ಬೆಂಗಳೂರು | ಹೆಬ್ಬಾಳ-ಸರ್ಜಾಪುರ ಮೆಟ್ರೋ ಯೋಜನೆಗೆ ಕೇಂದ್ರ ಗ್ರೀನ್ ಸಿಗ್ನಲ್ ಇಲ್ಲ

ಬೆಂಗಳೂರು: ಕೇಂದ್ರ ಸರ್ಕಾರ  ಹೆಬ್ಬಾಳ-ಸರ್ಜಾಪುರ ಡಬಲ್ ಡೆಕ್ಕರ್ ಮೆಟ್ರೋ ಕಾರಿಡಾರ್‌ ಯೋಜನೆಗೆ  ಅನುಮೋದನೆ ನೀಡಲು ಹಿಂದೇಟು ಹಾಕಿದೆ. ಈ ಯೋಜನೆ ಮೆಟ್ರೋದಂತಹ ಸಾರ್ವಜನಿಕ ಸಾರಿಗೆ ಸಂಪರ್ಕ ವ್ಯವಸ್ಥೆಯ ಉದ್ದೇಶಕ್ಕೆ ಧಕ್ಕೆ ಉಂಟು ಮಾಡಲಿದೆ ಎಂದು ಅಭಿಪ್ರಾಯಪಟ್ಟಿದೆ. ಕೇಂದ್ರದ ಈ ನಿಲುವು ರಾಜ್ಯ ಸರ್ಕಾರದ ಉದ್ದೇಶಿತ ಯೋಜನೆಗೆ ಹಿನ್ನಡೆ ಉಂಟು ಮಾಡಿದೆ.

ಈ ನಿಟ್ಟಿನಲ್ಲಿ ಹೆಬ್ಬಾಳ – ಸರ್ಜಾಪುರ ಮೆಟ್ರೋ ಕಾರಿಡಾರ್‌ ನಿರ್ಮಾಣಕ್ಕೆ ಮುಂದಾಗಿತ್ತು. ಎಲಿವೇಟೆಡ್ ಮೆಟ್ರೋ ಮಾರ್ಗಗಳನ್ನು ಡಬಲ್ ಡೆಕ್ಕರ್ ಮಾದರಿಯಲ್ಲಿ ನಿರ್ಮಿಸಬೇಕು ಎಂಬುವುದು ರಾಜ್ಯ ಸರ್ಕಾರದ ನಿಲುವಾಗಿದೆ. 2024 ರಲ್ಲಿ ರಾಜ್ಯ ಸರ್ಕಾರ ಈ ಯೋಜನೆಗೆ ಅನುಮೋದನೆ ನೀಡಿತ್ತು.

ಇದನ್ನೂ ಓದಿ : ಕೊಲೆ ಪ್ರಕರಣ: ಬೈರತಿ ಬಸವರಾಜ್‌ ಸಲ್ಲಿಸಿದ್ದ ಜಾಮೀನು ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್‌

ಸರ್ಜಾಪುರದ ಐಟಿ ಹಬ್, ಸೆಂಟ್ರಲ್ ಬಿಸಿನೆಸ್ ಡಿಸ್ಟ್ರಿಕ್ಟ್ ಮತ್ತು ಹೆಬ್ಬಾಳವನ್ನು ಸಂಪರ್ಕ ಮಾಡಲು ಇದರಿಂದ ಅನುಕೂಲ ಆಗಲಿದೆ.  37 ಕಿಮೀ ಉದ್ದದ ಹೆಬ್ಬಾಳ-ಸರ್ಜಾಪುರ ಮೆಟ್ರೋ ಮಾರ್ಗ ಸುಮಾರು ₹28,000 ಕೋಟಿ ವೆಚ್ಚದ ಯೋಜನೆಯಾಗಿದೆ. ಆದರೆ ಇದು ಡಬಲ್ ಡೆಕ್ಕರ್ ಮಾರ್ಗ ಆಗಿರುವುದರಿಂದ ಕೇಂದ್ರ ಅನುಮತಿ ನೀಡಲು ಹಿಂದೇಟು ಹಾಕಿದೆ.

ಈ ಕುರಿತಾಗಿ ಬೆಂಗಳೂರು ಸೆಂಟ್ರಲ್ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ಪಿವಿ ಮೋಹನ್ , “ಹೆಬ್ಬಾಳ – ಸರ್ಜಾಪುರ ಮೆಟ್ರೋ ಕಾರಿಡಾರ್ ಗೆ ಕೇಂದ್ರದ ಅನುಮತಿ ಪಡೆಯುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ. ಮೆಟ್ರೋ ಹಾಗೂ ರಸ್ತೆ ಎರಡನ್ನೂ ಒಳಗೊಂಡ ಈ ಯೋಜನೆಯಿಂದ ಸಾರ್ವಜನಿಕ ಸಾರಿಗೆ ವ್ಯವಸ್ಥೆಗೆ ಧಕ್ಕೆ ಉಂಟಾಗಲಿದೆ ಎಂದು ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯ ಎಚ್ಚರಿಸಿದೆ” ಎಂದು ಟ್ವೀಟ್ ಮೂಲಕ ತಿಳಿಸಿದ್ದಾರೆ.

ಬೆಂಗಳೂರಿನಂತಹ ನಗರದಲ್ಲಿ ಸ್ಥಳಾವಕಾಶ ಉಳಿಸುವ ನಿಟ್ಟಿನಲ್ಲಿ ಈ ಯೋಜನೆಗೆ ಮುಂದಾಗಿದೆ. ಮೆಟ್ರೋ ಮಾರ್ಗವನ್ನು ಡಬಲ್ ಡೆಕ್ಕರ್ ಮಾದರಿಯಲ್ಲಿ ನಿರ್ಮಾಣ ಮಾಡಬೇಕು ಎಂಬುವುದು ರಾಜ್ಯ ಸರ್ಕಾರದ ನಿಲುವಾಗಿದೆ. ಮೇಲಿನ ಹಂತದಲ್ಲಿ ಮೆಟ್ರೋ ಹಳಿಗಳು ಮತ್ತು ಕೆಳಗೆ ರಸ್ತೆಗಳನ್ನು ನಿರ್ಮಾಣ ಮಾಡುವುದು ಉದ್ದೇಶವಾಗಿದೆ.

ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯ ಹಾಗೂ ಪ್ರಧಾನ ಮಂತ್ರಿ ಕಾರ್ಯಾಲಯ ಈ ಬಗ್ಗೆ ತನ್ನ ಕಳವಳವನ್ನು ವ್ಯಕ್ತಪಡಿಸಿವೆ. ರಾಜ್ಯ ಸರ್ಕಾರದ ಈ ನಿಲುವಿಗೆ ಕೇಂದ್ರ ಸರ್ಕಾರ ಕಳವಳ ವ್ಯಕ್ತಪಡಿಸಿದೆ. ಡಬಲ್ ಡೆಕ್ಕರ್ ಮಾರ್ಗ ನಿರ್ಮಿಸುವುದರಿಂದ ಮೆಟ್ರೋ ಯೋಜನೆಯ ಮೂಲ ಉದ್ದೇಶಕ್ಕೆ ಕೊಡಲಿ ಏಟು ಎಂದು ಅಭಿಪ್ರಾಯಪಟ್ಟಿದೆ.

ಬೆಂಗಳೂರಿನಂತಹ ನಗರದಲ್ಲಿ ಮೆಟ್ರೋ ಆರಂಭಿಸಿರುವ ಉದ್ದೇಶ ಸಂಚಾರ ದಟ್ಟಣೆ ಕಡಿಮೆ ಮಾಡುವುದು ಹಾಗೂ ಮಾಲಿನ್ಯ ನಿಯಂತ್ರಣ ಮಾಡುವುದಾಗಿದೆ. ಅಲ್ಲದೆ ಇಂಧನ ಉಳಿತಾಯದ ಉದ್ದೇಶವೂ ಇದೆ. ಆದರೆ ಡಬಲ್ ಡೆಕ್ಕರ್ ನಿಂದಾಗಿ ಜನರು ಸಾರ್ವಜನಿಕ ಸಾರಿಗೆಯ ಬದಲಾಗಿ ಖಾಸಗಿ ವಾಹನಗಳನ್ನು ಬಳಸಲು ಪ್ರೇರೇಪಿಸಿದಂತಾಗುತ್ತದೆ. ಹೀಗಾಗಿ ಮೆಟ್ರೋದಂತಹ ಸಾರ್ವಜನಿಕ ಸಾರಿಗೆ ವ್ಯಸಸ್ಥೆಯನ್ನು ಪರಿಣಾಮಕಾರಿಯಾಗಿ ಬಳಕೆ ಮಾಡಲು ಸಾಧ್ಯವಿಲ್ಲ ಎಂದಿದೆ. ಹೀಗಾಗಿ ಯೋಜನೆಗೆ ಹಿನ್ನಡೆ ಉಂಟಾಗಿದೆ.

ಡಬಲ್ ಡೆಕ್ಕರ್ ವಿಚಾರವಾಗಿ ಕೇಂದ್ರ ಸರ್ಕಾರದ ಕಳವಳಕ್ಕೆ ರಾಜ್ಯ ಸರ್ಕಾರ ಸ್ಪಷ್ಟನೆಯನ್ನು ನೀಡುತ್ತಾ? ಎಂಬುವುದು ಪ್ರಶ್ನೆಯಾಗಿದೆ. ಈಗಾಗಲೇ ಈ ಕುರಿತಾಗಿ ಬೆಂಗಳೂರು ಮೆಟ್ರೋ ರೈಲು ನಿಗಮ ರಾಜ್ಯ ಸರ್ಕಾರಕ್ಕೆ ಮಾಹಿತಿಯನ್ನು ನೀಡಿದೆ. ಹೀಗಾಗಿ ಡಬಲ್ ಡೆಕ್ಕರ್ ವಿನ್ಯಾಸದ ಅಗತ್ಯ ಏನಿದೆ? ಎಂಬುವುದನ್ನು ಪ್ರಧಾನ ಮಂತ್ರಿ ಕಾರ್ಯಾಲಯ ಹಾಗೂ ಕೇಂದ್ರ ಸಚಿವಾಲಯಕ್ಕೆ ಮನವರಿಕೆ ಮಾಡಿಕೊಡಲು ರಾಜ್ಯ ಸರ್ಕಾರ ಯಾವ ಹೆಜ್ಜೆ ಇಡಲಿದೆ ಎಂಬುವುದು ಕುತೂಹಲ ಕೆರಳಿಸಿದೆ.

ಇದನ್ನೂ ನೋಡಿ : “ಮ್ಯಾಗ್ನೆಟ್ ಯೋಜನೆಗೆ ವಿರೋಧ – ಆಂದೋಲನವಾಗುತ್ತಿರುವ ಸರ್ಕಾರಿ ಶಾಲೆ ಉಳಿಸಿ ಹೋರಾಟ” Janashakthi Media

Donate Janashakthi Media

Leave a Reply

Your email address will not be published. Required fields are marked *