ಜುಲೈ 3 ರಿಂದ ರಾಜ್ಯದಲ್ಲಿ ಭಾರಿ ಮಳೆ; ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು: ಜುಲೈ 3 ರಿಂದ ರಾಜ್ಯದಲ್ಲಿ ಮಳೆಯ ಅಬ್ಬರ ಹೆಚ್ಚಳವಾಗಲಿದ್ದು, ಹಲವು ಜಿಲ್ಲೆಗಳಿಗೆ ಭಾರತೀಯ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮುಂದಿನ ಮೂರ್ನಾಲ್ಕು ದಿನಗಳ ಕಾಲ ಸಾಧಾರಣ ಮಳೆಯಾಗಲಿದ್ದು, ಜುಲೈ 3ರಿಂದ ಹೆಚ್ಚಲಿದೆ.

ಇದನ್ನೂ ಓದಿ: ಹುತಾತ್ಮ ಸಂಗಾತಿ ಶ್ರೀನಿವಾಸ್ ಬಜಾಲ್ ನೆನಪಿನಲ್ಲಿ 23ನೇ ವರುಷದ ರಕ್ತದಾನ ಶಿಬಿರ

ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರದಲ್ಲಿ ಸಾಧಾರಣ ಮಳೆಯಾಗಲಿದೆ.

ದಕ್ಷಿಣ ಒಳನಾಡಿನಲ್ಲಿ ಜುಲೈ 3ರ ಬಳಿಕ ಮಳೆ ಹೆಚ್ಚಾಗಲಿದ್ದು, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದಲ್ಲಿ ಸಾಧಾರಣ ಮಳೆಯಾಗಲಿದೆ.

ಇದನ್ನೂ ನೋಡಿ: 50 ವರ್ಷ| ಆಂತರಿಕ ತುರ್ತುಪರಿಸ್ಥಿತಿಯ ಕರಾಳ ದಿನಗಳು | 25 ಜೂನ್‌ 1975

Donate Janashakthi Media

Leave a Reply

Your email address will not be published. Required fields are marked *