾತ ಮತ್ತು ನೋವಿನಿಂದ ಹೊರಬಂದು ಮಾತನಾಡಲು ಕೊಂಚ ಸಮಯ ಹಿಡಿಯಿತು. ನಾನು ಈಗಾಗಲೇ ಸ್ಪಷ್ಟಪಡಿಸಿರುವ ಹಾಗೆ ಕಾನೂನಿನ ಪ್ರಕಾರ ಅವನು ತಪ್ಪಿತಸ್ಥನೆಂದಾದರೆ, ಅವನಿಗೆ ಅತ್ಯಂತ ಕಠಿಣ ಶಿಕ್ಷೆ ವಿಧಿಸಬೇಕು. ನನ್ನ ಈ ನಿಲುವನ್ನು ನನ್ನ ಮಗ ಮತ್ತು ಕರ್ನಾಟಕದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಪ್ರಕರಣ ಹೊರಬಿದ್ದ ಮೊದಲ ದಿನದಿಂದಲೇ ಪ್ರತಿಪಾದಿಸಿದ್ದಾರೆ. ಸಿದ್ದರಾಮಯ್ಯ
ಈ ಕೆಲವು ವಾರಗಳಿಂದ ಜನರು ನನ್ನ ಮತ್ತು ನನ್ನ ಕುಟುಂಬದವರ ಕುರಿತಾಗಿ ಅತ್ಯಂತ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಇದೆಲ್ಲವೂ ನನಗೆ ತಿಳಿದಿದೆ. ನಾನು ಅವರು ಮಾತನಾಡುವುದನ್ನು ನಿಲ್ಲಿಸುವ ಪ್ರಯತ್ನ ಮಾಡುವುದಿಲ್ಲ. ನಾನು ಅವರನ್ನು ಟೀಕೆ ಮಾಡಲೂ ಹೋಗುವುದಿಲ್ಲ. ಈ ಪ್ರಕರಣದ ಎಲ್ಲಾ ಸತ್ಯಾಂಶಗಳು ಹೊರಬರುವವರೆಗೂ ಅವರು ತಾಳ್ಮೆಯಿಂದ ಕಾಯಬೇಕಿತ್ತು ಎಂದು ಅವರೊಂದಿಗೆ ವಾದಕ್ಕೆ ಇಳಿಯುವುದಿಲ್ಲ.
ಪ್ರಜ್ವಲನ ಚಟುವಟಿಕೆಗಳ ಬಗ್ಗೆ ನನಗೆ ಯಾವುದೇ ಮಾಹಿತಿ ಇರಲಿಲ್ಲ ಎಂದು ನಾನು ಅವರಿಗೆ ಮನವರಿಕೆ ಮಾಡಿಕೊಡಲು ಸಾಧ್ಯವಿಲ್ಲ. ಅವನನ್ನು ರಕ್ಷಿಸುವ ಯಾವುದೇ ಇರಾದೆಯೂ ನನಗಿಲ್ಲ. ಅವನ ಈಗಿನ ಚಲನವಲನ ಮತ್ತು ಅವನ ವಿದೇಶಿ ಯಾತ್ರೆಯ ಬಗ್ಗೆ ನನಗೆ ಏನೂ ತಿಳಿದಿಲ್ಲ, ತಿಳಿದಿರಲಿಲ್ಲ ಎಂದು ನಾನು ಜನರಿಗೆ ಅರ್ಥಮಾಡಿಸಲು ಸಾಧ್ಯವಿಲ್ಲ. ನಾನು ನನ್ನ ಆತ್ಮಸಾಕ್ಷಿಗೆ ಮಾತ್ರ ಉತ್ತರಿಸಬಲ್ಲೆ. ನನಗೆ ದೇವರಲ್ಲಿ ನಂಬಿಕೆ ಇದೆ ಮತ್ತು ಆ ದೇವರಿಗೆ ಎಲ್ಲಾ ಸತ್ಯ ತಿಳಿದಿದೆ ಎಂದು ನಾನು ನಂಬಿದ್ದೇನೆ ಎಂದು ದೇವೇಗೌಡ ಹೇಳಿದ್ದಾರೆ.
ಇದನ್ನು ಓದಿ : ಮೋದಿ ಅಲೆ ಕಾಣಲಿಲ್ಲ; ಗ್ಯಾರಂಟಿ ಅಲೆಯೇ ಎಲ್ಲ, 20 ಸ್ಥಾನದಲ್ಲಿ ಗೆಲುವು: ಈಶ್ವರ ಖಂಡ್ರೆ
ಇತ್ತೀಚಿನ ದಿನಗಳಲ್ಲಿ ನಡೆದಿರುವ ರಾಜಕೀಯ ಪಿತೂರಿಗಳು, ಚಿತಾವಣೆಗಳು, ಉತ್ಪ್ರೇಕ್ಷೆಗಳು ಮತ್ತು ಮಿಥ್ಯಾರೋಪಗಳ ಬಗ್ಗೆ ಈಗ ವಿಶ್ಲೇಷಣೆ ಮಾಡಲು ಹೋಗುವುದಿಲ್ಲ. ಅವುಗಳನ್ನು ಮಾಡಿದವರು ದೇವರಿಗೆ ಉತ್ತರಿಸಬೇಕಾಗುತ್ತದೆ ಮತ್ತು ತಾವು ಎಸಗಿದ ಕೃತ್ಯಗಳಿಗೆ ಸೂಕ್ತ ಬೆಲೆ ತೆರಬೇಕಾಗುತ್ತದೆ ಎಂದು ನಂಬಿದ್ದೇನೆ. ನನ್ನ ಸತ್ಯ ಮತ್ತು ನೋವಿನ ಹೊರೆಯನ್ನು ಭಗವಂತನ ಪದತಳದಲ್ಲಿ ಇರಿಸಿದ್ದೇನೆ ಎಂದು, ಪ್ರಜ್ವಲನು ಎಲ್ಲಿದ್ದರೂ ಬಂದು, ಪೋಲಿಸರ ಮುಂದೆ ಶರಣಾಗಿ, ವಿಚಾರಣೆಯನ್ನು ಎದುರಿಸಬೇಕು ಎಂದು ಯಾವುದೇ ಮುಲಾಜು, ಮರ್ಜಿಯಿಲ್ಲದೆ ಹೇಳಬಲ್ಲೆ ಮತ್ತು ಹೇಳುತ್ತಿದ್ದೇನೆ. ಇದು ನಾನು ಅವನಿಗೆ ಕೊಡುತ್ತಿರುವ ಎಚ್ಚರಿಕೆ ಎಂದು ಕೂಡ ತಿಳಿಯಬೇಕು ಎಂದಿದ್ದಾರೆ.
ಈ ಎಚ್ಚರಿಕೆಗೆ ಪ್ರಜ್ವಲ್ ರೇವಣ್ಣ, ಮನ್ನಣೆ ಕೊಡದಿದ್ದಲ್ಲಿ ಅವನು ನನ್ನ ಮತ್ತು ಕುಟುಂಬದವರೆಲ್ಲರ ಕೋಪವನ್ನೂ ಎದುರಿಸಬೇಕಾಗುತ್ತದೆ. ಅವನು ಎಸಗಿದ್ದಾನೆ ಎನ್ನಲಾದ ತಪ್ಪುಗಳನ್ನು ತೀರ್ಮಾನಿಸಲು ಕಾನೂನು ಇದೆ. ಆದರೆ ಈ ಎಚ್ಚರಿಕೆಗೆ ಅವನು ತಲೆಬಾಗದಿದ್ದಲ್ಲಿ, ಅವನು ಮನೆಯವರ ಕಣ್ಣಲ್ಲಿ ಏಕಾಂಗಿಯಾಗುವುದರಲ್ಲಿ ಸಂದೇಹವಿಲ್ಲ. ನನ್ನ ಬಗ್ಗೆ ಅವನಿಗೆ ಏನಾದರೂ ಗೌರವವಿದ್ದಲ್ಲಿ ಅವನು ಕೂಡಲೆ ಹಿಂದಿರುಗಿ ಬರಬೇಕು.
ನಾನಾಗಲಿ, ನನ್ನ ಕುಟುಂಬದವರಾಗಲಿ ಈ ವಿಚಾರಣೆಯಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಭರವಸೆ ಕೊಡುತ್ತೇನೆ. ಇದರಲ್ಲಿ ಯಾವುದೇ ಭಾವನೆಗೆ ಸಿಲುಕದೆ, ಅವನು ಎಸಗಿದ್ದಾನೆ ಎನ್ನಲಾದ ಕೃತ್ಯಗಳು ಮತ್ತು ತಪ್ಪುಗಳಿಂದ ನೊಂದಿರುವ, ಅನ್ಯಾಯಕ್ಕೆ ಒಳಗಾಗಿರುವ ಎಲ್ಲರಿಗೂ ನ್ಯಾಯ ಸಿಗುವುದಷ್ಟೆ ನನಗೆ ಮುಖ್ಯ. ಜನರ ವಿಶ್ವಾಸವನ್ನು ಮರಳಿ ಪಡೆಯುವುದಷ್ಟೆ ನನ್ನ ಗುರಿ. ಜನರು ಆರು ದಶಕಗಳ ಕಾಲದ ನನ್ನ ರಾಜಕೀಯ ಜೀವನದುದ್ದಕ್ಕೂ ನನ್ನ ಜೊತೆಗೆ ನಿಂತಿದ್ದಾರೆ. ಅವರಿಗೆ ನಾನು ಸದಾ ಋಣಿ ಮತ್ತು ನಾನು ಬದುಕಿರುವವರೆಗೂ ಅವರ ಹಿತದ ವಿರುದ್ಧ ನಡೆದುಕೊಳ್ಳುವುದಿಲ್ಲ ಎಂದು ದೇವೇಗೌಡ ಭಾವನಾತ್ಮಕವಾಗಿ ಹೇಳಿದ್ದಾರೆ. ಸಿದ್ದರಾಮಯ್ಯ
ಇದನ್ನು ನೋಡಿ : ಐದು ಹಂತದ ಮತದಾನ ಮುಗಿದರೂ ವಿವರ ನೀಡದ ಚುನಾವಣಾ ಆಯೋಗ : ಆಯೋಗದ ಸುತ್ತ ಅನುಮಾದ ಹುತ್ತJanashakthi Media