ಬೆಂಗಳೂರು: ರಾಜ್ಯದಲ್ಲಿ ಇನ್ನೂ ನಾಲ್ಕು ದಿನಗಳ ಕಾಲ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದೂ, ಚಂಡಮಾರುತದ ಹಿನ್ನೆಲೆಯಲ್ಲಿ ರಾಜ್ಯದ 18 ಜಿಲ್ಲೆಗಳಲ್ಲಿ ಏಪ್ರಿಲ್ 17ರಿಂದಲೇ ಮತ್ತೆ ಮಳೆ ಶುರುವಾಗಲಿದೆ ಎಂದು ಮಾಹಿತಿ ನೀಡಿದೆ.
ಉಡುಪಿ, ದಕ್ಷಿಣ ಕನ್ನಡ, ಗದಗ, ಹಾವೇರಿ, ಧಾರವಾಡ, ಚಿಕ್ಕಮಗಳೂರು, ಕೊಡಗು, ಮೈಸೂರು, ಚಾಮರಾಜನಗರ, ಹಾಸನ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ.
ಇದನ್ನೂ ಓದಿ: ರಮೇಶ್ ಜಾರಕಿಹೊಳಿ| ಬ್ಯಾಂಕ್‌ಗೆ 439 ಕೋಟಿ ವಂಚನೆ: ಚಾರ್ಜ್‌ಶೀಟ್ ಸಲ್ಲಿಸಲು ಹೈಕೋರ್ಟ್ ಅನುಮತಿ
ಏಪ್ರಿಲ್ 21ರವರೆಗೂ ಧಾರಾಕಾರ ಮಳೆಯಾಗಲಿರುವ ಹಿನ್ನೆಲೆಯಲ್ಲಿ ರೈತರು ಎಚ್ಚರಿಕೆಯಿಂದ ಇರಬೇಕು ಎಂದು ಸೂಚನೆ ನೀಡಿದೆ.
ಇದನ್ನೂ ನೋಡಿ: ಅಂಬೇಡ್ಕರ್ ಸ್ಥಾಪಿಸಿದ “ಅಖಿಲ ಭಾರತ ಪರಿಶಿಷ್ಟ ಜಾತಿಗಳ ಒಕ್ಕೂಟ” AISCF ಪಕ್ಷದ ಪ್ರಣಾಳಿಕೆಯಲ್ಲಿ ಏನಿದೆ?