ಬೆಂಗಳೂರು: ನವೆಂಬರ್ 2 ರಿಂದ ರಾಜ್ಯದ ಕೆಲವು ಭಾಗಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ.
ದಕ್ಷಿಣ ಒಳನಾಡಿನ ಪ್ರದೇಶಗಳಾದ ಬೆಂಗಳೂರು ಗ್ರಾಮೀಣ, ಬೆಂಗಳೂರು ನಗರ, ಚಿತ್ರದುರ್ಗ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮೈಸೂರು, ಶಿವಮೊಗ್ಗ ಮತ್ತು ತುಮಕೂರು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಕರಾವಳಿಯ ಒಂದೆರಡು ಕಡೆಗಳಲ್ಲಿ ಜಿಟಿ ಜಿಟಿ ಮಳೆಯಿಂದ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನಲ್ಲಿ ಯಾವುದೇ ಮಳೆ ಮುನ್ಸೂಚನೆ ಇರುವುದಿಲ್ಲ. ಬದಲಿಗೆ ಒಣ ಹವೆ ಇರುವ ಸಾಧ್ಯತೆ ಇದೆ.
ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಾಮಾನ್ಯವಾಗಿ ಮೋಡ ಮುಸುಕಿದ ವಾತಾವರಣ ಇರಲಿದ್ದು, ಕೆಲವು ಭಾಗಗಳಲ್ಲಿ ಮಳೆಯಾಗಲಿದೆ. ನವೆಂಬರ್ 2ರ ಬಳಿಕ ವ್ಯಾಪಕ ಮಳೆಯಾಗಲಿದೆ ಎಂದು ಎಚ್ಚರಿಕೆಯನ್ನು ತಜ್ಞರು ನೀಡಿದ್ದಾರೆ.