ಬೆಂಗಳೂರು: ಭಾರತೀಯ ಹವಾಮಾನ ಇಲಾಖೆಯು ರಾಜ್ಯದ ಹಲವು ಜಿಲ್ಲೆಗಳಲ್ಲಿ ಆಗಸ್ಟ್ 29 ರಿಂದ ಸೆ.1 ರ ವರೆಗೆ ನಾಲ್ಕು ದಿನ ಬಿರುಸಿನ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ.ಮಂಗಳವಾರ 14 ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ.
ಬೀದರ್, ಬೆಳಗಾವಿ, ಬಾಗಲಕೋಟೆ, ಶಿವಮೊಗ್ಗ, ದಾವಣಗೆರೆ,ಚಿಕ್ಕ ಮಗಳೂರು, ಚಿತ್ರದುರ್ಗ,ಚಿಕ್ಕಬಳ್ಳಾಪುರ, ತುಮಕೂರು, ಹಾಸನ,ಕೊಡಗು, ಮೈಸೂರು,ರಾಮನಗರ ಹಾಗೂ ಕೋಲಾರ ಜಿಲ್ಲೆಗಳಲ್ಲಿ ಬಿರುಸಿನ ಮಳೆಯಾಗುವ ಸೂಚನೆ ನೀಡಲಾಗಿದೆ.
ಇದನ್ನೂ ಓದಿ:ನಿರುದ್ಯೋಗ ಸಮಸ್ಯೆಯು ನಾಡಿನ ಯುವಜನರನ್ನು ಬಾಧಿಸದಿರಲಿ: ಸಿಎಂ ಸಿದ್ದರಾಮಯ್ಯ
ಆಗಸ್ಟ್ 30 ರಂದು ಚಾಮರಾಜನಗರ,ಚಿಕ್ಕಮಗಳೂರು, 31 ರಂದು ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಚಿಕ್ಕಮಗಳೂರು ಜಿಲ್ಲೆಗಳಿಗೆ ಯೆಲ್ಲೊಅಲರ್ಟ್ ಸೂಚನೆ ನೀಡಲಾಗಿದೆ.
ಕರವಾಳಿ, ಮಲೆನಾಡು ಹಾಗೂ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ನಗರದಲ್ಲೂ ಮೋಡ ಕವಿದ ವಾತಾವರಣ ಇರಲಿದ್ದು ಅಲ್ಲಿಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಹೆಚ್ಚಿದೆ ಎಂದು ಸೂಚನೆ ನೀಡಿದೆ.