ಹೃದಯಾಘಾತ: ಕರ್ತವ್ಯ ನಿರತ ಎಎಸ್‌ಐ ಸಾವು

ಬೆಳಗಾವಿ: ರಾಜ್ಯದಲ್ಲಿ ಹೃದಯಾಘಾತ ಪ್ರಕರಣಗಳು ಹೆಚ್ಚಾಗುತ್ತಿವೆ. ಇದೀಗ ಬೆಳಗಾವಿ ಜಿಲ್ಲೆಯ ಗೋಕಾಕ್ ನಲ್ಲಿ ಕರ್ತವ್ಯ ನಿರತ ಎಎಸ್‌ಐ ಒಬ್ಬರು ತೀವ್ರ ಹೃದಯಾಘಾತದಕ್ಕೊಳಗಾಗಿ ಸಾವನ್ನಪ್ಪಿರುವಂತಹ ಘಟನೆ ನಡೆದಿದೆ.

ಹುಬ್ಬಳ್ಳಿಯ ಎಪಿಎಂಸಿ ಠಾಣೆ ಎಲ್‌ಜೆ ಮೀರಾನಾಯಕ್ (56) ಹೃದಯಾಘಾತದಿಂದ ಸಾವನ್ನಪ್ಪಿದ ಎಎಸ್‌ಐ ಎಂದು ಗುರುತಿಸಲಾಗಿದೆ. ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನಲ್ಲಿ ಲಕ್ಷ್ಮೀದೇವಿ ಜಾತ್ರೆ ಹಿನ್ನೆಲೆಯಲ್ಲಿ ಎಎಸ್‌ಐ ಮೀರಾನಾಯಕ್ ಬಂದೋಬಸ್ತಿಗೆ ಬಂದಿದ್ದರು. ಈ ವೇಳೆ ಇಂದು ಮೀರಾನಾಯಕ ತೀವ್ರ ಹೃದಯಾಘಾತದಿಂದ ಸಾವನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: ಸಾಲದ ಸುಳಿಯಲ್ಲಿ ಭಾರತೀಯರು

ಈ ಬಗ್ಗೆ ಗೋಕಾಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೀರಾ ನಾಯಕ್ ಅವರ ಮೃತದೇಹವನ್ನು ಗೋಕಾಕ್ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಮರಣೋತ್ತರ ಪರೀಕ್ಷೆ ಬಳಿಕ ಕುಟುಂಬಸ್ಥರಿಗೆ ಹಸ್ತಾಂತರಿಸಲಾಗುತ್ತದೆ ಎನ್ನಲಾಗಿದೆ.

ಇದನ್ನೂ ನೋಡಿ: ಭೂಸ್ವಾಧೀನ ವಿರೋಧಿಸಿ ಅನ್ನದಾತರಿಂದ ಅಹೋರಾತ್ರಿ ಧರಣಿ Janashakthi Media

Donate Janashakthi Media

Leave a Reply

Your email address will not be published. Required fields are marked *