ಬೆಂಗಳೂರು: ನಗರ ಸೇರಿ ರಾಜ್ಯದ 18 ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಮೇ 18 ಭಾನುವಾರ ಬೆಂಗಳೂರಿನಲ್ಲಿ ವಿಪರೀತ ಮಳೆ ಸುರಿದಿದ್ದು, ಎಲ್ಲೆಡೆ ನೀರು ನಿಂತಿದೆ. ರಾಜ್ಯ
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಶಿವಮೊಗ್ಗ, ತುಮಕೂರಿನಲ್ಲಿ ಹೆಚ್ಚು ಮಳೆಯಾಗಲಿದ್ದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಬೆಂಗಳೂರು, ಮೈಸೂರು, ಮಂಡ್ಯ, ಕೋಲಾರ, ದಾವಣಗೆರೆ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ವಿಜಯಪುರ, ಕೊಪ್ಪಳ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಒಟ್ಟಿನಲ್ಲಿ ಮೇ 24ರವರೆಗೂ ರಾಜ್ಯದಲ್ಲಿ ಮಳೆ ಮುಂದುವರೆಯಲಿದೆ.
ಇದನ್ನೂ ಓದಿ: ಲಿಂಗಸುಗೂರು ಕೊಲೆ ಪ್ರಕರಣದಲ್ಲಿ 10 ಆರೋಪಿಗಳಿಗೆ ಜೀವಾವಧಿ ಶಿಕ್ಷೆ
ಎಲ್ಲೆಲ್ಲಿ ಮಳೆಯಾಗಿದೆ?
ಮಂಕಿ, ಹೊನ್ನಾವರ, ಪುತ್ತೂರು, ಅಂಕೋಲಾ, ಕ್ಯಾಸಲ್ ರಾಕ್, ಕುಮಟಾ, ಹುನಗುಂದ, ಖಾನಾಪುರ, ಅಫ್ಜಲ್ಪುರ, ಹುಬ್ಬಳ್ಳಿ, ಅಣ್ಣಿಗೆರೆ, ಹುಮ್ನಾಬಾದ್, ಗುರುಮಿಟ್ಕಲ್, ಹಿಡಕಲ್, ಸಂಕೇಶ್ವರ, ಶಿಗ್ಗಾಂವ್, ಜೇವರಗಿ, ಕಲಬುರಗಿಯಲ್ಲಿ ಮಳೆಯಾಗಿದೆ. ಜಗಳೂರು, ಕೊಟ್ಟಿಗೆಹಾರ, ವೈಎನ್ ಹೊಸಕೋಟೆ, ಚಿಕ್ಕಮಗಳೂರು, ಮದ್ದೂರು, ಕೊಬ್ಬನಹಳ್ಳಿ, ನಾಯಕನಹಟ್ಟಿ, ಚನ್ನಗಿರಿ, ನಾಗಮಂಗಲ, ಸಿರಾ, ಕುಣಿಗಲ್, ಅಜ್ಜಂಪುರ, ಬೇಲೂರು, ಮೈಸೂರು, ಭದ್ರಾವತಿ, ಜಯಪುರ, ಪರಶುರಾಂಪುರ, ನಾಪೋಕ್ಲುವಿನಲ್ಲಿ ಮಳೆಯಾಗಿದೆ.
ಧರ್ಮಸ್ಥಳ, ಚಿಕ್ಕೋಡಿ, ತಾವರಗೇರಾ, ಧಾರವಾಡ, ಮುದಗಲ್, ಚಿಂಚೋಳಿ, ದೇವರಹಿಪ್ಪರಗಿ, ಕಕ್ಕೇರಿ, ಸಿಂಧಗಿ, ಲಿಂಗಸುಗೂರು, ಜೇವರಗಿ, ಹುಣಸಗಿ, ಆಲಮಟ್ಟಿಯಲ್ಲಿ ಮಳೆಯಾಗಿದೆ.ರಾಯಚೂರಿನಲ್ಲಿ 38.5 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನ ಎಚ್ಎಎಲ್ನಲ್ಲಿ 29.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 31.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 30.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಹೊನ್ನಾವರದಲ್ಲಿ 33.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 34.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 33.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಬೀದರ್ನಲ್ಲಿ 34.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ,22.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 34.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 31.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಗದಗದಲ್ಲಿ 34.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 37.2ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 34.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 35.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಯಾವ್ಯಾವ ರಾಜ್ಯಗಳಲ್ಲಿ ಮಳೆಯಾಗಲಿದೆ?
ಮೇ 19 ರಿಂದ 24 ರವರೆಗೆ ಕರ್ನಾಟಕ, ಗೋವಾ, ಕೊಂಕಣ ಮತ್ತು ಕೇರಳದಂತಹ ಪಶ್ಚಿಮ ಕರಾವಳಿ ಪ್ರದೇಶಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇದಲ್ಲದೆ, ಮುಂದಿನ ಐದರಿಂದ ಆರು ದಿನಗಳಲ್ಲಿ ಈಶಾನ್ಯ ಭಾರತದಲ್ಲಿ ಭಾರೀ ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ಎಚ್ಚರಿಕೆಗಳನ್ನು ನೀಡಲಾಗಿದೆ.
ಅದೇ ಸಮಯದಲ್ಲಿ, ಜಮ್ಮು ಮತ್ತು ಕಾಶ್ಮೀರದಲ್ಲಿ ಮೇ 19 ರವರೆಗೆ, ಪಶ್ಚಿಮ ರಾಜಸ್ಥಾನದಲ್ಲಿ ಮೇ 19-22 ರವರೆಗೆ ಶಾಖದ ಅಲೆ ಮುಂದುವರೆಯಲಿದೆ.
ಈಶಾನ್ಯ ಭಾರತದ ಬಗ್ಗೆ ಹೇಳುವುದಾದರೆ, ಮೇ 19-20 ರವರೆಗೆ ಅರುಣಾಚಲ ಪ್ರದೇಶದಲ್ಲಿ, ಮೇ 19-24 ರವರೆಗೆ ಅಸ್ಸಾಂ, ಮೇಘಾಲಯ, ಮೇ 19 ರಿಂದ ತ್ರಿಪುರ, ನಾಗಾಲ್ಯಾಂಡ್, ಮೇ 19 ರಿಂದ 20 ರವರೆಗೆ ಅಸ್ಸಾಂ, ಮೇಘಾಲಯದಲ್ಲಿ ಭಾರೀ ಮಳೆಯಾಗುವ ಎಚ್ಚರಿಕೆ ನೀಡಲಾಗಿದೆ.
ಇದನ್ನೂ ನೋಡಿ: ಬಿಜೆಪಿ ಮುಸ್ಲಿಮರ ಹಕ್ಕುಗಳನ್ನು ಕಿತ್ತುಕೊಳ್ಳುತ್ತಿದೆ – ಕೆ.ಎನ್ ಉಮೇಶ್ Janashakthi Media