ನವದೆಹಲಿ:ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಸೇರಿದಂತೆ ಇತರೆ ಆರೋಪಿಗಳಿಗೆ ಹೈಕೋರ್ಟ್ ನೀಡಿದ ಜಾಮೀನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಏ.2 ರಂದು ವಿಚಾರಣೆ ನಡೆಸಲಾಗುವುದು ಎಂದು ಸುಪ್ರೀಂಕೋರ್ಟ್ ಹೇಳಿದೆ.
ಇದನ್ನೂ ಓದಿ:-ಜನಸಂಖ್ಯಾ ಹೆಚ್ಚಳವೂ ಪಿತೃಪ್ರಧಾನ ಮೌಲ್ಯಗಳೂ
ಬೆಂಗಳೂರು ಪೊಲೀಸರು ಜಾಮೀನು ಪ್ರಶ್ನಿಸಿ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ಇಂದು ವಿಚಾರಣೆಗೆ ಬರಬೇಕಿತ್ತು. ವಿಚಾರಣೆಗೆ ಪಟ್ಟಿಯಾಗದ ಹಿನ್ನಲೆ ದರ್ಶನ್ ಪ್ರಕರಣದಲ್ಲಿನ ರಾಜ್ಯದ ವಿಶೇಷ ವಕೀಲ ಅನಿಲ್ ನಿಶಾನಿ ಅರ್ಜಿ ವಿಚಾರಣೆ ನಡೆಸುವಂತೆ ಪ್ರಸ್ತಾಪಿಸಿದರು. ಇದಕ್ಕೆ ಕೋರ್ಟ್ ಏ 2 ರಂದು ವಿಚಾರಣೆ ನಡೆಸಲಾಗುವುದು ಎಂದು ಹೇಳಿತು.
ಇದನ್ನೂ ಓದಿ:-ಹಾಸನ ವಿವಿ ಉಳಿಸೋಣ – ಸಂಸದ ಶ್ರೇಯಸ್. ಎಂ. ಪಟೇಲ್
ಕಳೆದ ವಿಚಾರಣೆಯಲ್ಲಿ ಅರ್ಜಿ ವಿಚಾರಣೆಗೆ ಒಪ್ಪಿಕೊಂಡಿದ್ದ ಸುಪ್ರೀಂಕೋರ್ಟ್ ನಟ ದರ್ಶನ್ ಸೇರಿದಂತೆ ಇತರೆ ಆರೋಪಿಗಳಿಗೆ ನೋಟಿಸ್ ಜಾರಿ ಮಾಡಿತ್ತು. ಇನ್ನೂ ಸುಪ್ರೀಂ ಕೋರ್ಟ್ನಲ್ಲಿ ವಾದಕ್ಕೆ ಖ್ಯಾತ ಹಿರಿಯ ವಕೀಲ ಕಪಿಲ್ ಸಿಬಲ್ ಅವರನ್ನು ದರ್ಶನ್ ಕುಟುಂಬದವರು ನೇಮಿಸಿಕೊಂಡಿದ್ದಾರೆ ಎನ್ನಲಾಗಿತ್ತು. ಆದರೆ ಈ ಬಗ್ಗೆ ಯಾವುದೇ ಬೆಳವಣಿಗೆ ಸದ್ಯಕ್ಕೆ ಕಂಡು ಬಂದಿಲ್ಲ.