ಬೆಂಗಳೂರು: ಹುಬ್ಬಳ್ಳಿಯಲ್ಲಿ ನಡೆದ ಐದು ವರ್ಷದ ಬಾಲಕಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಆರೋಪಿ, ಪೊಲೀಸ್ ಎನ್‌ಕೌಂಟರ್‌ಗೆ ಬಲಿಯಾಗಿರುವ ಬಿಹಾರ ಮೂಲದ ವಲಸೆ ಕಾರ್ಮಿಕ ರಿತೇಶ್ ಕುಮಾರ್ ಮೃತದೇಹವನ್ನು ಸಮಾಧಿ ಮಾಡಲು ಹೈಕೋರ್ಟ್ ಅನುಮತಿ ನೀಡಿದೆ. ಬಾಲಕಿ
ಮೃತದೇಹ ದಹನ ಮಾಡದಂತೆ ಹಾಗೂ ಮೃತದೇಹವನ್ನು ಸಂರಕ್ಷಿಸಿಸುವಂತೆ ನಿರ್ದೇಶನ ಕೋರಿ ಪಿಯುಸಿಎಲ್ ಸಂಘಟನೆ ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ಮುಖ್ಯ ನ್ಯಾಾಯಮೂರ್ತಿ ಎನ್.ವಿ. ಅಂಜಾರಿಯಾ ಹಾಗೂ ನ್ಯಾ. ಕೆ.ವಿ. ಅರವಿಂದ್ ರಿದ್ದ ವಿಭಾಗೀಯ ಪೀಠ ವಿಚಾರಣೆ ನಡೆಸಿತು. ಈ ವೇಳೆ ಪ್ರಕರಣದ ಬಗ್ಗೆ ಶುಕ್ರವಾರ ಸಮಗ್ರ ಆದೇಶ ಹೊರಡಿಸಲಾಗುವುದು ಎಂದು ಹೇಳಿದೆ.
ಇದನ್ನೂ ಓದಿ: ಬಿಬಿಎಂಪಿಯ ಶಿಸ್ತು ಕ್ರಮಕ್ಕೆ ಜಲಮಂಡಳಿ ಮತ್ತು ಬೆಸ್ಕಾಂ ಸಾಥ್
ವಿಚಾರಣೆ ವೇಳೆ ಅಡ್ವೋಕೇಟ್ ಜನರಲ್ ಶಶಿ ಕಿರಣ್ ಶೆಟ್ಟಿ, ಮೃತದೇಹದ ಸಮಾಧಿ ಮಾಡಲು ಅನುಮತಿ ಕೊಡಬೇಕು ಎಂದು ಮನವಿ ಮಾಡಿದರು. ಹಾಗಾಗಿ ಮೃತದೇಹವನ್ನು ಸಮಾಧಿ ಮಾಡಲು ನ್ಯಾಯಾಲಯ ಅನುಮತಿ ನೀಡಿದೆ. ಜೊತೆಗೆ ಘಟನೆ ನಂತರ ಪೋಕ್ಸೋ ಕಾಯ್ದೆಯಡಿ ಹಾಗೂ ಎನ್‌ಕೌಂಟರ್‌ಗೆ ಸಂಬಂಧಿಸಿದಂತೆ ದಾಖಲಾಗಿರುವ ಎರಡೂ ಎಫ್‌ಐಆರ್‌ಗಳ ಇಂಗ್ಲಿಷ್ ಅನುವಾದದ ಪ್ರತಿಯನ್ನು ಸಲ್ಲಿಸುವಂತೆ ಸರ್ಕಾರಕ್ಕೆ ಸೂಚಿಸಿದೆ.
ಇದನ್ನೂ ನೋಡಿ: ಚಾಮರಾಜನಗರಕ್ಕೆ ಬರುವುದರಿಂದ ಅಧಿಕಾರ ಮತ್ತಷ್ಟು ಗಟ್ಟಿಯಾಗ್ತಿದೆ – ಸಿಎಂ ಸಿದ್ದರಾಮಯ್ಯ Janashakthi Media