ತುಮಕೂರು: ಹನಿಟ್ರ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಹಕಾರ ಸಚಿವ ಕೆ.ಎನ್.ರಾಜಣ್ಣ ಕೊನೆಗೂ ಸ್ಪಷ್ಟಪಡಿಸಿದ್ದು, ಎರಡು ಬಾರಿ ಹನಿಟ್ರ್ಯಾಪ್ ಗೆ ಯತ್ನಿಸಿದ್ದರು ಎಂದು ತುಮಕೂರಿನಲ್ಲಿ ಮಾತನಾಡಿದ ಅವರು, ತಿಳಿಸಿದ್ದಾರೆ.
ಹನಿಟ್ರ್ಯಾಪ್ ಮಾಡಲು ಬ್ಲೂ ಜೀನ್ಸ್ ಹುಡುಗಿ ಬಂದಿದ್ದಳು. ಎರಡು ಬಾರಿಯೂ ಬಂದಿದ್ದು ಬೇರೆ ಬೇರೆ ಹುಡುಗಿಯರು. ಮೊದಲ ಬಾರಿ ತಾನು ಲಾಯರ್ ಎಂದು ಹೇಳಿರಲಿಲ್ಲ. ಎರಡನೇ ಬಾರಿ ಬಂದವಳು ತಾನು ಹೈಕೋರ್ಟ್ ಲಾಯರ್ ಎಂದು ಹೇಳಿಕೊಂಡು ಬಂದಿದ್ದಳು ಎಂದು ಸಚಿವ ಕೆ.ಎನ್.ರಾಜಣ್ಣ ತಿಳಿಸಿದ್ದಾರೆ.
ಇದನ್ನೂ ಓದಿ: ಔರಂಗಜೇಬನ ಸಮಾಧಿ: ಅವಾಸ್ತವ ವಿವಾದ – ಧರ್ಮ ರಾಜಕೀಯ
ತಾನು ಲಾಯರ್ ನಿಮ್ಮ ಬಳಿ ಪರ್ಸನಲ್ ಆಗಿ ಮಾತನಾಡಬೇಕು ಎಂದು ಹೇಳಿ ಬಂದಿದ್ದಳು. ಹನಿಟ್ರ್ಯಾಪ್ ಹಿಂದೆ ಯಾರಿದ್ದಾರೆ ಎಂಬುದು ಗೊತ್ತಾಗಬೇಕು ತಪ್ಪಿತಸ್ಥರ ವಿರುದ್ಧ ಕ್ರಮ ಆಗಬೇಕು. ಈ ನಿಟ್ಟಿನಲ್ಲಿ ಇಂದು ದೂರು ನೀಡುತ್ತಿದ್ದೇನೆ ಎಂದು ಹೇಳಿದರು.
ಇದನ್ನೂ ನೋಡಿ: ಸದನದಲ್ಲಿ ‘ಹನಿ ಟ್ರ್ಯಾಪ್’ ಸದ್ದು! – ಮೀನಾಕ್ಷಿ ಬಾಳಿ, ಕೆ.ಎಸ್. ವಿಮಲಾ ಮಾತುಕತೆ Janashakthi Media