20 ದಿನಗಳ ನಂತರ ಹಾಸನಕ್ಕೆ ಬಂದ ಎಚ್.ಡಿ.ರೇವಣ್ಣ

ಹಾಸನ: ಮಾಜಿ ಸಚಿವ ಎಚ್.ಡಿ.ರೇವಣ್ಣ ಅತ್ಯಾಚಾರ ಸಂತ್ರಸ್ತ ಮಹಿಳೆಯ ಕಿಡ್ನಾಪ್, ಮನೆ ಕೆಲಸದ ಮಹಿಳೆ ಮೇಲಿನ ಲೈಂಗಿಕ ದೌರ್ಜನ್ಯ ಆರೋಪದ ಪ್ರಕರಣಗಳಲ್ಲಿ ಜಾಮೀನು ಪಡೆದು ನಿರಾಳರಾಗಿದ್ದು,  20 ದಿನಗಳ ನಂತರ ತವರಿಗೆ ಆಗಮಿಸುತ್ತಿದ್ದಾರೆ.

ಜಾಮೀನು ಪಡೆದ ನಂತರದಲ್ಲಿ ತಮ್ಮ ಕುಟುಂಬದ ಆರಾಧ್ಯದೈವ್ಯ ಮಾವಿನಕೆರೆ ಬೆಟ್ಟದ ರಂಗನಾಥಸ್ವಾಮಿ, ಕುಲದೈವ ಹರದನಹಳ್ಳಿಯ ದೇವೇಶ್ವರ, ಹೊಳೆನರಸೀಪುರದ ಲಕ್ಷ್ಮೀನರಸಿಂಹಸ್ವಾಮಿ ದೇವಾಲಯಗಳಿಗೆ ರೇವಣ್ಣ ಭೇಟಿ ನೀಡಿ ಪೂಜೆ ಸಲ್ಲಿಸಲಿದ್ದಾರೆಂದು ತಿಳಿದು ಬಂದಿದೆ.

ಇದನ್ನು ಓದಿ : ಕುಮಾರಸ್ವಾಮಿ ಫೋನ್‌ ಟ್ಯಾಪಿಂಗ್‌ ಮಾಡಿದ್ದಕ್ಕೆ ಸಾಕ್ಷಿ ಒದಗಿಸಲೀ ಎಂದ ಗೃಹ ಸಚಿವ ಜಿ.ಪರಮೇಶ್ವರ್

ಜೈಲಿನಿಂದ ಹೊರಬಂದ ದಿನವೇ ತವರೂರಿಗೆ ಹೊರಟಿದ್ದ ರೇವಣ್ಣ ಅವರನ್ನು ಹೊಳೆನರಸೀಪುರಕ್ಕೆ ಹೋಗುವುದು ಬೇಡ ಎಂದು ಮಾಜಿಪ್ರಧಾನಿ ಎಚ್.ಡಿ. ದೇವೇಗೌಡರು ತಡೆದಿದ್ದರು.

ಇಂದು ಮನೆದೇವರಿಗೆ ಪೂಜೆ ಸಲ್ಲಿಸಲು ದೇವೇಗೌಡರಿಂದ ಅನುಮತಿ ಪಡೆದಿರುವ ಪುತ್ರ ಎಚ್.ಡಿ.ರೇವಣ್ಣ ಅವರಿಗೆ ಎಲ್ಲಿಯೂ ಕೂಡ ಏನನ್ನೂ ಮಾತನಾಡದಂತೆ ಅವರುಸೂಚನೆ ನೀಡಿದ್ದಾರೆ.

ಹಾಸನ ಜಿಲ್ಲೆಯ ಗಡಿಭಾಗ ಕಿರಿಸಾವೆಯಲ್ಲಿ ಎಚ್.ಡಿ.ರೇವಣ್ಣಗೆ ಸ್ವಾಗತ ಕೋರಲು ಜೆಡಿಎಸ್‌ ಮುಖಂಡರು ಸಿದ್ಧತೆ ನಡೆಸಿದ್ದಾರೆ. ಆದರೆ ಯಾರೂ ಹಾರ-ತುರಾಯಿ ಹಾಕುವುದಾಗಲೀ, ಪಟಾಕಿ ಸಿಡಿಸುವುದು ಬೇಡ ಎಂದು ಪಕ್ಷದ ಶಾಸಕರು, ಮುಖಂಡರು ಹಾಗೂ ಕಾರ್ಯಕರ್ತರಲ್ಲಿ ಎಚ್.ಡಿ.ರೇವಣ್ಣ ಮನವಿ ಮಾಡಿದ್ದಾರೆ.

ಇದನ್ನು ನೋಡಿ : ಲೈಂಗಿಕ ಹತ್ಯಾಕಾಂಡ :ಪ್ರಜ್ವಲ್‌ ಬಂಧನ ವಿಳಂಬಕ್ಕೆ ಹೈಕೋರ್ಟ್ ವಕೀಲ ಬಿ‌.ಟಿ.ವೆಂಕಟೇಶ್ ಆಕ್ರೋಶ

Donate Janashakthi Media

Leave a Reply

Your email address will not be published. Required fields are marked *