ಬೆಂಗಳೂರು : ಎಲ್ಲಾ ಸಹಾಯಕ ಕಂದಾಯ ಅಧಿಕಾರಿ (ಎಆರ್ಒ) ಕಚೇರಿಗಳಲ್ಲಿ ಬಿಬಿಎಂಪಿ ವ್ಯಾಪ್ತಿಯ ಆಸ್ತಿ ಮಾಲೀಕರು ಇ- ಖಾತಾ ಪಡೆಯಲು ಆಗುತ್ತಿರುವ ತೊಂದರೆ ಬಗೆಹರಿಸಲು ಹೆಲ್ಸ್ ಡೆಸ್ಕ್ ತೆರೆಯಲಾಗುತ್ತಿದೆ. ಇ-ಖಾತಾ ಪಡೆಯಲು ಯಾವುದೇ ಅಂತಿಮ ಗಡುವು ಇಲ್ಲ. ಹೀಗಾಗಿ ಆತುರ ಹಾಗೂ ಆತಂಕವಿಲ್ಲದೆ ಖಾತಾ ಪಡೆಯಿರಿ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಕರೆ ನೀಡಿದ್ದಾರೆ.
ಇ-ಖಾತಾ ಬಗೆಗಿನ ಗೊಂದಲಗಳ ಬಗ್ಗೆ ಬಿಬಿಎಂಪಿ ಅಧಿಕಾರಿಗಳ ಜೊತೆ ಸಭೆ ನಡೆಸಿ ಚರ್ಚಿಸಿದ ಅವರು ಬಳಿಕ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದರು. ಬಿಬಿಎಂಪಿ ವ್ಯಾಪ್ತಿಯ ಕೆಲವು ಭಾಗದಲ್ಲಿ ಮಧ್ಯವರ್ತಿಗಳು ಇ-ಖಾತಾಗೆ ಸರ್ಕಾರ ಸರ್ಕಾರ ಸಮಯ ನಿಗದಿ ಮಾಡಿದೆ ಎಂದು ಜನರಲ್ಲಿ ಗೊಂದಲ ಸೃಷ್ಟಿಸಿ, ಇ-ಖಾತೆ ಮಾಡಿಸಿಕೊಡುವುದಾಗಿ ಜನರನ್ನು ಸುಲಿಗೆ ಮಾಡಿರುವ ಘಟನೆ ಗಮನಕ್ಕೆ ಬಂದಿದೆ.
ಇದನ್ನು ಓದಿ : ಪ್ಯಾನ್ ಕಾರ್ಡ್ ಗೆ ಆಧಾರ್ ಲಿಂಕ್ ವಿಳಂಬಕ್ಕೆ ದಂಡ ಕಟ್ಟಿದ ಕುಟುಂಬಗಳ ಬಿಪಿಲ್ ಕಾರ್ಡ್ ರದ್ದು ತಡೆ: ಸಿಪಿಐಎಂ ಒತ್ತಾಯ
ಆದರೆ, ಇ-ಖಾತಾ ಮಾಡಿಸಿಕೊಳ್ಳಲು ಸರ್ಕಾರ ಯಾವುದೇ ಸಮಯ ನಿಗದಿ ಮಾಡಿಲ್ಲ. ಹೀಗಾಗಿ ಸಾರ್ವಜನಿರಕರು ಗಾಬರಿಗೊಳಗಾಗದೆ, ಆತುರಪಡದೆ ತಮ್ಮ ಸಮಯ ನೋಡಿಕೊಂಡು ಇ-ಖಾತಾ ಮಾಡಿಸಿಕೊಳ್ಳಬಹುದು. ಊಹಾಪೋಹಗಳಿಗೆ ಕಿವಿಕೊಟ್ಟು ಆತಂಕಕ್ಕೆ ಒಳಗಾಗಬೇಡಿ ಎಂದು ಸ್ಪಷ್ಟಪಡಿಸಿದರು.
ನಕಲಿ ನೋಂದಣಿ ಪ್ರಕರಣಗಳನ್ನು ತಡೆವ ಇ-ಖಾತಾ ವ್ಯವಸ್ಥೆಯನ್ನು ಜಾರಿಗೆ ತರಲಾಗಿದೆ. ನಿವೇಶನಗಳನ್ನು ಮಾರುವ ಅಥವಾ ಕೊಳ್ಳುವ ಪ್ರಕ್ರಿಯೆಯಲ್ಲಿ ಮಾತ್ರ ಇ- ಖಾತಾ ಕಡ್ಡಾಯ ಮಾಡಲಾಗಿದೆ. ಅಲ್ಲದೆ, ಉಪ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ಅವರ ಸೂಚನೆ ಮೇರೆಗೆ ಪಾಲಿಕೆಯ ವಿಶೇಷ ಆಯುಕ್ತರ ಜೊತೆ ಚರ್ಚಿಸಿ ಇ-ಖಾತಾ ಪ್ರಕ್ರಿಯೆಯನ್ನೂ ಸರಳೀಕರಣಗೊಳಿಸಿ ಜನರಿಗೆ ಅನುಕೂಲ ಮಾಡಿಕೊಡಲು ಸೂಕ್ತ ಕ್ರಮ ಜರುಗಿಸಲಾಗಿದೆ ಎಂದರು.
ಇ-ಖಾತಾ ಪಡೆಯಲು ಸಾರ್ವಜನಿಕರು ಕಚೇರಿಗಳಿಗೆ ಬರುವ ಅಗತ್ಯ ಇಲ್ಲ. ಬದಲಾಗಿ ಮನೆಯಿಂದಲೇ ಇ-ಖಾತಾ ಡೌಗ್ಲೋಡ್ ಮಾಡಿಕೊಳ್ಳಬಹುದು. ಕಾವೇರಿ-2 ಹಾಗೂ ಬಿಬಿಎಂಪಿ ಸಹಯೋಗದಲ್ಲಿ ರೂಪಿಸಿರುವ ಬಿಬಿಎಂಪಿ ವೆಬ್ ಸೈಟ್ನಲ್ಲಿನ ಆಯ್ಕೆಗೆ ಹೋಗಿ ದಾಖಲೆಗಳನ್ನು ಅಪ್ಲೋಡ್ ಮಾಡಿ ಖಾತಾ ಪಡೆಯಬಹುದು ಎಂದು ತಿಳಿಸಿದರು.
ಇದನ್ನು ನೋಡಿ : ಐಸಿಡಿಎಸ್ ಯೋಜನೆ ಕಾಯ್ದೆಯಾಗಬೇಕು – ಪೂರ್ವ ಪ್ರಾಥಮಿಕ ಶಿಕ್ಷಣ ಮಕ್ಕಳ ಹಕ್ಕಾಗಬೇಕು – ವಕೀಲ ಮಂಜುನಾಥ್