ಜಾರ್ಖಂಡ್ ಮುಖ್ಯಮಂತ್ರಿಯಾಗಿ ಹೇಮಂತ್ ಸೊರೇನ್ ಪ್ರಮಾಣ ವಚನ

ರಾಂಚಿ: ಜಾರ್ಖಂಡ್ ಮುಕ್ತಿ ಮೋರ್ಚಾ(ಜೆಎಂಎಂ) ಕಾರ್ಯಕಾರಿ ಅಧ್ಯಕ್ಷ ಹೇಮಂತ್ ಸೊರೆನ್ ಅವರು ಮೂರನೇ ಬಾರಿ ಜಾರ್ಖಂಡ್ ಮುಖ್ಯಮಂತ್ರಿಯಾಗಿ ಗುರುವಾರ ಸಂಜೆ 5 ಗಂಟೆಗೆ ಪ್ರಮಾಣವಚನ ಸ್ವೀಕರಿಸಿದರು.

ಇಂದು ಸಂಜೆ ರಾಜಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ಜಾರ್ಖಂಡ್ ರಾಜ್ಯಪಾಲ ಸಿಪಿ ರಾಧಾಕೃಷ್ಣನ್ ಅವರು ಹೇಮಂತ್ ಸೊರೆನ್ ಅವರಿಗೆ ಪ್ರತಿಜ್ಞಾವಿಧಿ ಬೋಧಿಸಿದರು.ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಜೆಎಂಎಂ ಮುಖ್ಯಸ್ಥ ಶಿಬು ಸೊರೆನ್ ಕೂಡ ಉಪಸ್ಥಿತರಿದ್ದರು. ಇದಕ್ಕೂ ಮುನ್ನ ರಾಜ್ಯಪಾಲ ಸಿಪಿ ರಾಧಾಕೃಷ್ಣನ್ ಅವರು ಹೇಮಂತ್ ಸೊರೆನ್ ಅವರಿಗೆ ನೂತನ ಸರ್ಕಾರ ರಚಿಸಲು ಆಹ್ವಾನ ನೀಡಿದ್ದರು.

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಹೇಮಂತ್ ಸೋರೆನ್ ಅವರು ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ನಂತರ ಈ ಬೆಳವಣಿಗೆ ನಡೆದಿದೆ. ಈ ಮೂಲಕ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಸುಮಾರು 5 ತಿಂಗಳ ಬಳಿಕ ಜೈಲಿನಿಂದ ಬಿಡುಗಡೆಯಾಗಿರುವ ಜಾರ್ಖಂಡ್ ಮುಖ್ಯಮಂತ್ರಿಯಾಗಿ ಹೇಮಂತ್ ಸೊರೇನ್ ಇಂದು ಮತ್ತೊಮ್ಮೆ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಇದನ್ನೂ ಓದಿಹೇಮಂತ್‌ ಸೊರೇನ್‌ಗೆ ಜಾಮೀನು ಮಂಜೂರು

ಚಂಪೈ ಸೊರೆನ್ ಬುಧವಾರ ಜಾರ್ಖಂಡ್ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಮನಿ ಲಾಂಡರಿಂಗ್ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಹೇಮಂತ್ ಸೊರೆನ್ ಅವರು ಸರ್ಕಾರ ರಚಿಸಲು ಹಕ್ಕು ಮಂಡಿಸಿದರು. ಜೆಎಂಎಂ ನೇತೃತ್ವದ ಮೈತ್ರಿಕೂಟದ ನಿಯೋಗ ಬುಧವಾರ ರಾಜಭವನದಲ್ಲಿ ರಾಜ್ಯಪಾಲ ರಾಧಾಕೃಷ್ಣನ್ ಅವರನ್ನು ಭೇಟಿ ಮಾಡಿತು. ಹೇಮಂತ್ ಸೊರೆನ್ ನೇತೃತ್ವದ ನಿಯೋಗದಲ್ಲಿ ಕಾಂಗ್ರೆಸ್ ರಾಜ್ಯ ಘಟಕದ ಅಧ್ಯಕ್ಷ ರಾಜೇಶ್ ಠಾಕೂರ್, ಆರ್‌ಜೆಡಿ ಸಚಿವ ಸತ್ಯಾನಂದ ಭೋಕ್ತಾ ಮತ್ತು ಸಿಪಿಐ(ಎಂಎಲ್)-ಎಲ್ ಶಾಸಕ ವಿನೋದ್ ಸಿಂಗ್ ಇದ್ದರು. ಹೇಮಂತ್ ಸೋರೆನ್ ಅವರ ಪತ್ನಿ ಮತ್ತು ಗಂಡೆ ಶಾಸಕಿ ಕಲ್ಪನಾ ಸೋರೆನ್ ಕೂಡ ಈ ನಿಯೋಗದ ಭಾಗವಾಗಿದ್ದರು.

ಜಾರ್ಖಂಡ್ ಮುಕ್ತಿ ಮೋರ್ಚಾ ನಾಯಕ ಅವರು ಜನವರಿ 31 ರಂದು ಭೂ ಹಗರಣಕ್ಕೆ ಸಂಬಂಧಿಸಿದ ಮನಿ ಲಾಂಡರಿಂಗ್ ಪ್ರಕರಣದಲ್ಲಿ ಇಡಿಯಿಂದ ಬಂಧಿಸುವ ಸ್ವಲ್ಪ ಮೊದಲು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಜೂನ್ 28ರಂದು ಸೋರೆನ್ ಜೈಲಿನಿಂದ ಬಿಡುಗಡೆಗೊಂಡರು. ಸುಮಾರು 5 ತಿಂಗಳ ನಂತರ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಹೈಕೋರ್ಟ್ ಅವರಿಗೆ ಜಾಮೀನು ನೀಡಿತು.

Donate Janashakthi Media

Leave a Reply

Your email address will not be published. Required fields are marked *