ಬೆಂಗಳೂರು: ಇಂದು, 13 ಆಗಸ್ಟ್, ಮಧ್ಯಾಹ್ನ 2.45 ಕ್ಕೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನಲ್ಲಿ ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧ ದಾಖಲಾದ ಖಾಸಗಿ ದೂರಿನ ವಿಚಾರಣೆ ನಡೆಯಲಿದೆ.
ಸಿಎಂ ಸಿದ್ದರಾಮಯ್ಯ ಕೋರ್ಟ್ ನ ಈ ಆದೇಶವನ್ನು ಆಧರಿಸಿ ವಿಚಾರಣೆ ಎದುರಿಸಲಿದ್ದಾರೆಯೇ ಅಥವಾ ಇಲ್ಲವೇ ಎಂಬುದು ಗೊತ್ತಾಗಲಿದೆ. ಕೋರ್ಟ್ ನೀಡುವ ಆದೇಶವನ್ನು ನೋಡಿಕೊಂಡು ಸಾಮಾಜಿಕ ಕಾರ್ಯಕರ್ತ ಟಿ.ಜೆ. ಅಬ್ರಾಹಂ ನೀಡಿರುವ ದೂರನ್ನು ಪರಿಗಣಿಸಿ ಅಭಿಯೋಜನೆಗೆ ಅನುಮತಿ ನೀಡಬೇಕೇ ಅಥವಾ ಬೇಡವೇ ಎಂಬುದನ್ನು ರಾಜ್ಯಪಾಲರು ನಿರ್ಧರಿಸುವ ಸಾಧ್ಯತೆ ಇದೆ ಎನ್ನಲಾಗಿದೆ.
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಟಿಜೆ ಅಬ್ರಹಾಂ ಮತ್ತೊಂದು ಖಾಸಗಿ ದೂರು ಸಲ್ಲಿಸಿದ್ದಾರೆ. ಈಗಾಗಲೇ ಸ್ನೇಹಮಯಿ ಕೃಷ್ಣ ಎನ್ನುವವರು ಸಿಎಂ ಸಿದ್ದರಾಮಯ್ಯ ವಿರುದ್ಧ ಖಾಸಗಿದೂರು ಸಲ್ಲಿಸಿದ್ದಾರೆ. ನಾಳೆ ಖಾಸಗಿ ದೂರು ವಿಚಾರಣೆಗೆ ಸ್ವೀಕರಿಸುವ ಸಂಬಂಧ ನ್ಯಾಯಾಲಯವು ಆದೇಶ ನೀಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ಇದನ್ನೂ ಓದಿ: ಸ್ವಾತಂತ್ರ್ಯೋತ್ಸವ ದಿನಾಚರಣೆಯ ಕಾರ್ಯಕ್ರಮಕ್ಕೆ ಬಿಗಿ ಬಂದೋಬಸ್ತ್: ಕಮಿಷನರ್ ದಯಾನಂದ
ಇತ್ತೀಚಿಗೆ ಬಿಜೆಪಿ ಮತ್ತು ಜೆಡಿಎಸ್ ಈ ಒಂದು ಹಗರಣವನ್ನು ಖಂಡಿಸಿ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಬೆಂಗಳೂರಿನಿಂದ ಮೈಸೂರಿನವರೆಗೆ ಮೈಸೂರು ಚಲೋ ಪಾದಯಾತ್ರೆ ಕೂಡ ಮಾಡಿತ್ತು.
ಇದಕ್ಕೆ ಕೌಂಟರ್ ಕೊಡಲು ಕಾಂಗ್ರೆಸ್ ಸಹ ಜನಾಂದೋಲನ ಸಭೆಯನ್ನು ಸಹ ಮಾಡಿತ್ತು. ಇದೀಗ ಸಿಎಂ ಸಿದ್ದರಾಮಯ್ಯ ಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಟಿಜೆ ಅಬ್ರಹಾಂ ಮತ್ತೊಂದು ಖಾಸಗಿ ದೂರು ಸಲ್ಲಿಸಿದ್ದಾರೆ.
ಇದನ್ನೂ ನೋಡಿ: ಬಾಲ ಉದ್ದ ಇದೆ ಅಂದಾಕ್ಷಣ ಅದು ನಾಯಿ ಅಲ್ಲ.. ಕರ್ನಾಟಕದಲ್ಲೂ ಬಾಲ ಉದ್ದ ಇರುವ ಕುರಿಗಳಿವೆJanashakthi Media