ಜೂನ್‌ 14ರಿಂದ ರಾಜ್ಯದಲ್ಲಿ ಭಾರೀ ಮಳೆ: ಹವಮಾನ ಇಲಾಖೆ

ಬೆಂಗಳೂರು: ಜೂನ್‌ 14 ಶನಿವಾರದಿಂದ ರಾಜ್ಯದಲ್ಲಿ ಮಳೆ ಮತ್ತಷ್ಟು ಹೆಚ್ಚಾಗಲಿದ್ದು, ಕೆಲ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಸೂಚನೆ ನೀಡಿದೆ. ಜೂನ್‌

ರಾಜ್ಯದ ಹಲವು ಜಿಲ್ಲೆಗಳಲ್ಲಿ ಈಗಾಗಲೇ ಧಾರಾಕಾರ ಮಳೆಯಾಗುತ್ತಿದ್ದು, ಭಾರೀ ಅವಾಂತರ ಸೃಷ್ಟಿಯಾಗಿದೆ. ಈ ಬೆನ್ನಲ್ಲೇ ರಾಜ್ಯದ ಕರಾವಳಿ ಜಿಲ್ಲೆಗಳು ಸೇರಿದಂತೆ ಆರು ಜಿಲ್ಲೆಗಳಲ್ಲಿ ಇಂದಿನಿಂದ ಅತೀ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.

ಇದನ್ನೂ ಓದಿ: 2029 ಲೋಕಸಭಾ ಚುನಾವಣೆ: ಮಹಿಳೆಯರಿಗೆ 33% ಮೀಸಲು ಸಾದ್ಯತೆ

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದ್ದು, ಇಂದು ರೆಡ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ.

ಇನ್ನು ಧಾರವಾಡ, ಬೆಳಗಾವಿ, ಹಾವೇರಿ, ಹಾಸನ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಮಳೆ ಅಬ್ಬರಿಸಿ ಬೊಬ್ಬಿರಿಯಲಿದ್ದು, ಹಳದಿ ಅಲರ್ಟ್‌ ಘೋಷಣೆ ಘೋಷಣೆ ಮಾಡಲಾಗಿದೆ.

ಇನ್ನು ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಜೂನ್.‌17ರವರೆಗೆ ಹಗುರದಿಂದ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದ್ದು, ರಾಜ್ಯದ ಜನತೆ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.

ಇದನ್ನೂ ನೋಡಿ: ಪರಿಸರ ರಕ್ಷಣೆ ನಮ್ಮೆಲ್ಲರ ಹೊಣೆ | ವಿಶ್ಲೇಷಣೆ – ಅಹಮದ್ ಹಗರೆ Janashakthi Media

Donate Janashakthi Media

Leave a Reply

Your email address will not be published. Required fields are marked *