ವಿದ್ಯಾರ್ಥಿಗಳನ್ನು ಟಿಪ್ಪರ್ ವಾಹನದಲ್ಲಿ ಕರೆದುಕೊಂಡು ಹೋದ ಮುಖ್ಯ ಶಿಕ್ಷಕ ಅಮಾನತು

Please follow and like us:
ಬೆಳ್ತಂಗಡಿ: ಶಿಕ್ಷಣ ಇಲಾಖೆಯು, ವಿದ್ಯಾರ್ಥಿಗಳನ್ನು ಕಾನೂನು ಬಾಹಿರವಾಗಿ ಸರಕು ಸಾಗಣೆ ಮಾಡುವ ಪಿಕಪ್ ಮತ್ತು ಟಿಪ್ಪರ್ ವಾಹನದಲ್ಲಿ ಅಧ್ಯಯನಕ್ಕೆ ಕರೆದುಕೊಂಡು ಹೋದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯ ಶಿಕ್ಷಕನನ್ನ ಅಮಾನತುಗೊಳಿಸಿದ್ದು, ವೇಣೂರು ಪೊಲೀಸ್ ಠಾಣೆಯಲ್ಲಿ ಎರಡು ವಾಹನ ಮತ್ತು ಚಾಲಕರ ವಿರುದ್ಧ ಪ್ರಕರಣ ದಾಖಲಾಗಿದೆ.

ಬೆಳ್ತಂಗಡಿ ತಾಲೂಕಿನ ಬಳೆಂಜ ಗ್ರಾಮದ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳನ್ನು ಪ್ರಭಾರ ಮುಖ್ಯೋಪಾಧ್ಯಾಯ ಕಿರಣ್ ನೇತೃತ್ವದಲ್ಲಿ ಫೆ.9ರಂದು ಪಿಕಪ್ ಮತ್ತು ಟಿಪ್ಪರ್ ವಾಹನಗಳಲ್ಲಿ ಅಧ್ಯಯನ ಪ್ರವಾಸದ ಹೆಸರಿನಲ್ಲಿ ಸ್ಥಳೀಯ ನಾಲ್ಕೂರು ಅನಿಲ್ ಫಾರ್ಮ್ ಗೆ ಕರೆದುಕೊಂಡು ಹೋಗಿ ವಾಪಸ್ ಕರೆದುಕೊಂಡು ಬಂದಿದ್ದ ವಿಡಿಯೋ ವೈರಲ್ ಅಗಿತ್ತು. ವಿದ್ಯಾರ್ಥಿ

ಇದನ್ನೂ ಓದಿ: ರಾಜ್ಯ ಬಜೆಟ್‌ -2026-27| ಮಾರ್ಚ್‌ 6ಕ್ಕೆ ಮಂಡನೆ

ಈ ಬಗ್ಗೆ ಮಾಧ್ಯಮಗಳ ವರದಿ ಪ್ರಸಾರವಾದ ಬೆನ್ನಲ್ಲೇ ಫೆ.12 ರಂದು ಬೆಳ್ತಂಗಡಿ ಶಿಕ್ಷಣ ಇಲಾಖೆಯ ಅಧಿಕಾರಿಗಳು ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಭಾರ ಮುಖ್ಯೋಪಾಧ್ಯಾಯ ಕಿರಣ್ ಎಂಬವರನ್ನು ಅಮಾನತು ಮಾಡಿ ಆದೇಶ ಹೊರಡಿಸಿದೆ.

ಘಟನೆಯ ಬಗ್ಗೆ ಬಳಂಜ ನಿವಾಸಿ ಧರಣೇಂದ್ರ ಎಂಬವರು ನೀಡಿದ ದೂರಿನಂತೆ ಪಿಕಪ್ ವಾಹನ ಚಾಲಕ ನವೀನ್, ಟಿಪ್ಪರ್ ಚಾಲಕ ಪ್ರವೀಣ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದನ್ನೂ ನೋಡಿ: ಮುಚ್ಚುವ ಅಂಚಿನಿಂದ.. ನೂರರ ಸಂಭ್ರಮದವರೆಗೆ – ಸರಕಾರಿ ಶಾಲೆಯ ಕಥೆ Janashakthi Media

Please follow and like us:
Donate Janashakthi Media

Leave a Reply

Your email address will not be published. Required fields are marked *