ಕಲಬುರಗಿ| ಆರ್‌ಎಸ್ಎಸ್ ಪಥಸಂಚಲನಕ್ಕೆ ಷರತ್ತುಬದ್ಧ ಅನುಮತಿ ನೀಡಿದ ಹೈಕೋರ್ಟ್‌

ಕಲಬುರಗಿ: ಕರ್ನಾಟಕ ಹೈಕೋರ್ಟ್‌ನ ಕಲಬುರಗಿ ಪೀಠವು, ಜಿಲ್ಲೆಯ ಚಿತ್ತಾಪುರದಲ್ಲಿ ಆರ್‌ಎಸ್ಎಸ್ ನಡೆಸಲು ಉದ್ದೇಶಿಸಿದ್ದ ಪಥಸಂಚಲನಕ್ಕೆ ಷರತ್ತುಬದ್ಧ ಅನುಮತಿ ನೀಡಿದೆ. ಇದರಿಂದ ತೀವ್ರ ಪ್ರತಿಷ್ಠೆಯ ವಿಷಯವಾಗಿದ್ದ ಚಿತ್ತಾಪುರ ಆರ್‌ಎಸ್‌ಎಸ್ ಪಥಸಂಚಲನಕ್ಕೆ ಕೊನೆಗೂ ಮುಹೂರ್ತ ‌ನಿಗದಿಯಾಗಿದೆ.

ನವೆಂಬರ್ 16ರ‌ ಭಾನುವಾರ ಮಧ್ಯಾಹ್ನ 3 ಗಂಟೆಯಿಂದ ಸಂಜೆ 5.30ರ ತನಕ ಗಣವೇಷಧಾರಿಗಳ ಪಥಸಂಚಲನ‌ಕ್ಕೆ ಹೈಕೋರ್ಟ್ ಅವಕಾಶ ನೀಡಿದೆ.

ಇದನ್ನೂ ಓದಿ: ಕುಷ್ಟಗಿ ತಾಲೂಕಿನ ಎಲ್ಲಾ ಹಳ್ಳಿಗಳಿಗೆ ಸಮರ್ಪಕವಾಗಿ ಬಸ್ ಬಿಡಲು ಆಗ್ರಹ: ಎಸ್.ಎಫ್.ಐ ಪ್ರತಿಭಟನೆ

ಈ ಸಂಬಂಧ ಅರ್ಜಿ‌ ವಿಚಾರಣೆ ನಡೆಸಿದ ಕಲಬುರಗಿ ಹೈಕೋರ್ಟ್ ‌ಪೀಠದ ನ್ಯಾಯಮೂರ್ತಿ ಎಂ.ಜಿ.ಎಸ್ ಕಮಲ್ ಅವರಿದ್ದ ಏಕ ಸದಸ್ಯ ನ್ಯಾಯಪೀಠವು, ‘ಪಥಸಂಚಲನದಲ್ಲಿ 300 ಮಂದಿ ಗಣವೇಷಧಾರಿಗಳು ಹಾಗೂ 50 ಮಂದಿ ಘೋಷ್ ವೃಂದಕ್ಕೆ ಅವಕಾಶ ನೀಡಲಾಗಿದೆ’ ಎಂದು ಆದೇಶ ನೀಡಿ ಅರ್ಜಿ‌ ಇತ್ಯರ್ಥಗೊಳಿಸಿದರು.

ಕಳೆದ ಅಕ್ಟೋಬರ್ 19ರಂದು ಚಿತ್ತಾಪುರದಲ್ಲಿ ಆರ್ ಎಸ್ ಎಸ್ ಪಥಸಂಚಲನ ನಡೆಸಲು ಅನುಮತಿ ಕೋರಿತ್ತು. ಆದರೆ, ಇನ್ನೆರಡು ಸಂಘಟನೆಗಳು ಅದೇ ದಿನ ಅನುಮತಿ ‌ಕೋರಿದ್ದರಿಂದ ಚಿತ್ತಾಪುರ ತಹಶೀಲ್ದಾರ್ ಅನುಮತಿ ‌ನಿರಾಕರಿಸಿದ್ದರು. ಅದನ್ನು ಪ್ರಶ್ನಿಸಿ ಆರ್‌ಎಸ್‌ಎಸ್ ಜಿಲ್ಲಾ ಸಂಘಚಾಲಕ ಅಶೋಕ ಪಾಟೀಲ ಹೈಕೋರ್ಟ್‌ ಮೊರೆಹೋಗಿದ್ದರು.

ಇದನ್ನೂ ನೋಡಿ: ಜ್ಞಾನ ಸಾಹಿತ್ಯಕ್ಕೆ ನಿರಂಜನರ ಕೊಡುಗೆ – ಎಂ.ಜಿ.ಹೆಗಡೆ Janashakthi Media

Donate Janashakthi Media

Leave a Reply

Your email address will not be published. Required fields are marked *