ಬೆಂಗಳೂರು| ವಾಯುಭಾರ ಕುಸಿತ; ಇಂದಿನಿಂದ 3 ದಿನ ಭಾರಿ ಮಳೆ: ಐಎಂಡಿ ಮುನ್ಸೂಚನೆ

ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಪರಿಣಾಮ ಇಂದಿನಿಂದ ಮುಂದಿನ ಮೂರು ದಿನಗಳ ಕಾಲ ಬೆಂಗಳೂರು, ಮೈಸೂರು ಸೇರಿದಂತೆ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಕಾರಣ ಮುಂದಿನ 24 ಗಂಟೆಗಳ ಕಾಲ ಕರ್ನಾಟಕದ ಒಳನಾಡಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.

ಇದನ್ನೂ ಓದಿ: ಬೇಲೆಕೇರಿ ಅದಿರು ನಾಪತ್ತೆ ಪ್ರಕರಣ: ಶಾಸಕ ಸತೀಶ್ ಸೈಲ್ ಉಪಚುನಾವಣೆ ನಡೆಸದಂತೆ ಸೂಚನೆ

ಡಿಸೆಂಬರ್ 23 ರ ಇಂದು ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಚಾಮರಾಜನಗರ, ಮೈಸೂರು, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಹಾವೇರಿ, ಗದಗ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.

ಡಿಸೆಂಬರ್ 24ರಂದು ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಹಾವೇರಿ, ಗದಗ ಜಿಲೆಗಳ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಇದನ್ನೂ ನೋಡಿ: ಬಾಯಿಗೆ ಬಂದಂತೆ ಮಾತನಾಡುವುದು ಬಿಜೆಪಿಯವರ ಫ್ಯಾಷನ್ – ಕೆ.ಎಸ್. ವಿಮಲಾ ವಿಶ್ಲೇಷಣೆ

Donate Janashakthi Media

Leave a Reply

Your email address will not be published. Required fields are marked *