ಬೆಂಗಳೂರು: ನಗರದಲ್ಲಿ ಧಾರಾಕಾರ ಮಳೆಯಾಗುತ್ತಿದ್ದೆ. ಬೆಳಿಗ್ಗೆಯಿಂದಲೂ ದಟ್ಟವಾದ ಮೋಡಕವಿದ ವಾತಾವರಣವಿದ್ದೂ, ಅಲ್ಲಲ್ಲಿ ಮಳೆಯಾಗುತ್ತಿತ್ತು.
ಮಧ್ಯಾಹ್ನವಾಗುತ್ತಿದ್ದಂತೆ ಭಾರಿ ಮಳೆ ಅಬ್ಬರಿಸಿದ್ದು, ನೋಡ ನೋಡುತ್ತಿದ್ದಂತೆ ರಸ್ತೆಗಳು ನದಿಯಂತಾಗಿವೆ. ಗುಂಡಿಮಯ ರಸ್ತೆಗಳು ಜಲಾವೃತಗೊಂಡಿದ್ದು ಅವಾಂತರ ಸೃಷ್ಟಿಯಾಗಿವೆ.
ಇದನ್ನೂ ಓದಿ: ತುಂಗಭದ್ರಾ ಜಲಾಶಯದ 7 ಗೇಟ್ಗಳಿಗೆ ಹಾನಿ; ರೈತರು ಆತಂಕ
ಮೆಜೆಸ್ಟಿಕ್, ವಿಧಾನಸೌಧ, ಶಾಂತಿ ನಗರ, ಕೆ.ಆರ್. ಮಾರುಕಟ್ಟೆ, ರಿಚ್ಮಂಡ್ ವೃತ್ತ, ಎಂ.ಜಿ.ರೋಡ್, ಕಸ್ತೂರಬಾ ರಸ್ತೆ, ರಾಜಾಜಿನಗರ, ಮಲ್ಲೇಶ್ವರಂ, ವಿಜಯನಗರ, ಗಿರಿನಗರ, ಆರ್.ಆರ್.ನಗರ, ಮೈಸೂರು ರಸ್ತೆ, ನಯಂಡಹಳ್ಳಿ, ಕೆಂಗೇರಿ ಸೇರಿದಂತೆ ಸುತ್ತಮುತ್ತ ಭಾರಿ ಮಳೆಯಾಗುತ್ತಿದ್ದು, ವಾಹನ ವಸಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಮಳೆ ಅವಾಂತರದ ನಡುವೆ ಹಲವೆಡೆ ವಿದ್ಯುತ್ ವ್ಯತ್ಯಯವುಂಟಾಗಿದೆ. ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ್ದು, ಜನರು ಪರದಾಡುವಂತಾಗಿದೆ.
ಇದನ್ನೂ ನೋಡಿ: ಧರ್ಮಸ್ಥಳದಲ್ಲಿ ದೌರ್ಜನ್ಯ ನಡೆಸಿದವರು ಕಟಕಟೆಗೆ ಬರಬೇಕು, ಅವರಿಗೆ ಶಿಕ್ಷೆಯಾಗಬೇಕು Janashakthi Media
