ಬೆಂಗಳೂರು: ಜೂನ್ 10ರಂದು ರಾಜ್ಯಾದ್ಯಂತ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ರೆಡ್ ಅಲರ್ಟ್ ಘೋಷಸಲಾಗಿದೆ. ಕರಾವಳಿ ಪ್ರದೇಶಗಳಲ್ಲಿ ಸಾಧಾರಣದಿಂದ ಭಾರಿ ಮಳೆಯಾಗಲಿದೆ. ಮಲೆನಾಡು ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಮಾನ ಇಲಾಖೆ ಹೇಳಿದೆ.
ದಕ್ಷಿಣ ಒಳನಾಡಿನಲ್ಲಿ ವ್ಯಾಪಕವಾಗಿ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ವಿವಿಧೆಡೆ ಗುಡುಗು ಸಹಿತ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.
ಇದನ್ನು ಓದಿ : ಪ್ರಜ್ವಲ್ ರೇವಣ್ಣ ಇಂದು ಮತ್ತೆ ನ್ಯಾಯಾಲಯದ ಮುಂದೆ
ದಕ್ಷಿಣ ಒಳನಾಡಿನ ಬಹುತೇಕ ಕಡೆಗಳಲ್ಲಿ ವ್ಯಾಪಕವಾಗಿ ಹಗುರವಾದ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬೆಳಗಾವಿ, ಬೀದರ್, ಬಾಗಲಕೋಟೆ, ವಿಜಯಪುರ, ಕಲಬುರಗಿ ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕೆಲವೊಮ್ಮೆ ಗುಡುಗು, ಮಿಂಚು ಇರಲಿದೆ.
ಮಲೆನಾಡಿನ ಹಾಸನ, ಕೊಡಗು, ಚಿಕ್ಕಮಗಳೂರು ಮತ್ತು ಶಿವಮೊಗ್ಗದಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿಯ ದಕ್ಷಿಣ ಕನ್ನಡ ಮತ್ತು ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ರಾಜಧಾನಿ ಬೆಂಗಳೂರಿನಲ್ಲಿ ಚದುರಿದಂತೆ ಮಳೆಯಾಗುವ ನಿರೀಕ್ಷೆ ಇದೆ.
ಇದನ್ನು ನೋಡಿ : ದೇವೇಗೌಡ್ರೆ ಜನ ನಿಮಗೆ ಅಧಿಕಾರ ಕೊಟ್ರು – ನೀವು ವಿಕೃತಿ ಕಾಮಿಯನ್ನು ಕೊಟ್ರಿ. ನಿಮಗೆ ನಾವು ತಕ್ಕ ಪಾಠ ಕಲಿಸುತ್ತೇವೆ.