ಮುಂದಿನ ಮೂರ್ನಾಲ್ಕು ದಿನ ಭಾರಿ ಮಳೆ: ಐಎಂಡಿ

Please follow and like us:
ಬೆಂಗಳೂರು: ರಾಜ್ಯದಲ್ಲಿ ಅನೇಕ ಕಡೆ ಉತ್ತಮ ಮಳೆಯಾಗಿದ್ದು, ಬಿರುಬೇಸಿಗೆಯ ಧಗೆ ಇದೀಗ ಮಳೆಯಿಂದ ಎಲ್ಲೆಡೆ ತಂಪೇರಿದೆ . ಮುಂದಿನ ಮೂರ್ನಾಲ್ಕು ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, 6 ಜಿಲ್ಲೆಗಳಲ್ಲಿ ಹೈಲರ್ಟ್ ಘೋಷಿಸಲಾಗಿದೆ.

ಶುಕ್ರವಾರ ರಾಜ್ಯದ ಹಲವೆಡೆ ಬಿರುಗಾಳಿ ಸಹಿತ ಧಾರಾಕಾರ ಮಳೆಯಾಗಿದೆ. ಮುಂದಿನ 48 ಗಂಟೆ ಕಾಲ ಹಾಸನ, ಮಂಡ್ಯ ಮೈಸೂರಿನಲ್ಲಿ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಇದನ್ನೂ ಓದಿ: ಸೂಕ್ಷ್ಮ ಸಂವೇದನೆ ಅಸ್ಮಿತೆ ಮತ್ತು ಅಭಿವ್ಯಕ್ತಿ-ಸ್ವಾತಂತ್ರ್ಯ

ಮೇ 4ರಂದು ರಾಮನಗರ, ತುಮಕೂರಿನಲ್ಲಿ ಹೆಚ್ಚಿನ ಮಳೆಯಾಗುವ ಸಂಭವ ಇದೆ. ಚಿಕ್ಕಮಗಳೂರಿನಲ್ಲಿ ಮೇ 3 ರಿಂದ 9ರ ವರೆಗೆ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆಯಿಂದ ಯೆಲ್ಲೋ ಅಲರ್ಟ್ ನೀಡಲಾಗಿದೆ.

ಮೇ 3ರಿಂದ 9ರವರೆಗೆ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಕೊಡಗು, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ, ವಿಜಯನಗರದಲ್ಲಿ ಸಾಧಾರಣ ಮಳೆ ಆಗಲಿದೆ ಎಂದು ಅಂದಾಜಿಸಲಾಗಿದೆ.

ಇದನ್ನೂ ನೋಡಿ: ಮೇ ದಿನದ ವಿಶೇಷ | ಕೆಲಸದ ಅವಧಿ ಎಷ್ಟಿರಬೇಕು? ಕಾರ್ಮಿಕ ಕಾನೂನು ಏನು ಹೇಳುತ್ತದೆ? Janashakthi Media

Please follow and like us:
Donate Janashakthi Media

Leave a Reply

Your email address will not be published. Required fields are marked *