ಮುಡಾ ಪ್ರಕರಣ: ಅರ್ಜಿಯ ವಿಚಾರಣೆ – ಜನವರಿ 27 ಕ್ಕೆ ಮುಂದೂಡಿದ ಹೈಕೋರ್ಟ್

ಬೆಂಗಳೂರು: ಸ್ನೇಹಮಯಿ ಕೃಷ್ಣ ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಕೇಸ್ ತನಿಖೆಯ ವಿಚಾರವಾಗಿ ಪ್ರಕರಣವನ್ನು ಸಿಬಿಐಗೆ ವರ್ಗಾಯಿಸುವಂತೆ ಕೋರಿ ಅರ್ಜಿ ಸಲ್ಲಿಸಿದ್ದರು. ಈ ಒಂದು ಅರ್ಜಿಯ ವಿಚಾರಣೆಯನ್ನು ನ್ಯಾ. ಎಂ ನಾಗಪ್ರಸನ್ನ ರಿದ್ದ ಹೈಕೋರ್ಟ್ ಏಕ ಸದಸ್ಯ ಪೀಠವು ಅರ್ಜಿಯ ವಿಚಾರಣೆ ನಡೆಸಿ ಜನವರಿ 27 ಕ್ಕೆ ಮುಂದೂಡಿ ಆದೇಶ ಹೊರಡಿಸಿತು. ಮುಡಾ 

ಸಿಬಿಐ ತನಿಖೆ ಕೋರಿ ಸ್ನೇಹಮಯಿ ಕೃಷ್ಣ ಸಲ್ಲಿಸಿದ ಅರ್ಜಿ ವಿಚಾರಣೆ ನಡೆದಿದ್ದು, ಸ್ನೇಹಮಯಿ ಕೃಷ್ಣ ಪರವಾಗಿ ಸುಪ್ರೀಂ ಕೋರ್ಟ್ ವಕೀಲ ಮಣಿಂದರ್ ಸಿಂಗ್ ಹಾಜರಾಗಿದ್ದು, ಸ್ನೇಹಮಯಿ ಕೃಷ್ಣ ರ ಪರವಾಗಿ ಮಣಿಂದರ್ ಸಿಂಗ್ ವಾದ ಮಂಡಿಸಿದರು. ಎರಡು ಕಡೆ ವಕೀಲರಿಗೆ ಹೈಕೋರ್ಟ್ ಸೂಚನೆ ನೀಡಿದೆ.

ತನಿಖೆ ನಿಶಪಕ್ಷಪಾತವಾಗಿರವೇಕು, ಜನರಲ್ಲಿ ಅದು ವಿಶ್ವಾಸ ಮೂಡಬೇಕುಸಿಬಿಐ ತನಿಖೆ ಬೇಕಾ ಬೇಡ ಎಂಬ ಬಗ್ಗೆ ವಾದ ಸೀಮಿತಗೊಳಿಸಿ – ಕೋರ್ಟ್ವಿಚಾರಣೆ ಆರಂಭದ ವೇಳೆಯಲ್ಲಿ ನ್ಯಾ. ಎಂ ನಾಗಪ್ರಸನ್ನ ಸಿಬಿಐ ತನಿಖೆಗೆ ವಹಿಸಬೇಕೆ ಬೇಡವೇ ಎಂಬ ಬಗ್ಗೆ ವಾದ ಸೀಮಿತಗೊಳಿಸಿ ಎಂದು ಎರಡು ಕಡೆ ವಕೀಲರಿಗೆ ಸೂಚನೆ ನೀಡಿದರು.

ಇದನ್ನೂ ಓದಿ: ಪತ್ರಕರ್ತರ ಸಹಕಾರ ಸಂಘದ ಕ್ಯಾಲೆಂಡರ್ ಬಿಡುಗಡೆ ಮಾಡಿದ ಸಿಎಂ ಸಿದ್ದರಾಮಯ್ಯ

ತನಿಖೆ ನಿಷ್ಪಕ್ಷಪಾತವಾಗಿರಬೇಕು ಜನರಲ್ಲಿ ವಿಶ್ವಾಸ ಮೂಡಿಸುವಂತಿರಬೇಕು. ರಾಜಕಾರಣಿಗಳು ಭಾಗಿಯಾಗಿರುವಾಗ ನಿಸ್ಪಕ್ಷಪಾತ ತನಿಖೆ ಕಷ್ಟ. ಹೀಗಾಗಿ ಸ್ವತಂತ್ರ ತನಿಖೆ ನಡೆಸುವ ಅಗತ್ಯವಿದೆ ಎಂದು ಮಣಿಂದರ್ ಸಿಂಗ್ ವಾದ ಮಂಡಿಸಿದರು.ಈ ವೇಳೆ ಹೈ ಕೋರ್ಟ್ ಇದುವರೆಗಿನ ತನಿಖೆಯ ವರದಿಯನ್ನು ಸಲ್ಲಿಸಿಲ್ಲ ಏಕೆ ಎಂದು ಪ್ರಶ್ನಿಸಿತು. ನಾಳೆಯೊಳಗೆ ಈವರೆಗಿನ ತನಿಖೆ ವರದಿ ಸಲ್ಲಿಸಲು ಹೈ ಕೋರ್ಟ್ ಸೂಚನೆ ನೀಡಿತು. ಮಣಿಯಿಂದ ಸಿಂಗ್ ವಾದ ಮುಂದುವರಿಸಿ, ಮೂವರು ಸದಸ್ಯರ ಕಮಿಟಿ ತನಿಖೆ ಉಸ್ತುವಾರಿ ತೆಗೆದುಕೊಂಡಿದೆ. ರಾಜ್ಯ ಸರ್ಕಾರದಿಂದ ನೇಮಕವಾದ ಪೊಲೀಸರೇ ಇಲ್ಲಿ ತನಿಖೆ ನಡೆಸುತ್ತಿದ್ದಾರೆ ಲೋಕಾಯುಕ್ತ ಪೊಲೀಸರು ನಿಯೋಜನೆ ಮೇಲೆ ಬಂದಿರುತ್ತಾರೆ.ಹೀಗಾಗಿ ನಿಸ್ಪಕ್ಷಪಾತನಿಗೆ ಸಾಧ್ಯವಿಲ್ಲವೆಂದು ವಾದ ಮಂಡಿಸಿದರು.56 ಕೋಟಿ ಮತದ ಸೈಟ್ಗಳನ್ನು ಅಕ್ರಮವಾಗಿ ಪಡೆದಿದ್ದಾರೆ.

ಸಿಎಂ ಪತ್ನಿ ಈಗ 14 ಸೈಟ್ ಗಳನ್ನು ಮಿಂಚಿನ ವೇಗದಲ್ಲಿ ಹಿಂತಿರುಗಿಸಿದ್ದಾರೆ. ರಾಜ್ಯ ಸರ್ಕಾರ ಈ ಕೇಸ್ ನಿಂದ ಆರೋಪಿಗಳನ್ನು ರಕ್ಷಿಸಲು ಮುಂದಾಗಿದೆ. ಅದೇ ದಿನ ಸರ್ಕಾರ ಸೈಟ್ಗಳನ್ನು ಹಿಂಪಡೆಯಲು ಒಪ್ಪಿಗೆ ನೀಡಿದೆ ಎಂದು ಮಣಿಂದರ್ ಸಿಂಗ್ ವಾದ ಮಂಡಿಸಿದರು.ಮುಡಾ ವಿರುದ್ಧದ ಆರೋಪಗಳ ತನಿಖೆಯನ್ನು ಲೋಕಾಯುಕ್ತರು ಸ್ವಯಂ ಪ್ರೇರಿತವಾಗಿ ಲೋಕಾಯುಕ್ತ ಮುಡಾ ಪ್ರಕರಣದ ತನಿಖೆ ವಿಚಾರವಾಗಿ ಮೂಡಾದ ದಾಖಲೆಗಳನ್ನು ಸರ್ಕಾರ ರಚಿಸಿದ ಆಯೋಗ 145 ಫೈಲ್ ನಗರಾಭಿವೃದ್ಧಿ ಇಲಾಖೆ ಅಧಿಕಾರಿಗಳು ತೆಗೆದುಕೊಂಡಿದ್ದಾರೆ.

ಮೈಸೂರಿನ ಲೋಕಾಯುಕ್ತ ಡಿವೈಎಸ್ಪಿಈ ಬಗ್ಗೆ ಪತ್ರ ಬರೆದಿದ್ದಾರೆ. ಐಎಎಸ್ ಅಧಿಕಾರಿ ನೇತೃತ್ವದಲ್ಲಿ ದಾಖಲೆ ವಶಕ್ಕೆ ಪಡೆದಿದ್ದಾರೆ ನಗಬಾರ ಅಭಿವೃದ್ಧಿ ಸಚಿವರು ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ . ನಗರಾಭಿವೃದ್ಧಿ ಇಲಾಖೆ ಅಧಿಕಾರಿಗಳ ತಂಡ ದಾಖಲೆ ಹೊತ್ತೊಯ್ದಿದ್ದಾರೆ.ಈ ವೇಳೆ 14 ಸೈಟ್ ಹಂಚಿಕೆಗಳಿಗೂ ಇದಕ್ಕೂ ಸಂಬಂಧವಿದೆಯೇ ಎಂದು ಜಡ್ಜ್ ಕೇಳಿದರು. ಈ ಫೈಲ್ ಗಳು ಯಾವುದೆಂದು ಲೋಕಾಯುಕ್ತ ಡಿ ವೈ ಎಸ್ ಪಿ ಹೀಗಾಗಿ ಈ ಫೈಲ್ ಗಳು ಇದರಲ್ಲಿ ಸೇರಿರಬಹುದು.

145 ಫೈಲ್ ಗಳ ಕಥೆ ಏನಾಗಿದೆ ಎಂಬುವುದು ಇದುವರೆಗೂ ತಿಳಿದಿಲ್ಲ ಲೋಕಾಯುಕ್ತ ಕಚೇರಿಯು ಈ ಫೈಲ್ ಪಡೆಯಲು ಪರಿಹತ್ನಿಸಿಲ್ಲ ಎಂದು ಮಣಿನ್ಡರ್ ಸಿಂಗ್ ಜಡ್ಜ್ ಗೆ ತಿಳಿಸಿದರು.ಸಂಬಂಧವಿಲ್ಲದ ವಾದ ಮಂಡನೆ ಮಾಡುತ್ತಿದ್ದಾರೆ ಎಂದು ಸಿಎಂ ಪರ ಹಿರಿಯ ವಕೀಲ ರವಿವರ್ಮ ಕುಮಾರ್ ಇದೇ ವೇಳೆ ಆಕ್ಷೇಪ ವ್ಯಕ್ತಪಡಿಸಿದರು. 2024 ಡಿಸೆಂಬರ್ 19 ರಿಂದ ಇಲ್ಲಿಯವರೆಗಿನ ತನಿಖೆ ಲೋಕಾಯುಕ್ತ ಪೊಲೀಸರಿಗೆ ಹೈಕೋರ್ಟ್ ಸೂಚನೆ ನೀಡಿತು. ಈ ವೇಳೆ ಸಿಎಂ ಪರ ವಕೀಲರು ರಿಟ್ ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಸಮಯ ನೀಡುವಂತೆ ಮನವಿ ಮಾಡಿದಾಗ ಜನವರಿ 27 ಕ್ಕೆ ಮುಂದೂಡಿ ಹೈಕೋರ್ಟ್ ಆದೇಶ ನೀಡಿತು.

ಇದನ್ನೂ ನೋಡಿ: ಮುಖ್ಯಮಂತ್ರಿಗೆ ಘೇರಾವ್ : DYFI ಕಾರ್ಯಕರ್ತರ ಬಂಧನ Janashakthi Media

Donate Janashakthi Media

Leave a Reply

Your email address will not be published. Required fields are marked *