ಬೆಂಗಳೂರು: ಅತ್ಯಾಚಾರಕ್ಕೆ ತುತ್ತಾಗಿ ಗರ್ಭಧರಿಸಿದ್ದ 13 ವರ್ಷದ ಬಾಲಕಿಯ ಗರ್ಭಪಾತಕ್ಕೆ ಕರ್ನಾಟಕ ಹೈಕೋರ್ಟ್ ಈಚೆಗೆ ಅನುಮತಿಸಿದೆೆ ಎಂದು ಬಾರ್& ಬೆಂಚ್ ವರದಿ ಮಾಡಿದೆ. ಅತ್ಯಾಚಾರ
ವಾಣಿ ವಿಲಾಸ ಆಸ್ಪತ್ರೆ ವೈದ್ಯರಿಗೆ 13 ವರ್ಷದ ಪುತ್ರಿಗೆ ಗರ್ಭಪಾತ ನಡೆಸುವಂತೆ ನಿರ್ದೇಶನ ನೀಡಬೇಕು ಎಂದು ಕೋರಿ ಸಂತ್ರಸ್ತ ತಾಯಿ ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಹೇಮಂತ ಚಂದನಗೌಡರ್ ಏಕಸದಸ್ಯ ಪೀಠವು ಆದೇಶ ಮಾಡಿ, ಅರ್ಜಿ ಇತ್ಯರ್ಥಪಡಿಸಿದೆ. ಅತ್ಯಾಚಾರ
ಅತ್ಯಾಚಾರಕ್ಕೆ ಗುರಿಯಾಗಿ 28 ವಾರಗಳ ಗರ್ಭಧರಿಸಿರುವ 13 ವರ್ಷದ ಬಾಲಕಿಗೆ ಗರ್ಭಪಾತಕ್ಕೆ ಅವಕಾಶ ಮಾಡಿಕೊಟ್ಟಿರುವ ನ್ಯಾಯಾಲಯವು ವೈದ್ಯಕೀಯ ಗರ್ಭಪಾತ ಮಾಪನ ಅಧಿನಿಯಮ-1971ರ ನಿಯಮಗಳಂತೆ ಅಪ್ರಾಪ್ತಯ ಗರ್ಭಪಾತ ಪಕ್ರಿಯೆ ಕೈಗೊಳ್ಳುವಂತೆ ಬೆಂಗಳೂರಿನ ವಾಣಿ ವಿಲಾಸ ಆಸ್ಪತ್ರೆಯ ಪುಧಾನ ಸರ್ಜನ್‌ಗೆ ನಿರ್ದೇಶನ ನೀಡುವಂತೆ ರಾಜ್ಯ ಸರ್ಕಾರಕ್ಕೆ ಆದೇಶಿಸಿದ. ಅಲ್ಲದೇ ಸರ್ಕಾರದ ವೆಚ್ಚದಲ್ಲಿ ಗರ್ಭಪಾತ ಪ್ರಕ್ರಿಯೆ ನಡೆಯಬೇಕು ಎಂದಿದೆ.
ತಜ್ಞ ವೈದ್ಯರ ವೈದ್ಯಕೀಯ ಮಂಡಳಿಯ ವರದಿ ಆಧರಿಸಿ ಹೈಕೋರ್ಟ್ ಈ ಆದೇಶ ನೀಡಿದೆ. ಸಂತ್ರಸ್ತೆಯ ಜೀವಕ್ಕೆ ಹಾನಿಯಾಗದಂತೆ ಗರ್ಭಪಾತ ಮಾಡುವ ಸಂಬಂಧ ವೈದ್ಯರಿಂದ ಅಗತ್ಯ ಪರೀಕ್ಷೆಗಳ ಬಳಿಕ ನಿರ್ಧರಿಸಿ ಕ್ರಮಕ್ಕೆ ಮುಂದಾಗಬೇಕು. ಈ ಪುಕ್ರಿಯೆಯಲ್ಲಿ ವೈದ್ಯಕೀಯ ಗರ್ಭಪಾತ ನಿಯಮಗಳು 1971ರ ಪುಕಾರ ವೈದ್ಯಕೀಯ ಗರ್ಭಪಾತದ ಕಾರ್ಯದ ಚಿಕಿತ್ಸೆಯನ್ನು ಸಂತ್ರಸ್ತೆಯಿಂದ ಹಣ ಪಡೆದುಕೊಳ್ಳದೆ ಸರ್ಕಾರಿ ವೆಚ್ಚದಲ್ಲಿ ವಾಣಿ ವಿಲಾಸ ಆಸ್ಪತ್ರೆಯಲ್ಲಿ ಕೈಗೊಳ್ಳಬೇಕು ಎಂದು ಪೀಠ ಆದೇಶಿಸಿದೆ.
ಇದನ್ನೂ ಓದಿ: ಶ್ರೀನಿವಾಸಪುರ : ಶಾಲೆಯನ್ನೇ ಮನೆಯಾಗಿಸಿಕೊಂಡ ಖಾಸಗಿ ವ್ಯಕ್ತಿ
ಗರ್ಭಪಾತ ಮಾಡಿದ ಭ್ರೂಣವನ್ನು ಡಿಎನ್ಎ ಪರೀಕ್ಷೆಗೆ ಅನುಕೂಲವಾಗುವಂತೆ ಸಂರಕ್ಷಿಸಿ ಅದರ ಅಂಗಾಂಶ ಮಾದರಿಯನ್ನು ಡಿಎನ್ಎ ಪರೀಕ್ಷೆಗಾಗಿ ಬೆಂಗಳೂರಿನ ವಿಧಿ ವಿಜ್ಞಾನ ಪುಯೋಗಾಲಯಕ್ಕೆ ರವಾನಿಸಬೇಕು. ಸಂತ್ರಸ್ತೆಗೆ ಮನೆಯಿಂದ ಆಸ್ಪತ್ರೆಗೆ ಹೋಗಿ ಬರುವುದಕ್ಕೆ ವಾಹನ ವ್ಯವಸ್ಥೆ ಮಾಡಬೇಕು ಎಂದು ಚಂದ್ರಾ ಲೇಔಟ್ ಪೊಲೀಸರಿಗೆ ಪೀಠ ನಿರ್ದೇಶನ ನೀಡಿದೆ.
ಗರ್ಭಪಾತ ಪಕ್ರಿಯೆಗೆ ಅರ್ಜಿದಾರರು ಅಥವಾ ಕುಟುಂಬದವರಿಂದ ಯಾವುದೇ ವೆಚ್ಚ ಪಡೆದುಕೊಳ್ಳಬಾರದು. ಸಂತ್ರಸ್ತೆಯ ವೈದ್ಯಕೀಯ ಚಿಕಿತ್ಸೆ ಹಾಗೂ ಮುಂದಿನ ಆರೋಗ್ಯ ಸುಧಾರಣೆ ನಿರ್ವಹಣೆಗೆ ಬೆಂಗಳೂರು ನಗರ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರವು ಸಂತ್ರಸ್ತಗೆ ಮೂರು ಲಕ್ಷ ರೂಪಾಯಿ ಪರಿಹಾರ ಪಾವತಿಸಬೇಕು ಎಂದು ಪೀಠ ನಿರ್ದೇಶನ ನೀಡಿದೆ.
ಪುಕರಣಕ್ಕೆ ಸಂಬಂಧಿಸಿದ ನ್ಯಾಯಾಲಯದ ಆದೇಶವನ್ನು ಪಾಲಿಸಿದ ಬಗ್ಗೆ, ಎರಡು ವಾರಗಳಲ್ಲಿ ವರದಿ ನೀಡುವಂತೆ ಚಂದ್ರಾ ಲೇಔಟ್ ಪೊಲೀಸರು, ವಾಣಿ ವಿಲಾಸ ಆಸ್ಪತ್ರೆ ವೈದ್ಯಾಧಿಕಾರಿ, ಮಕ್ಕಳ ಕಲ್ಯಾಣ ಸಮಿತಿ ಅಧಿಕಾರಿಗಳಿಗೆ ಪೀಠ ಸೂಚಿಸಿದೆ.
ಸುಮಾರು 13 ವರ್ಷದ ಅಪ್ರಾಪ್ತ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿ ಗರ್ಭಿಣಿಯಾಗಿದ್ದರು. ಈ ವಿಚಾರ ಗೊತ್ತಾದ ತಕ್ಷಣ ಆಕೆಯ ತಾಯಿ ಆರೋಪಿಗಳ ವಿರುದ್ಧ ಪೋಕ್ಸೋ ಕಾಯಿದೆಯಡಿ ದೂರು ದಾಖಲಿಸಿದ್ದರು. ಸಂತ್ರಸ್ತೆಗೆ ಗರ್ಭಪಾತ ನಡೆಸಲು ವಾಣಿವಿಲಾಸ ಆಸ್ಪತ್ರೆಗೆ ನಿರ್ದೇಶನ ನೀಡಬೇಕು ಮತ್ತು ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮಕ್ಕಾಗಿ ಭ್ರೂಣವನ್ನು ಡಿಎನ್ಎ ಪರೀಕ್ಷೆಗಾಗಿ ಸಂಗ್ರಹ ಮಾಡಲು ಸೂಚನೆ ನೀಡಬೇಕು ಎಂದು ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದರು.
ಅದರಂತೆ ಸಂತ್ರಸ್ತೆಗೆ ಗರ್ಭಪಾತ ಮಾಡುವ ಸಂಬಂಧ ವಾಣಿ ವಿಲಾಸ ಆಸ್ಪತ್ರೆಯ ವೈದ್ಯರ ವೈದ್ಯಕೀಯ ಮಂಡಳಿ ರಚನೆ ಮಾಡಿದ್ದು, ಸಂತ್ರಸ್ತ ಪರಿಶೀಲಿಸಿದ್ದ ಮಂಡಳಿ ಮುಚ್ಚಿದ ಲಕೋಟೆಯಲ್ಲಿ ವರದಿಯನ್ನು ಸಲ್ಲಿಸಿತ್ತು. ವರದಿಯನ್ನು ಪರಿಶೀಲಿಸಿ ಪೀಠ ನಿರ್ದೇಶನ ನೀಡಿದ.
ಇದನ್ನೂ ನೋಡಿ: ಮರಕುಂಬಿ ಪ್ರಕರಣದ ತೀರ್ಪು :ನ್ಯಾಯಾಂಗದ ಮೇಲಿನ ನಂಬಿಕೆಯನ್ನು ಉಳಿಸಿದೆ – ಆರ್ ಕೆ ದೇಸಾಯಿ Janashakthi Media