ಬೆಂಗಳೂರು: ಬಿಕ್ಲು ಶಿವು ಅಲಿಯಾಸ್ ಶಿವಕುಮಾರ್ ಕೊಲೆ ಪ್ರಕರಣದಲ್ಲಿ ಮಾಜಿ ಸಚಿವ, ಕೆ.ಆರ್. ಪುರದ ಶಾಸಕ ಬೈರತಿ ಬಸವರಾಜ ರಿಗೆ ಜಾಮೀನು ನೀಡಲು ಹೈಕೋರ್ಟ್ನ ನ್ಯಾಯಮೂರ್ತಿ ಸುನೀಲ್ ದತ್ತ ಯಾದವ್ ರಿದ್ದ ನ್ಯಾಯಪೀಠ ಎರಡನೇ ಬಾರಿ ನಿರಾಕರಿಸಿದೆ.
ಬಿಕ್ಲು ಶಿವಕುಮಾರ್ ಕೊಲೆ ಪ್ರಕರಣದಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ಐದನೇ ಆರೋಪಿಯಾಗಿರುವ ಬೈರತಿ ಬಸವರಾಜ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿ ಈ ಆದೇಶ ನೀಡಿದೆ.
ಈ ಪ್ರಕರಣ ಸಂಬಂಧ ಸಿಐಡಿ ಪೊಲೀಸರಿಂದ ಬಸವರಾಜ ಅವರಿಗೆ ಬಂಧನ ಮಾಡುವ ಸಾಧ್ಯತೆಯಿದ್ದು, ಮತ್ತೆ ಬಂಧನದ ಭೀತಿ ಎದುರಾಗಿದೆ.
ಇದನ್ನೂ ಓದಿ: ಕಸಬಾ ಬೆಂಗ್ರೆ| ಯುವಜನರಿಂದ ರಕ್ತದಾನ ಶಿಬಿರ
ಅರ್ಜಿಯ ಸಂಬಂಧ ಈ ಹಿಂದೆ ನಡೆದ ವಿಚಾರಣೆ ವೇಳೆ ಸಿಐಡಿ ಪರ ವಕೀಲರು, ಅರ್ಜಿದಾರರು ನ್ಯಾಯಾಲಯಕ್ಕೆ ತಪ್ಪು ಮಾಹಿತಿ ನೀಡಿ ನಿರೀಕ್ಷಣಾ ಜಾಮೀನು ಪಡೆದುಕೊಂಡಿದ್ದಾರೆ. ಬಿಕ್ಲು ಶಿವು ಕೊಲೆ ಪ್ರಕರಣದಲ್ಲಿ ಅರ್ಜಿದಾರರ ಪಾತ್ರವಿದೆ. ಅಲ್ಲದೆ, ಈ ಪ್ರಕರಣದಲ್ಲಿ ಸ್ಥಳೀಯ ಪೊಲೀಸರ ನಿರ್ಲಕ್ಷ್ಯವಿದೆ. ಆದ್ದರಿಂದ ಪ್ರಕರಣದ ತನಿಖೆ ನಡೆಯಬೇಕಾದಲ್ಲಿ ಅರ್ಜಿದಾರರನ್ನು ಬಂಧಿಸಬೇಕಾಗಿದೆ. ಹೀಗಾಗಿ ನಿರೀಕ್ಷಣಾ ಜಾಮೀನು ರದ್ದುಪಡಿಸಬೇಕು ಎಂದು ಕೋರಿದರು.
ಇದಕ್ಕೆ ಆಕ್ಷೇಪಿಸಿದ ಅರ್ಜಿದಾರರ ಪರ ವಕೀಲರು, ಅರ್ಜಿದಾರರ ವಿರುದ್ಧ ರಾಜಕೀಯ ದ್ವೇಷದಿಂದ ತನಿಖಾಧಿಕಾರಿಗಳು ಪ್ರಕರಣ ದಾಖಲಿಸಿದ್ದಾರೆ. ತನಿಖಾಧಿಕಾರಿಗಳು ಕರೆದಾಗ ವಿಚಾರಣೆಗೆ ಹಾಜರಾಗಿದ್ದಾರೆ. ಪ್ರಕರಣವನ್ನು ಸಿಐಡಿಗೆ ವರ್ಗಾವಣೆ ಮಾಡಿದ ಬಳಿಕ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಿಲ್ಲ. ಅರ್ಜಿದಾರರ ವಿರುದ್ಧ ಆರೋಪ ಪಟ್ಟಿಯನ್ನು ಸಲ್ಲಿಸಿಲ್ಲ. ಅರ್ಜಿದಾರರು ಶಾಸಕರಾಗಿದ್ದು, ವಿಚಾರಣೆಗೆ ಎಲ್ಲ ರೀತಿಯಲ್ಲಿಯೂ ಸಹಕರಿಸಲು ಸಿದ್ಧರಿದ್ದಾರೆ. ಆದ್ದರಿಂದ ನಿರೀಕ್ಷಣಾ ಜಾಮೀನು ಮಂಜೂರು ಮಾಡಬೇಕು ಎಂದು ಕೋರಿದರು.
ಅರ್ಜಿಯ ವಿಚಾರಣೆ ನಡೆಸಿದ್ದ ನ್ಯಾಯಪೀಠ, ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಳಿಸಿದ ವಿಚಾರಣಾ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಬಹುದು ಎಂದು ತಿಳಿಸಿತ್ತು. ವಿಚಾರಣಾ ನ್ಯಾಯಾಲಯ ಕೂಡ ನಿರೀಕ್ಷಣಾ ಜಾಮೀನು ವಜಾಗೊಳಿಸಿತ್ತು.
ಇದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ನ ರಜಾಕಾಲದ ಪೀಠ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿತ್ತು. ಇದನ್ನು ಪ್ರಶ್ನಿಸಿ ಸಿಐಡಿ ಮಧ್ಯಂತರ ಅರ್ಜಿ ಸಲ್ಲಿಸಿ ಮಧ್ಯಂತರ ನಿರೀಕ್ಷಣಾ ಜಾಮೀನು ರದ್ದು ಮಾಡಲು ಕೋರಿದ್ದರು.
ಇದನ್ನೂ ನೋಡಿ: ಇದು ಒಂದು ದಿನದ ಮುಷ್ಕರವಲ್ಲ – ಕಾರ್ಪೊರೇಟ್‌ಪರ ಆಡಳಿತಕ್ಕೆ ಜನರ ಎಚ್ಚರಿಕೆ! Janashakthi Media
