ಬೆಂಗಳೂರು: ರಾಜ್ಯದಲ್ಲಿ ನಡೆಯಲಿರುವ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು, ಯಾವುದೇ ಅರ್ಹ ಮತದಾರರು ಮತದಾನ ಪ್ರಕ್ರಿಯೆಯಿಂದ ವಂಚಿತರಾಗದಂತೆ ನೋಡಿಕೊಳ್ಳಲು ರಾಜ್ಯ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದೆ. ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ‘ಸಹಾಯ ಕೇಂದ್ರ’ಗಳನ್ನು ಆರಂಭಿಸಲು ಆದೇಶಿಸಲಾಗಿದೆ.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ (ಆದೇಶ ಸಂಖ್ಯೆ: RDPR 600 GPA 2026, ದಿನಾಂಕ: 20.06.2026) ಈ ಕುರಿತು ಅಧಿಕೃತ ಆದೇಶ ಹೊರಡಿಸಿದ್ದು, ಜನಸಾಮಾನ್ಯರಿಗೆ ಅಗತ್ಯ ದಾಖಲೆಗಳನ್ನು ತ್ವರಿತವಾಗಿ ಮತ್ತು ವಿಳಂಬವಿಲ್ಲದೆ ಒದಗಿಸುವುದು ಈ ಕೇಂದ್ರಗಳ ಮುಖ್ಯ ಉದ್ದೇಶವಾಗಿದೆ.
ಇದನ್ನೂ ಓದಿ: ವೇತನ ಬಾಕಿ, ಬದುಕು ಸಂಕಷ್ಟ: ಆಂಧ್ರದಲ್ಲಿ ಆರೋಗ್ಯ ಸಿಬ್ಬಂದಿಗಳ ಪ್ರತಿಭಟನೆ
ಈ ಸಹಾಯ ಕೇಂದ್ರಗಳನ್ನು ಆಯಾ ಪಂಚಾಯಿತಿಯ ‘ಬಾಪೂಜಿ ಸೇವಾ ಕೇಂದ್ರ’ದಲ್ಲಿ ಕಾರ್ಯನಿರ್ವಹಿಸುವ ಡಾಟಾ ಎಂಟ್ರಿ ಆಪರೇಟರ್ಗಳು ನಿರ್ವಹಿಸಲಿದ್ದಾರೆ. ಇದರ ಮೇಲ್ವಿಚಾರಣೆಯನ್ನು ಸಂಬಂಧಿತ ಗ್ರಾಮ ಪಂಚಾಯಿತಿಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO) ವಹಿಸಲಿದ್ದಾರೆ.
ಗ್ರಾಮ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆ ಪ್ರಕ್ರಿಯೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ, ಮತದಾರರಿಗೆ ಅಗತ್ಯ ದಾಖಲೆಗಳನ್ನು ಸಮಯಕ್ಕೆ ಸರಿಯಾಗಿ ತಲುಪಿಸುವುದು ಮತ್ತು ಯಾರೂ ಮತದಾನದಿಂದ ದೂರವಾಗದಂತೆ ನೋಡಿಕೊಳ್ಳುವುದು ಸರ್ಕಾರದ ಉದ್ದೇಶವಾಗಿದೆ.
ಈ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಸಹಾಯ ಕೇಂದ್ರಗಳನ್ನು ಸ್ಥಾಪಿಸುವ ಮೂಲಕ ಸೇವೆಗಳನ್ನು ಸುಗಮಗೊಳಿಸಲು ಸರ್ಕಾರ ಕ್ರಮ ಕೈಗೊಂಡಿದೆ.
ಇದನ್ನೂ ನೋಡಿ: ವಿದ್ಯುತ್ ಖಾಸಗೀಕರಣ ಆದರೆ ದುಬಾರಿ ಹೊರೆ ಗ್ಯಾರಂಟಿ! | ಟಾಟಾ ಪವರ್ಗೆ ಲೈಸೆನ್ಸ್ ಬೇಡ, ಆಕ್ಷೇಪಣೆ ಸಲ್ಲಿಸಿ
