ಹೈಕಮಾಂಡ್ ಸೂಚನೆ: ಸಚಿವ ಸ್ಥಾನಕ್ಕೆ ರಾಜಣ್ಣ ರಾಜೀನಾಮೆ?!

ಬೆಂಗಳೂರು: ಹೈಕಮಾಂಡ್ ನೀಡುವ ಸೂಚನೆ ಹಿನ್ನೆಲೆಯಲ್ಲಿ ಆಗಸ್ಟ್‌ 11ರಂದು ಸಚಿವ ಸ್ಥಾನಕ್ಕೆ ಸಹಕಾರ ಸಚಿವ ರಾಜಣ್ಣ ರಾಜೀನಾಮೆ ನೀಡಿಲಿದ್ದಾರೆ ಎನ್ನಲಾಗಿದೆ. ಸಿಎಂ ಸಿದ್ದರಾಮಯ್ಯ ರ ಆತ್ಮೀಯ ಬಳಗದಲ್ಲಿ ಗುರುತಿಸಿಕೊಂಡಿರುವ ಅವರು ಸದ್ಯ ತುಮಕೂರು ಜಿಲ್ಲೆ ಮಧುಗಿರಿ ವಿಧಾನಸಭಾದ ಶಾಸಕರಾಗಿದ್ದಾರೆ.

ಹೈಕಮಾಂಡ್ ಸೂಚನೆ ಹಿನ್ನಲೆ ಅವರು ರಾಜೀನಾಮೆ ನೀಡಿಲಿದ್ದಾರೆ ಎನ್ನಲಾಗಿದೆ.

ಕೆಲ ದಿನಗಳ ಹಿಂದೆ ಹೈಕಮಾಂಡ್‌ ಜೊತೆಗೆ ನೇರವಾಗಿ ಸಿಟ್ಟಾಗಿದ್ದ ರಾಜಣ್ಣ ಹೈಕಮಾಂಡ್‌ ನಾಯಕರ ವಿರುದ್ದವೇ ಮಾತನಾಡಿದ್ದು ಈಗ ಅವರ ರಾಜೀನಾಮೆಗೆ ಕಾರಣ ಎನ್ನಲಾಗಿದೆ. ಸದ್ಯ ಸಿಎಂ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಲಿರುವ ಅವರು ತಮ್ಮ ರಾಜೀನಾಮೆಯನ್ನು ಸಲ್ಲಿಸಲಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ಪರ್ಯಾಯ ಶಕ್ತಿಯಾಗಿ ದುಡಿಯುವ ಜನತೆ – ಮೀನಾಕ್ಷಿ ಸುಂದರಂ

ಸಹಕಾರಿ ಕ್ಷೇತ್ರದಲ್ಲಿ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದ ರಾಜಣ್ಣ, ಈ ಹಿಂದೆ ಭಾರತದ ರಾಷ್ಟ್ರೀಯ ಕೃಷಿ ಸಹಕಾರಿ ಮಾರುಕಟ್ಟೆ ಒಕ್ಕೂಟದ ನಿರ್ದೇಶಕರಾಗಿ ಮತ್ತು ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ಲಿಮಿಟೆಡ್‌ನ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ರಾಜಣ್ಣ 1972 ರಿಂದ ಸಹಕಾರಿ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದರು.

ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನ ಕ್ಯಾತಸಂದ್ರ ತಾಲ್ಲೂಕು ಘಟಕದ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ ಅದೇ ಅವಧಿಯಲ್ಲಿ ಅವರ ಸಾರ್ವಜನಿಕ ಜೀವನ ಪ್ರಾರಂಭವಾಯಿತು. 1976 ರಲ್ಲಿ, ಅವರು ಕ್ಯಾತಸಂದ್ರ ನಗರ ಪಂಚಾಯತ್ ಅಧ್ಯಕ್ಷರಾಗಿ ಆಯ್ಕೆಯಾದರು, 1980 ಮತ್ತು 1984 ರ ನಡುವೆ ತುಮಕೂರು ಜಿಲ್ಲಾ ಘಟಕದ ಐಎನ್‌ಸಿಯ ಯುವ ಕಾಂಗ್ರೆಸ್ ವಿಭಾಗದ ಮುಖ್ಯಸ್ಥರಾಗಿದ್ದರು.

ಕೆಲವು ದಿನಗಳ ಹಿಂದೆ ತಮ್ಮನ್ನು ‘ಮಧುಬಲೆ’ಗೆ (ಹನಿಟ್ರ್ಯಾಪ್‌) ಕೆಡವಲು ಯತ್ನಿಸಿದ ಪ್ರಕರಣದ ಕುರಿತು ಉನ್ನತಮಟ್ಟದ ತನಿಖೆ ನಡೆಸುವಂತೆ ಸಹಕಾರ ಸಚಿವ ಕೆ.ಎನ್. ರಾಜಣ್ಣ ಅವರು ಗೃಹ ಸಚಿವ ಜಿ. ಪರಮೇಶ್ವರ ಅವರಿಗೆ ಮನವಿ ಸಲ್ಲಿಸಿದರು. ಆದರೆ ತನಿಖಾ ತಂಡ ಕೆ.ಎನ್. ರಾಜಣ್ಣ ಅವರ ಆರೋಪ ಸುಳ್ಳು ಅಂತ ತನಿಖಾ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿತ್ತು.

ಇದನ್ನೂ ನೋಡಿ: ಯುವಜನರಲ್ಲಿ ಹೆಚ್ಚುತ್ತಿರುವ ಹೃದಯಾಘಾತಗಳು ಮತ್ತು ಪರಿಹಾರ Janashakthi Media | DYFI

Donate Janashakthi Media

Leave a Reply

Your email address will not be published. Required fields are marked *