ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಜೂನ್ 13ರ ವರೆಗೆ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದ್ದು, ಗುಡುಗು ಸಹಿತ ಬಿರುಗಾಳಿ ಬೀಸಲಿದೆ ಎಂದಿರುವ ಹವಮಾನ ಇಲಾಖೆ ಕರಾವಳಿ ಜಿಲ್ಲೆ ಹಾಗೂ ಉತ್ತರ ಒಳನಾಡಿನಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಳಗಾವಿ, ಧಾರವಾಡ, ಗದಗ ಜಿಲ್ಲೆಗಳ ಒಂದೆರಡು ಪ್ರದೇಶಘಲ್ಲಿ ಭಾರೀ ಗಾಳಿಯೊಂದಿಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಚದುರಿದ ಭಾರೀ ಮಳೆಯೊಂದಿಗೆ ಪ್ರತ್ಯೇಕ ಭಾರೀ ಅತಿ ಭಾರೀ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಜೂನ್
ಇದನ್ನೂ ಓದಿ: 30 ಮಂಗಗಳ ಹತ್ಯೆ: ವಿಕೃತಿ ಮನಸ್ಸಿನ ಅಟ್ಟಹಾಸ
ಬಾಗಲಕೋಟೆ, ಹಾವೆೇರಿ, ಕಲಬುರಗಿ, ವಿಜಯಪುರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಶಿವಮೊಗ್ಗ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಇದೆ. ಇನ್ನು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರ ಜಿಲ್ಲೆಯ ಹಲವೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಉಡುಪಿ ಸೇರಿದಂತೆ 5 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಬಾಗಲಕೋಟೆ, ಗದಗ ಸೇರಿದಂತೆ 12 ಜಿಲ್ಲೆಗಳಲ್ಲ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇಂದು ಬೆಳಗಾವಿ, ಬೀದರ್, ಧಾರವಾಡ, ಗದಗ, ಕೊಪ್ಪಳ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಜೂನ್
ಇದನ್ನೂ ನೋಡಿ: ಲೋಕಮತ 2024 | ಐದು ರಾಜ್ಯಗಳಲ್ಲಿ ನಡೆಯದ ಬಿಜೆಪಿ ಆಟ | ನಾಯ್ಡು, ನಿತೀಶ್ ಕಿಂಗ್‌ಮೇಕರ್ Janashakthi Media