ರಾಜ್ಯಾದ್ಯಂತ ಗುಡುಗು ಸಹಿತ ಭಾರೀ ಮಳೆ ನಿರೀಕ್ಷೆ: ಕೆಎಸ್‌ಎನ್‌ಡಿಎಂಸಿ

Please follow and like us:
ಬೆಂಗಳೂರು: ನಗರದಲ್ಲಿ ಅಕ್ಟೋಬರ್​ 6ರಂದು ಸಾಧಾರಣದಿಂದ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಹಾಗೂ ನಗರದಲ್ಲಿ ದಿನವಿಡೀ ಮೋಡ ಕವಿದ ವಾತಾವರಣ ಇರಲಿದ್ದು, ಕನಿಷ್ಠ ಮತ್ತು ಗರಿಷ್ಠ ತಾಪಮಾನ ಕ್ರಮವಾಗಿ 21 ಡಿಗ್ರಿ ಸೆಲ್ಸಿಯಸ್ ಮತ್ತು 28 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ ಎಂದು ಹವಮಾನ ಇಲಾಖೆ ವರದಿ ಮಾಡಿದೆ. ರಾಜ್ಯಾ

ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರ (KSNDMC) 7 ದಿನಗಳ ಹವಮಾನ ವರದಿಯನ್ನು ತನ್ನ ಎಕ್ಸ್​ ಖಾತೆಯಲ್ಲಿ ಹಂಚಿಕೊಂಡಿದ್ದು, ಅಕ್ಟೋಬರ್‌ 6ರಂದು ರಾಜ್ಯಾದ್ಯಂತ ಗುಡುಗು ಸಹಿತ ಭಾರೀ ಮಳೆಯಾಗುವ ನಿರೀಕ್ಷೆಇದೆ. ಹಾಗೂ ಅಕ್ಟೋಬರ್ 8 ರಿಂದ 10 ರವರೆಗೆ ಮಲೆನಾಡು ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ ಎಂದು ಬರೆದುಕೊಂಡಿದೆ.

ಇದನ್ನೂ ಓದಿ: ಗ್ಯಾರಂಟಿ ಯೋಜನೆಗಳ ಯಶಸ್ವಿ ಬಿಜೆಪಿಗರನ್ನು ಆತಂಕಕ್ಕೆ ತಳ್ಳಿದೆ: ಸಿಎಂ ಸಿದ್ದರಾಮಯ್ಯ

ಯಾವ ಪ್ರದೇಶಗಳಲ್ಲಿ ಮಳೆಯಾಗುವ ಸಾಧ್ಯತೆ?

ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಬಳ್ಳಾರಿ, ಕೋಲಾರ, ಚಿಕ್ಕಬಳ್ಳಾಪುರ, ಚಿತ್ರದುರ್ಗ ಮತ್ತು ತುಮಕೂರು ಸೇರಿದಂತೆ ಇತರ ಪ್ರದೇಶಗಳಲ್ಲಿ ಗುಡುಗು, ಮಿಂಚಿನೊಂದಿಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ನಗರದಾದ್ಯಂತ ಆರ್ದ್ರತೆಯು ಸುಮಾರು ಶೇ. 88 ರಷ್ಟು ಹಾಗೂ ವಾಯು ಗುಣಮಟ್ಟ ಸೂಚ್ಯಂಕ (AQI) ಸುಮಾರು 30 ರಷ್ಟಿರುವ ನಿರೀಕ್ಷೆಯಿದೆ. ಇದು ನಗರ ಮತ್ತು ಸುತ್ತಮುತ್ತಲಿನ ಗಾಳಿಯ ಗುಣಮಟ್ಟವನ್ನು ಸೂಚಿಸುತ್ತದೆ.

ನಗರದಾದ್ಯಂತ ಸುರಿಯುವ ಮಳೆಗೆ ವಿದ್ಯುತ್​ ವ್ಯತ್ಯಯ ಉಂಟಾಗಬಹುದು. ಸಂಚಾರದಲ್ಲಿ ಜನದಟ್ಟಣೆ ಹಾಗೂ ಮರದ ಕೊಂಬೆಗಳು ನೆಲಕ್ಕುರುಳುವ ಸಾಧ್ಯತೆ ಇರುತ್ತದೆ. ಹಾಗಾಗಿ ನಿವಾಸಿಗಳು ಮನೆಯೊಳಗೆ ಕಿಟಕಿ ಮತ್ತು ಬಾಗಿಲುಗಳನ್ನು ಮುಚ್ಚಿಕೊಳ್ಳುವಂತೆ ಇಲಾಖೆ ಸಲಹೆ ನೀಡಿದೆ.

ಇದನ್ನೂ ನೋಡಿ: ಅರಳುವ ಮುನ್ನವೇ ಬಾಡಿ ಹೋದ ಹೂವು ಸೌಜನ್ಯ | ಮೇಘಾ Janashakthi Media

Please follow and like us:
Donate Janashakthi Media

Leave a Reply

Your email address will not be published. Required fields are marked *