ವಾಯುಭಾರ ಕುಸಿತ: 2 ದಿನ ಕರಾವಳಿಯಲ್ಲಿ ಭಾರೀ ಮಳೆ ಸಾದ್ಯತೆ – ಐಎಂಡಿ

ಮಂಗಳೂರು: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತದ ಹಿನ್ನಲೆ ಸಾಧಾರಣ ಮಳೆಯಾಗುತ್ತಿದೆ. ನಗರದಲ್ಲಿ ಅಕ್ಟೋಬರ್‌ 27ರಂದು ಬೆಳಿಗ್ಗೆಯಿಂದಲೇ ತುಂತುರು ಮಳೆಯಾಗುತ್ತಿದೆ. ಇನ್ನೂ ಎರಡು ದಿನ ಕರಾವಳಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಅರಬ್ಬಿಸಮುದ್ರದಲ್ಲಿ ವಾಯುಭಾರ ಕುಸಿತದಿಂದ ಭಾರೀ ಮಳೆಯಾಗುತ್ತಿದೆ. ಇನ್ನೊಂದೆಡೆ ಬಂಗಾಳ ಕೊಲ್ಲಿಯಲ್ಲಿ ಮೊಂತಾ ಚಂಡಮಾರುತ ಎದ್ದಿದ್ದು, ಭಾರೀ ಮಳೆಯ ಅಲರ್ಟ್ ನೀಡಲಾಗಿದೆ. ಇನ್ನು ಕರಾವಳಿಯ ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗೆ ಸೋಮವಾರ ‘ಆರೆಂಜ್ ಅಲರ್ಟ್’ ನೀಡಲಾಗಿದ್ದು, ಈ ಜಿಲ್ಲೆಗಳ ಕೆಲವೆಡೆ ನಿರಂತರ ಗಾಳಿಯೊಂದಿಗೆ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ.

ಇದನ್ನೂ ಓದಿ: ಧರ್ಮಸ್ಥಳ ಪ್ರಕರಣ: ಅಕ್ಟೋಬರ್ 31ರ ಒಳಗೆ ಎಸ್‌ಐಟಿ ವರದಿ ಸಲ್ಲಿಸಲಿದ್ದಾರೆ – ಜಿ ಪರಮೇಶ್ವರ್

ದಕ್ಷಿಣ ಕನ್ನಡ ಜಿಲ್ಲೆಯ ಒಂದೆರಡು ಕಡೆ ಗಂಟೆಗೆ 30ರಿಂದ 40 ಕಿ.ಮೀ. ವೇಗದಲ್ಲಿ ಗಾಳಿಯೊಂದಿಗೆ ಭಾರಿ ಮಳೆಯಾಗುವ ಸಂಭವವಿದೆ. ಉತ್ತರ ಹಾಗೂ ದಕ್ಷಿಣ ಒಳನಾಡಿನ ಎಲ್ಲ ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್’ ಘೋಷಿಸಲಾಗಿದೆ.

ಕರಾವಳಿಯ ಎಲ್ಲ ಹಾಗೂ ದಕ್ಷಿಣ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಅಕ್ಟೋಬರ್‌ 28ರಂದು ಭಾರಿ ಮಳೆಯಾಗುವ ಸಾಧ್ಯತೆಯಿದೆ. ಮುಂದಿನ ಒಂದು ವಾರ ಮಳೆ ಮುಂದುವರಿಯುವ ಬಗ್ಗೆ ಇಲಾಖೆ ಮುನ್ಸೂಚನೆ ನೀಡಿದೆ.

ಸಮುದ್ರದಲ್ಲಿ ಮೀನುಗಾರರಿಗೆ ಕೋಸ್ಟ್ ಗಾರ್ಡ್ ವಾರ್ನಿಂಗ್ ನೀಡಿದ್ದು, ಕೂಡಲೇ ದಡ ಸೇರುವಂತೆ ತಿಳಿಸಿದೆ.

ಇದನ್ನೂ ನೋಡಿ: ದ್ವೇಷ ಬಿತ್ತುವ ಪಥಸಂಚಲನ ಬೇಡ – ಸಂವಿಧಾನ ದೀವಿಗೆ ಬೆಳಗುವ ಸೌಹಾರ್ದ ನಡಿಗೆ ಬೇಕು Janashakthi Media

Donate Janashakthi Media

Leave a Reply

Your email address will not be published. Required fields are marked *