ಬಾಗಲಕೋಟೆ: ಜಿಲ್ಲೆಯ ಬೀಳಗಿ ತಾಲೂಕಿನ ಕೋಲೂರು ಪ್ರೌಢಶಾಲೆಯ ಮುಖ್ಯ ಶಿಕ್ಷಕ ಡಿಎಚ್ ಅಂಗಡಿ ಶಾಲಾ ಅನುದಾನ ದುರ್ಬಳಕೆ ಮಾಡಿದ ಹಿನ್ನೆಲೆಯಲ್ಲಿ ಸಸ್ಪೆಂಡ್ ಆಗಿದ್ದಾರೆ.
ಪ್ರೌಢಶಾಲೆಯ ಮುಖ್ಯ ಶಿಕ್ಷಕ ಡಿಹೆಚ್ ಅಂಗಡಿ ಎಂಬುವವರನ್ನು ಅಮಾನತು ಮಾಡಿ ಧಾರವಾಡದ ಶಾಲಾ ಶಿಕ್ಷಣ ಇಲಾಖೆಯ ಅಪರ ಆಯುಕ್ತರು ಆದೇಶ ಹೊರಡಿಸಿದ್ದಾರೆ. ಬಾಗಲಕೋಟೆ
ಇದನ್ನೂ ಓದಿ: ಕಲಬುರಗಿ| ಮೃತಪಟ್ಟ ವ್ಯಕ್ತಿಯ ದೇಹವನ್ನು ದರದರನೇ ಎಳೆದುಕೊಂಡು ಹೋದ ಸಿಮೆಂಟ್ ಕಂಪನಿ ಸಿಬ್ಬಂದಿ
ವರ್ಗಾವಣೆ ಪತ್ರ ನೀಡಲು ವಿದ್ಯಾರ್ಥಿಗಳಿಂದ 100 ರೂಪಾಯಿ ವಸೂಲಿ ಹಾಗೂ 10ನೇ ತರಗತಿ ವಿದ್ಯಾರ್ಥಿಗಳ ಹಾಲ್ ಟಿಕೆಟ್ ಗೆ 100 ರೂ ವಸೂಲಿ ಮಾಡುತ್ತಿದ್ದರು ಎಂಬ ಆರೋಪ ಕೇಳಿ ಬಂದಿತ್ತು.
ಅಟಲ್ ಟಿಂಕರಿಂಗ್ ಲ್ಯಾಬ್ ಅನುದಾನವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಆರೋಪ ಕೇಳಿ ಬಂದಿದೆ. ಮುಖ್ಯ ಶಿಕ್ಷಕ ಡಿಎಚ್ ಅಂಗಡಿ ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ. ಧಾರವಾಡದ ಶಾಲಾ ಶಿಕ್ಷಣ ಇಲಾಖೆ ಅಪರ ಆಯುಕ್ತರಿಂದ ಈ ಒಂದು ಆದೇಶ ಬಂದಿದೆ.
ಇದನ್ನೂ ನೋಡಿ: Union Budget 2025-2026 Budget neglected women- they are the worst sufferers – Mariam Dhawale